Shivamogga News: ಭದ್ರಾ ಡ್ಯಾಂ ನೀರು ಬಿಡುಗಡೆ, ನದಿ ತಟದಲ್ಲಿದ್ರೆ ಹುಷಾರ್!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಭದ್ರಾ ಜಲಾಶಯದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡುವುದರಿಂದ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

  • News18 Kannada
  • 5-MIN READ
  • Last Updated :
  • Shimoga, India
  • Share this:

ಶಿವಮೊಗ್ಗ: ಭದ್ರಾ ಜಲಾಶಯದಿಂದ ತುಂಗಭದ್ರಾ ಜಲಾಶಯಕ್ಕೆ (Tungabhadra Dam) ನೀರು ಬಿಡುಗಡೆ ಮಾಡುವ ಕಾರಣ ರೈತರು, ಸಾರ್ವಜನಿಕರು ನದಿ ದಂಡೆಯಲ್ಲಿ ತಿರುಗಾಡುವುದು, ಕೃಷಿ ಚಟುವಟಿಕೆ, ತೋಟಗಾರಿಕಾ ಚಟುವಟಿಕೆಗಳನ್ನು ನಡೆಸದಂತೆ ಶಿವಮೊಗ್ಗ ಜಿಲ್ಲಾಡಳಿತವು (Shivamogga News) ನಿಷೇಧಿಸಿದೆ. ಹಾವೇರಿ ನಗರಕ್ಕೆ (Haveri News) ನೀರು ಪೂರೈಸುವ ದೃಷ್ಟಿಯಿಂದ ಭದ್ರಾ ಡ್ಯಾಂನಿಂದ ತುಂಗಭದ್ರಾ ಡ್ಯಾಂಗೆ ನೀರು ಬಿಡುಗಡೆ ಮಾಡುವುದರಿಂದ ಆ ಸಂದರ್ಭದಲ್ಲಿ ಸಾರ್ವಜನಿಕರು, ಕೃಷಿಕರು ಹೆಚ್ಚಿನ ಜಾಗರೂಕತೆ ವಹಿಸುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ದನಕರುಗಳನ್ನು ಮೇಯಲು ಬಿಡದಂತೆಯೂ ಸೂಚಿಸಿದೆ.


ಯಾವಾಗ? ಎಷ್ಟು ಹೊತ್ತಿಗೆ?
ಹಾವೇರಿ ಜಿಲ್ಲೆ, ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಗಲ್ಲದೇ ನದಿ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಏಪ್ರಿಲ್ 27 ರ ಸಂಜೆ 06 ಗಂಟೆಯಿಂದ ಮೇ. 9 ರ ಬೆಳಗ್ಗೆ 06 ಗಂಟೆಯವರೆಗೆ ಪ್ರತಿ ದಿನ 1000 ಕ್ಯೂಸೆಕ್ಸ್​ನಂತೆ ಒಟ್ಟು 11574 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುವುದು.


ಇದನ್ನೂ ಓದಿ: Jog Falls: ಪ್ರವಾಸಿಗರೇ ಗಮನಿಸಿ, ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ


ಆದ್ದರಿಂದ ನದಿ ಪಾತ್ರದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿರ್ವಹಿಸದಂತೆ, ಸಾರ್ವಜನಿಕರು ಮತ್ತು ರೈತರು ತಿರುಗಾಡುವುದನ್ನು, ದನಕರುಗಳನ್ನು ಮೇಯಿಸುವುದರ ಬಗ್ಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿವು ಮಾಹಿತಿ ರವಾನಿಸಿದೆ.




ಇದನ್ನೂ ಓದಿ: Interesting Fact: 1970ರಲ್ಲೇ ಶಿವಮೊಗ್ಗಕ್ಕೆ ವಿಮಾನ ಬರ್ತಿತ್ತು! ಇಲ್ಲಿದೆ ಅಚ್ಚರಿಯ ಮಾಹಿತಿ


ಪಂಪ್‌ ಸೆಟ್‌ ಅಳವಡಿಸದಂತೆ ಸೂಚನೆ
ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಹಾಗೂ ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್​ಸೆಟ್ ಅಳವಡಿಸುವುದು, ಅನಧಿಕೃತವಾಗಿ ನೀರೆತ್ತುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎನ್. ಸುಜಾತ ತಿಳಿಸಿದ್ದಾರೆ.

top videos
    First published: