ಹೊಸಕೋಟೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಳೆ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆ

ಪಕ್ಷ ಬಿಟ್ಟು ಬಂದವರಿಗೆ ಬಿಜೆಪಿ ಮಣೆ ಹಾಕುತ್ತಿದೆ ಎಂದು ಈ ಹಿಂದೆಯೇ ಬಹಿರಂಗವಾಗಿ  ಅಸಮಾಧಾನ ಹೊರಹಾಕಿದ್ದ ಶರತ್ ಬಚ್ಚೇಗೌಡ ಪಕ್ಷ ತೊರೆಯುವ ಸೂಚನೆಯನ್ನು ನೀಡಿದ್ದರು. ಅದರಂತೆ ಇದೀಗ ನಾಳೆ ಬಂಡಾಯ ಅಭ್ಯರ್ಥಿಯಾಗಿ ಅವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

HR Ramesh | news18-kannada
Updated:November 13, 2019, 4:09 PM IST
ಹೊಸಕೋಟೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಳೆ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆ
ಶರತ್​ ಬಚ್ಚೇಗೌಡ
  • Share this:
ಹೊಸಕೋಟೆ: ಬಿಜೆಪಿ ಮುಖಂಡರಾಗಿದ್ದ ಶರತ್ ಬಚ್ಚೇಗೌಡ ಅವರು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ಬಿಜೆಪಿಗೆ ಮೊದಲ ಬಂಡಾಯ ಎದುರಾದಂತೆ ಆಗಿದೆ.

ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂಕೋರ್ಟ್​ ಇಂದು ತೀರ್ಪು ನೀಡಿದೆ. ಹೀಗಾಗಿ ಹೋಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರಿಗೆ ಟಿಕೆಟ್ ನೀಡಲಿದೆ. ಪಕ್ಷ ಬಿಟ್ಟು ಬಂದವರಿಗೆ ಬಿಜೆಪಿ ಮಣೆ ಹಾಕುತ್ತಿದೆ ಎಂದು ಈ ಹಿಂದೆಯೇ ಬಹಿರಂಗವಾಗಿ  ಅಸಮಾಧಾನ ಹೊರಹಾಕಿದ್ದ ಶರತ್ ಬಚ್ಚೇಗೌಡ ಪಕ್ಷ ತೊರೆಯುವ ಸೂಚನೆಯನ್ನು ನೀಡಿದ್ದರು. ಅದರಂತೆ ಇದೀಗ ನಾಳೆ ಬಂಡಾಯ ಅಭ್ಯರ್ಥಿಯಾಗಿ ಅವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಶರತ್ ಅವರಿಗೆ ಜೆಡಿಎಸ್​ ಬೆಂಬಲ ಸೂಚಿಸಿದೆ ಬಹುತೇಕ ಉಪಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿಗೆ ಬಂಡಾಯದ ಕಾವು ಎದುರಾಗಲಿದೆ.

ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಮತ್ತು ಬಚ್ಚೇಗೌಡ ಕುಟುಂಬ ಮಧ್ಯೆ ಟಿಕೆಟ್ ವಿಚಾರವಾಗಿ ವಾದ ಪ್ರತಿವಾದ ವಿವಾದ ಮುಂದುವರಿಯುತ್ತಲೇ ಇವೆ. ತಾನು ರಾಜೀನಾಮೆ ನೀಡುವ ಮುನ್ನ ಯಡಿಯೂರಪ್ಪರ ಸಮ್ಮುಖದಲ್ಲಿ ಬಚ್ಚೇಗೌಡರ ಒಪ್ಪಿಗೆ ಪಡೆದಿದ್ದೆ ಎಂದು ಎಂಟಿಬಿ ನಾಗರಾಜ್ ನೀಡಿದ್ದ ಹೇಳಿಕೆಯನ್ನು ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ತಳ್ಳಿಹಾಕಿದ್ದರು.

ಇದನ್ನು ಓದಿ: .ಬಿಜೆಪಿಯಿಂದ ಅನರ್ಹರ ಸ್ಪರ್ಧೆ ಬಹುತೇಕ ಖಚಿತ; ಇದು ಯಡಿಯೂರಪ್ಪಗೆ ಮಾಡು ಇಲ್ಲವೇ ಮಡಿ ಸಮಯ?

First published:November 13, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ