ಶಿವಮೊಗ್ಗ(ಮಾ.11) : ಹಾಸ್ಟೆಲ್ ಊಟ ಸೇವಿಸಿ ವಿದ್ಯಾರ್ಥಿನಿಯರು (Students) ಅಸ್ವಸ್ಥರಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ನಲ್ಲಿ(Hostel) ನಡೆದಿದೆ. ವಿದ್ಯಾನಗರದ (VidyaNagar) ಸಹ್ಯಾದ್ರಿ ಕಾಲೇಜ್ ಹಾಸ್ಟೆಲ್ನ 27 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ನಿನ್ನೆ ರಾತ್ರಿ ಊಟ (Meals) ಸೇವನೆ ಬಳಿಕ ಹೊಟ್ಟೆನೋವು, ವಾಂತಿಯಾಗಿದೆ. ಸದ್ಯ ಅಸ್ವಸ್ಥ ವಿದ್ಯಾರ್ಥಿನಿಯರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಸಚಿವ ಈಶ್ವರಪ್ಪನವರ ಪುತ್ರ ಕೆ.ಈ ಕಾಂತೇಶ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ
ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ
ನಿನ್ನೆ ರಾತ್ರಿ ಹಾಸ್ಟೆಲ್ನಲ್ಲಿ ಊಟ ಮಾಡಿದ ಬಳಿಕ ಕೆಲವು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ ಕಾಣಿಸಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಇದರಲ್ಲಿ ಐವರು ವಿದ್ಯಾರ್ಥಿಗಳು ಗುಣಮುಖವಾಗಿ ವಿದ್ಯಾರ್ಥಿನಿಯಲಕ್ಕೆ ತೆರಳಿದ್ದರು.ಉಳಿದ 12 ವಿದ್ಯಾರ್ಥಿನಿಯರು ಅಶೋಕ ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಬಾಲಕಿಯರ ಆರೋಗ್ಯ ಚೇತರಿಕೆ ಕಂಡಿದ್ದು, ಸಂಜೆ ವೇಳೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಸಚಿವ ಈಶ್ವರಪ್ಪನವರ ಪುತ್ರ ಕೆ ಈ ಕಾಂತೇಶ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಇದನ್ನೂ ಓದಿ: BMTC ಪ್ರಯಾಣಿಕರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ಆ್ಯಪ್ನಲ್ಲೇ ಸಿಗಲಿದೆ ಬಸ್ ಪಾಸ್
ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಲೇ ಇವೆ ಈ ಹಿಂದೆ ಕೂಡ ಹಲವು ಮಕ್ಕಳು ಅಸ್ವಸ್ಥರಾಗಿದ್ರು
ಕಲಬುರ್ಗಿ(ಫೆ.14) : ಬಿಸಿಯೂಟ ಸೇವಿಸಿದ 30 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಶಿಲಾರಕೋಟ ಗ್ರಾಮದಲ್ಲಿ ನಡೆದಿತ್ತು.
ಶಿಲಾರಕೋಟ
ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ ವಿದ್ಯಾರ್ಥಿಗಳು, ಸಂಜೆ ವೇಳೆಗೆ ವಾಂತಿ-ಬೇಧಿ ಮಾಡಿಕೊಳ್ಳ ಆರಂಭಿಸಿದ್ದರು. ವಿದ್ಯಾರ್ಥಿಗಳು ವಾಂತಿ-ಬೇಧಿ ಮಾಡಿಕೊಳ್ಳೋದನ್ನು ನೋಡಿ ಗಾಬರಿಗೊಂಡ ಶಿಕ್ಷಕರು, ಪೋಷಕರು ತಕ್ಷಣ ಮುಧೋಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.
ಪ್ರಾಥಮಿಕ ಚಿಕಿತ್ಸೆ ನಂತರ ಸೇಡಂ ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳ ದಾಖಲು ಮಾಡಲಾಗಿತ್ತು. ಈ ಪೈಕಿ 28 ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಇಬ್ಬರು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಅಡುಗೆ ಮಾಡುವವರ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
ಹಾವೇರಿಯಲ್ಲೂ 80 ಮಂದಿ ಅಸ್ವಸ್ಥರಾಗಿದ್ರು
ಮಕ್ಕಳಿಗೆ ಶಾಲೆಯಲ್ಲಿ ಮಾಡಿದ್ದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವುದು ನಂತರ ತಿಳಿದು ಬಂದಿದೆ. ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ರು. ಮಕ್ಕಳಿಗೆ ಶಾಲೆಯಲ್ಲಿ ಮಾಡಿದ್ದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವುದು ನಂತರ ತಿಳಿದು ಬಂದಿತ್ತು. ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದರು.
ಇದನ್ನೂ ಓದಿ: Bidar: ರಾಶಿ ಯಂತ್ರಕ್ಕೆ ಸಿಲುಕಿ ಬೇರೆಯಾಯ್ತು ಮಹಿಳೆಯ ರುಂಡ-ಮುಂಡ
ಟ್ರ್ಯಾಕ್ಟರ್ ಪಲ್ಟಿ ನಾಲ್ವರ ಸಾವು, ನಿಶ್ಚಿತಾರ್ಥಕ್ಕೆ ಹೊರಟವರು ಮಸಣ ಸೇರಿದ್ರು
ಕೊಪ್ಪಳ (ಮಾ.11): ಕೊಪ್ಪಳ (Koppala) ಜಿಲ್ಲೆ ಕನಕಗಿರಿ (Kanakagiri) ತಾಲೂಕಿನ ನವಲಿಯ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಭೀಕರ ಅಪಘಾತ (Accident) ಸಂಭವಿಸಿದೆ. ಸುಮಾರು 25 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ (Tractor) ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಚಿಕಿತ್ಸೆ ಫಲಿಸದೆ ಕಾರಟಗಿ ಆಸ್ಪತ್ರೆಯಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ನಿಶ್ಚಿತಾರ್ಥಕ್ಕಾಗಿ ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ದ್ಯಾವಮ್ಮ (60), ಅಂಬಮ್ಮ (45), ಶೇಶಪ್ಪ ಬಂಡಿ (40), ಯಮನಪ್ಪ ಸಿಂಧನೂರು (35) ಎಂದು ಗುರುತಿಸಲಾಗಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಕಾರಟಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸೇರಿದಂತೆ ಕನಕಗಿರಿ ಪೊಲೀಸ್ ತಂಡ ಭೇಟಿ ನೀಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ