ಶಿವಮೊಗ್ಗದಲ್ಲಿ ಶೀಘ್ರದಲ್ಲೇ ತಲೆಯೆತ್ತಲಿದೆ ವಿಮಾನ ನಿಲ್ದಾಣ; ಕಾಮಗಾರಿಗೆ ಆನ್​ಲೈನ್​ನಲ್ಲೇ ಸಿಎಂ ಯಡಿಯೂರಪ್ಪ ಚಾಲನೆ

Shimoga Airport: 220 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ವಿಮಾನ‌ ನಿಲ್ದಾಣ ನಿರ್ಮಾಣವಾಗಲಿದೆ. 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನದ ಹಂತದಲ್ಲಿದೆ.

ಸಿಎಂ ಬಿ.ಎಸ್‌. ಯಡಿಯೂರಪ್ಪ.

ಸಿಎಂ ಬಿ.ಎಸ್‌. ಯಡಿಯೂರಪ್ಪ.

  • Share this:
ಶಿವಮೊಗ್ಗ (ಜೂ. 15): ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಜನರ ಬಹುಕಾಲದ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ. ಮಲೆನಾಡಿನ ಹೆಬ್ಬಾಗಿಲು ಎಂದೇ ಕರೆಸಿಕೊಳ್ಳುವ ಶಿವಮೊಗ್ಗದಲ್ಲಿ ಒಂದು ವಿಮಾನ ನಿಲ್ದಾಣ ನಿರ್ಮಾಣವಾಗಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಕೇಳುತ್ತಲೇ ಇತ್ತು. ಆ ಕಾಮಗಾರಿಗೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಇನ್ನು 18 ತಿಂಗಳಲ್ಲಿ ಶಿವಮೊಗ್ಗದ ಬಳಿ ಇರುವ ಸೋಗಾನೆಹಳ್ಳಿ ಬಳಿ ಹೊಸ ವಿಮಾನ ನಿಲ್ದಾಣವೊಂದು ತಲೆಯೆತ್ತಲಿದೆ.

2008ರಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಪ್ರಯತ್ನವನ್ನು ಕೈಗೆತ್ತಿಕೊಂಡಿದ್ದರು. ಇದಕ್ಕೆ ಶಿವಮೊಗ್ಗದಿಂದ 12 ಕಿ.ಮೀ. ದೂರದಲ್ಲಿರುವ ಸೋಗಾನೆ ಹಳ್ಳಿಯ ಬಳಿ 800 ಎಕರೆ ಜಾಗವನ್ನು ಗುರುತಿಸಿ, ರೈತರಿಗೆ ಪರಿಹಾರ ಹಣ ನೀಡಿ ಆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದಾದ ಬಳಿಕ ಆ ಕಾಮಗಾರಿ ಅಲ್ಲೇ ಸ್ಥಗಿತಗೊಂಡಿತ್ತು. ಇದೀಗ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾದ ಮೇಲೆ ಮತ್ತೆ ಆ ಯೋಜನೆಯನ್ನು ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: ಕೊರೋನಾ ಭೀತಿ: ಇಂದಿನಿಂದ ರಾಜ್ಯ ಪ್ರವಾಸ ರದ್ದು; ಆನ್​​ಲೈನ್​​​ ಮೂಲಕವೇ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಸಿಎಂ

220 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ವಿಮಾನ‌ ನಿಲ್ದಾಣ ನಿರ್ಮಾಣವಾಗಲಿದೆ. 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನದ ಹಂತದಲ್ಲಿದೆ. ರನ್ ವೇ ಸುಮಾರು 3 ಸಾವಿರ ಮೀಟರ್ ಇರಲಿದೆ. 18 ತಿಂಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಮುಗಿಯುವ ನಿರೀಕ್ಷೆಯಿದೆ. ಕೊರೋನಾ ಹಿನ್ನೆಲೆ ಎಲ್ಲ ಪ್ರವಾಸಗಳನ್ನು ರದ್ದು ಮಾಡಿರುವ ಸಿಎಂ ಯಡಿಯೂರಪ್ಪ ಇಂದು ಆನ್​ಲೈನ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.

ಈ ಮೂಲಕ 12 ವರ್ಷದ ಹಿಂದಿನ ಕನಸಿಗೆ ಸಿಎಂ ಯಡಿಯೂರಪ್ಪ ಇಂದು ಮತ್ತೊಮ್ಮೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್​ಲೈನ್​ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದ್ದಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ 2 ನೇ ಬಾರಿಗೆ ಭೂಮಿ ಪೂಜೆ ನೆರವೇರಿಸಿದ್ದಾರೆ.
First published: