Basavaraj Bommai : 8 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಳ; ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

ಸೋಂಕು ಹೆಚ್ಚಾಗುತ್ತಿರುವ ಕಾರಣ ಕುರಿತು ಚರ್ಚಿಸಿದ ಸಿಎಂ, ನಿಯಂತ್ರಣ ಸಂಬಂಧ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚನೆ ನೀಡಿದರು.

ಸೋಂಕು ಹೆಚ್ಚಾಗುತ್ತಿರುವ ಕಾರಣ ಕುರಿತು ಚರ್ಚಿಸಿದ ಸಿಎಂ, ನಿಯಂತ್ರಣ ಸಂಬಂಧ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚನೆ ನೀಡಿದರು.

ಸೋಂಕು ಹೆಚ್ಚಾಗುತ್ತಿರುವ ಕಾರಣ ಕುರಿತು ಚರ್ಚಿಸಿದ ಸಿಎಂ, ನಿಯಂತ್ರಣ ಸಂಬಂಧ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚನೆ ನೀಡಿದರು.

  • Share this:
    ಬೆಂಗಳೂರು (ಜು. 31):  ರಾಜ್ಯದಲ್ಲಿ ಇಳಿಕೆ ಕಂಡಿದ್ದ ಕೊರೋನಾ ಸೋಂಕು ಕಳೆದೊಂದು ವಾರದಿಂದ ಏರಿಕೆ ಕಂಡಿದೆ. ಅದರಲ್ಲೂ ಬೆಂಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಚಿಕ್ಕಮಗಳೂರು ಮತ್ತು ಚಾಮರಾಜ ನಗರ ಜಿಲ್ಲೆಗಳಲ್ಲಿ ಏಕಾಏಕಿ ಪ್ರಕರಣ ಏರಿಕೆ ಕಂಡಿರುವುದು ಸಾಕಷ್ಟು ಆತಂಕ ಮೂಡಿಸಿದೆ. ಇದೇ ಹಿನ್ನಲೆ ಇಂದು ಈ ಜಿಲ್ಲೆಗಳ ಡಿಸಿ, ಎಸ್ ಪಿ , ಸಿಇಓಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ವೈದ್ಯಕೀಯ ಶಿಕ್ಷಣ,ಆರೋಗ್ಯ ಇಲಾಖೆ ಪ್ರಧಾನಕಾರ್ಯದರ್ಶಿಗಳು, ಬಿಬಿಎಂಪಿ ಆಯುಕ್ತರು,ಅಧಿಕಾರಿಗಳು ಕೂಡ ಹಾಜರಿದ್ದರು. ಈ ವೇಳೆ ಸೋಂಕು ಹೆಚ್ಚಾಗುತ್ತಿರುವ ಕಾರಣ ಕುರಿತು ಚರ್ಚಿಸಿದ ಸಿಎಂ, ನಿಯಂತ್ರಣ ಸಂಬಂಧ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚನೆ ನೀಡಿದರು.

    ಕೊರೊನಾ ಎರಡನೇ ಅಲೆಯ ಅಬ್ಬರದಿಂದ ರಾಜ್ಯದ ಜನತೆ ಈಗಾಗಲೇ ತತ್ತರಿಸಿದ್ದು ಇದೀಗ ಒಂದು ಹಂತಕ್ಕೆ ಸೋಂಕು ಸಹಜ ಸ್ಥಿತಿಗೆ ಬರುತ್ತಿದೆ. ಈ ನಡುವೆ ಮತ್ತೆ ಏಂಟು ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಿರುವುದು ಸಾಕಷ್ಟು ಆತಂಕ ಮೂಡಿಸಿದೆ. ಈ ಹಿನ್ನಲೆ ಸೋಂಕು ಹೆಚ್ಚಾಗದಂತೆ ಬಿಗಿ ನಿಯಂತ್ರಣ ಕ್ರಮ ವಹಿಸುವುದು ಅನಿವಾರ್ಯವಾಗಿದೆ.

    ಇದನ್ನು ಓದಿ: ಅಭಿನಂದನೆಗೆ ಸೀಮಿತವಾದ ಸಿಎಂ ಪ್ರವಾಸ; ಬೊಮ್ಮಾಯಿ ಮುಂದಿದೆ ಸಚಿವರ ಪಟ್ಟಿ ತಯಾರಿಸುವ ಸವಾಲ್​

    ಕೇರಳ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ಇಂದಿನಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್​ ನೆಗೆಟಿವ್​ ವರದಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಪಡೆದಿದ್ದರೂ ರಾಜ್ಯಕ್ಕೆ ಆಗಮಿಸುವ 72 ಗಂಟೆ ಮುಂಚಿತವಾಗಿ ಆರ್​ಟಿಪಿಸಿಆರ್​ ಪರೀಕ್ಷೆಯ ನೆಗೆಟಿವ್​ ವರದಿಯನ್ನು ಹಾಜರು ಪಡಿಸಬೇಕಿದೆ. ರಿಪೋರ್ಟ್ ಇದ್ದವರಿಗೆ ಮಾತ್ರ ಒಳ ಪ್ರವೇಶಕ್ಕೆ ಅನುವುಮಾಡಿ. ಪ್ರತಿನಿತ್ಯ ಹೆಚ್ಚಿನ ಜನ ಅಲ್ಲಿಂದ ಇಲ್ಲಿಗೆ ಭೇಟಿ ನೀಡುತ್ತಾರೆ. ಇದರಿಂದ ಸೋಂಕು‌ ಹರಡುವ ಸಾಧ್ಯತೆಗಳು ಹೆಚ್ಚು ಹಾಗಾಗಿ ತುಂಬಾ ಎಚ್ಚರಿಕೆಯಿಂದ ಗಮನವಿಡಿ. ಸೋಂಕು ಹೆಚ್ಚಾಗಲು ಅವಕಾಶ ಕೊಡಬೇಡಿ. ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರಬೇಕು ಎಂದು ಸೂಚನೆ ನೀಡಿದ್ದಾರೆ.

    ಜಿಲ್ಲೆಗಳಲ್ಲಿ ಲಸಿಕೆ ವಿತರಣೆ ಕುರಿತು ಪ್ರಶ್ನಿಸಿದ ಅವರು, ಇದೇ ವೇಳೆ ಲಸಿಕೆ ಪ್ರಮಾಣವನ್ನ ಹೆಚ್ಚಳ ಮಾಡುವಂತೆ ನಿರ್ದೇಶಿಸಿದ್ದಾರೆ. ಈ ಸಂಬಂಧ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ನನ್ನ‌ಗಮನಕ್ಕೆ ತನ್ನಿ. ಹೆಚ್ಚಿನ ನೆರವು ಬೇಕಾದರೂ ನೀಡುತ್ತೇವೆ ಎಂದು ಭರವಸೆ ನೀಡಿದರು.

    ಇನ್ನು ರಾಜ್ಯದಲ್ಲಿ ಇಂದು 1, 987 ಹೊಸ ಕೋವಿಡ್​ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ 450 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ. 1. 43ರಷ್ಟಿದೆ. ರಾಜ್ಯದಲ್ಲಿ ಒಟ್ಟಾರೆ ಸಕ್ರಿಯ ಪ್ರಕರಣ 23, 796 ಇದೆ.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
    Published by:Seema R
    First published: