ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ಜನವರಿ 21ರ ರಾತ್ರಿ ಭಾರೀ ಜಿಲೆಟಿನ್ ಸ್ಫೋಟವಾದ ದುರ್ಘಟನೆ ಸಂಭವಿಸಿತ್ತು. ಈ ಅವಘಡದಲ್ಲಿ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಭೂಮಿ ಕಂಪಿಸುವ ಮತ್ತು ಶಬ್ದ ಕೇಳುವ ಮಟ್ಟಕ್ಕೆ ಸ್ಫೋಟದ ತೀವ್ರತೆ ಇತ್ತು. ಜನರು ಭೂ ಕಂಪವಾಯಿತೆಂದು ಮನೆಯಿಂದ ಹೊರಗೋಡಿದ ಘಟನೆಗಳೂ ಹಲವೆಡೆ ವರದಿಯಾಗಿವೆ. ಸ್ಫೋಟಗೊಂಡ ಜಿಲೆಟಿನ್ಗಳನ್ನ ಹೊತ್ತು ಸಾಗುತ್ತಿದ್ದ ಲಾರಿ ಸಂಪೂರ್ಣ ನಾಶವಾಗಿದೆ. ಕೆಲವರ ಪ್ರಕಾರ, ಲಾರಿಯಲ್ಲಿದ್ದ 50 ಬಾಕ್ಸ್ಗಳ ಡೈನಮೈಟ್ಗಳು ಒಂದಾದ ನಂತರ ಒಂದರಂತೆ ಸ್ಫೋಟಗೊಂಡಿವೆ. ಈ ಘಟನೆಯಿಂದ ಎಚ್ಚೆತ್ತಿರುವ ರಾಜ್ಯ ದಳ ರಾಜ್ಯಾದ್ಯಂತ ದಾಳಿ ನಡೆಸಿ ಅನಧೀಕೃತ ಜಿಲೆಟಿನ್ ಕಡ್ಡಿಗಳನ್ನು ವಶಪಡಿಸಿಕೊಂಡಿದೆ.
ಧಾರವಾಡ ಜಿಲ್ಲೆಯ ಕಲಘಟಗಿ ಠಾಣಾ ವ್ಯಾಪ್ತಿಯಲ್ಲಿ ಅಂತರಿಕ ಭದ್ರತಾ ದಳದಿಂದ ದಾಳಿ ನಿನ್ನೆ ದಾಳಿ ನಡೆಸಲಾಗಿತ್ತು. ಈ ವೇಳೆ ಅಧಿಕಾರಿಗಳು ಕ್ರಷರ್ ಮೇಲೆ ದಾಳಿ ಮಾಡಿ ಸ್ಪೋಟಕಗಳನ್ನ ವಶಪಡಿಸಿಕೊಂಡಿದ್ದಾರೆ. ಶಿವಕುಮಾರ್ ವೀರನಗೌಡ ಎಂಬುವರಿಗೆ ಸೇರಿದ ಕ್ರಷರ್ ದಾಳಿ ವೇಳೆ ಆಕ್ರಮವಾಗಿ ಸಂಗ್ರಹಿಸಿದ್ದ 234 ಜಿಲೆಟಿನ್ ಕಡ್ಡಿ, 67 ಎಲೆಕ್ಟ್ರಿಕ್ ಡಿವೈಸ್ ಹಾಗೂ ಮಗ್ಗರ್ ಬಾಕ್ಸ್ ವಶಕ್ಕೆ ಪಡೆಯಲಾಗಿದೆ.
ಅಂತರಿಕಾ ಭದ್ರತಾ ದಳದ ಬೆಳಗಾವಿ ಮತ್ತು ಧಾರವಾಡ ಡಿವಿಷನ್ ನಿಂದ ದಾಳಿ ನಡೆಸಲಾಗಿದ್ದು, ಈ ಬಗ್ಗೆ ಕಲಘಟಗಿ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇನ್ನೂ ಶಿವಮೊಗ್ಗದಲ್ಲಿ ನಡೆದಿದ್ದ ಈ ಅನಾಹುತ್ತಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ನಾಡಿನ ಎಲ್ಲಾ ಪ್ರಮುಖ ನಾಯಕರು ಸಂತಾಪ ಸೂಚಿಸಿದ್ದರು. ಅಲ್ಲದೆ, ಬಿ.ಎಸ್. ಯಡಿಯೂರಪ್ಪ ಮೃತರಿಗೆ 5 ಲಕ್ಷ ಪರಿಹಾರವನ್ನೂ ಘೋಷಿಸಿದ್ದರು. ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವುದಾಗಿಯೂ ತಿಳಿಸಿದ್ದರು.
ಈ ದುರ್ಘಟನೆಯ ನಂತರವಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು, ಅನಧೀಕೃತ ಗಣಿಗಾರಿಕೆಗಳಿಗೆ ಕಡಿವಾಣ ಹಾಕಬೇಕು ಎಂಬ ಕೂಗು ಸಾಮಾಜಿಕ ವಲಯದಲ್ಲಿ ಕೇಳಿ ಬಂದಿದ್ದವು. ಇದೀಗ ಭದ್ರತಾ ಇಲಾಖೆ ಈ ಕೆಲಸಕ್ಕೆ ಮುಂದಾಗಿರುವುದು ಸ್ವಾಗತಾರ್ಹ.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ