SSLC ಪರೀಕ್ಷೆಯಲ್ಲಿ ಅನುತ್ತೀರ್ಣವಾಗುತ್ತೇನೆಂಬ ಭಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಶಿವಮೊಗ್ಗ (ಜು. 19):  ಇಂದು ರಾಜ್ಯದ್ಯಾಂತ ಯಶಸ್ವಿಯಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿದೆ. ಕೋವಿಡ್​ ಮುನ್ನೆಚ್ಚರಿಕಾ ಕ್ರಮದಿಂದಾಗಿ ಈ ಬಾರಿ ಸರಳೀಕೃತ ಮಾರ್ಗದಲ್ಲಿ ಈ ಬಾರಿ 10ನೇ ತರಗತಿ ಪರೀಕ್ಷೆ ನಡೆಸಲಾಗಿದೆ. ಈ ಪರೀಕ್ಷೆ ಬರೆದು ಬಂದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುತ್ತೇನೆ ಎಂಬ ಭಯದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ನಡೆದಿದೆ. ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಕೆಂಚನಾಳ ಗ್ರಾಮದ ಚೇತನಾ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ

  ಮೇರಿಮಾತಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಚೇತನಾ ಇಂದು ಖುಷಿಯಿಂದಲೇ ಪರೀಕ್ಷೆ ಬರೆಯಲು ಹೋಗಿದ್ದಳು. ಪರೀಕ್ಷೆ ಬರೆದು ಬಂದ ಆಕೆಗೆ ಫೇಲ್​ ಆಗುವ ಭಯ ಆವರಿಸಿದೆ. ಇದೆ ಕಾರಣಕ್ಕೆ ಭಯಗೊಂಡು ಮನೆಯಲ್ಲಿದ್ದ ಥೈರಾಯಿಡ್ ಮಾತ್ರೆ ಸೇವಿಸಿದ್ದಾಳೆ. ಬಳಿಕ ಅಸ್ವಸ್ಥಗೊಂಡಿದ್ದಾಳೆ, ತಕ್ಷಣಕ್ಕೆ ಆಕೆಗೆ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಶಿವಮೊಗ್ಗದ್ದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಿದ್ದು, ಸದ್ಯ ಆಕೆ ಪ್ರಾಣಾಪಯದಿಂದ ಪಾರಾಗಿದ್ದಾಳೆ ಎಂದು ತಿಳಿದು ಬಂದಿದೆ.

  ಇದನ್ನು ಓದಿ: ನಾಳೆ ಸಂಜೆ 4.30ಕ್ಕೆ ಪಿಯು ಫಲಿತಾಂಶ; ರಿಜಿಸ್ಟರ್​​ ನಂಬರ್​​, ರಿಸಲ್ಟ್​​​​ ಪಡೆಯುವ ವಿಧಾನ ಇಲ್ಲಿದೆ

  ಕೊರೋನಾ ಹಿನ್ನಲೆ ಈ ಬಾರಿ ವಿದ್ಯಾರ್ಥಿಗಳು ಆನ್​ಲೈನ್​ನಲ್ಲಿ ಕಲಿಕೆ ಮಾಡಿರುವ ಉದ್ಧೇಶದಿಂದ ಸರ್ಕಾರ ಈ ಬಾರಿ ಸರಳವಾಗಿ ಪರೀಕ್ಷೆ ನಡೆಸಿದೆ. ಇಂದು ಕೋರ್ ಪೇಪರ್ ಮತ್ತು ಜುಲೈ 22 ರಂದು ಭಾಷಾ ಪತ್ರಿಕೆಗಳೊಂದಿಗೆ ಎರಡು ದಿನ ಪರೀಕ್ಷೆ ನಡೆಯಲಿದೆ.

  ಸುಸೂತ್ರವಾಗಿ ನಡೆದ ಪರೀಕ್ಷೆ:
  ಕೋವಿಡ್​ ಆತಂಕದಲ್ಲೂ ಇಂದು ರಾಜ್ಯದಲ್ಲಿ ಸುಸೂತ್ರವಾಗಿ ನಡೆದ ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹರ್ಷ ವ್ಯಕ್ತ ಪಡಿಸಿದರು. ಯಾವುದೇ ರೀತಿಯಲ್ಲಿ ಗೊಂದಲಕ್ಕೆ ಆಗಿಲ್ಲ, ಕೊರೋನಾ ಹಿನ್ನಲೆ ವಿಶೇಷ ಕೊಠಡಿಯಲ್ಲಿ 111 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಅನಾರೋಗ್ಯ ಹಿನ್ನೆಲೆ ವಿಶೇಷ ಕೊಠಡಿಯಲ್ಲಿ ನಿರ್ಮಾಣ ಮಾಡಲಾಗಿದ್ದು, 58 ವಿದ್ಯಾರ್ಥಿಗಳು ಸೋಂಕಿತ ಪರೀಕ್ಷೆ ಬರೆದಿದ್ದಾರೆ . 10,693 ವಲಸೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಎಸ್ ​​ಎಸ್ ​ಎಲ್​ ಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಅದಕ್ಕೆ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸು ತ್ತೇನೆ ಎಂದರು.

  ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಳಿರು ತೋರಣ ಕಟ್ಟಿ ಮಕ್ಕಳನ್ನು ಸ್ವಾಗತಿಸ ಲಾಯಿತು. ಅಲ್ಲದೇ ವಿದ್ಯಾರ್ಥಿಗಳಿಗೆ ಮಧ್ಯಾಹದ ಊಟದ ವ್ಯವಸ್ಥೆ ಹಲವು ಕಡೆ ಮಾಡಲಾಯಿತು

  ಕಳೆದ ಬಾರಿಯ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದ ಮಕ್ಕಳಿಗಿಂತ ಹೆಚ್ಚಿನ ಸಂಖ್ಯೆಯ ಮಕ್ಕಳು ಹಾಜರಾಗಿದ್ದಾರೆ. ಮಕ್ಕಳ ಶೇ. ಹಾಜರಾತಿಯೂ ಸಹ ಈ ಬಾರಿ ಹೆಚ್ಚಾಗಿದೆ . ಪರೀಕ್ಷೆ ಯಾವುದೇ ವಿಘ್ನಗಳಿಲ್ಲದೇ ಯಶಸ್ವಿಯಾಗಿ ನಡೆದಿದ್ದು ಇದಕ್ಕೆ ಕಾರಣೀಭೂತರಾದ ನಮ್ಮ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ವೃಂದಕ್ಕೆ ಸುರೇಶ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
  Published by:Seema R
  First published: