HOME » NEWS » State » SHIVAMOGGA BLAST HIGH LEVEL INVESTIGATION AND TAKE SRICT ACTION AGAINST OFFENDERS YEDDYURAPPA HOPES MAK

Huge Blast; ಶಿವಮೊಗ್ಗ ಬ್ಲಾಸ್ಟ್​ ಕುರಿತು ಉನ್ನತ ಮಟ್ಟದ ತನಿಖೆ, ತಪ್ಪಿತಸ್ಥರ ವಿರುದ್ಧ ಕ್ರಮ; ಯಡಿಯೂರಪ್ಪ ಭರವಸೆ

ಒಂದು ವರದಿ ಪ್ರಕಾರ ಕಲ್ಲು ಕ್ವಾರಿಯಲ್ಲಿ ಬಿಹಾರ ಮೂಲದ 15ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಅವರಲ್ಲಿ ಯಾರೂ ಬದುಕಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಸ್ಫೋಟಗೊಂಡ ರಭಸಕ್ಕೆ ದೇಹಗಳು ಗುರುತು ಸಿಗಲಾರದಷ್ಟು ಛಿದ್ರಗೊಂಡಿವೆ ಎನ್ನಲಾಗುತ್ತಿದೆ.

news18-kannada
Updated:January 22, 2021, 9:10 AM IST
Huge Blast; ಶಿವಮೊಗ್ಗ ಬ್ಲಾಸ್ಟ್​ ಕುರಿತು ಉನ್ನತ ಮಟ್ಟದ ತನಿಖೆ, ತಪ್ಪಿತಸ್ಥರ ವಿರುದ್ಧ ಕ್ರಮ; ಯಡಿಯೂರಪ್ಪ ಭರವಸೆ
ಸಿಎಂ ಬಿಎಸ್​ ಯಡಿಯೂರಪ್ಪ.
  • Share this:
ಬೆಂಗಳೂರು(ಜ. 22): ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ನಿನ್ನೆ ರಾತ್ರಿ ಭಾರೀ ಜಿಲೆಟಿನ್ ಸ್ಫೋಟವಾದ ದುರ್ಘಟನೆ ಸಂಭವಿಸಿದೆ. ಕಲ್ಲು ಕ್ವಾರಿಯೊಂದರ ಬಳಿ ರಾತ್ರಿ 10:30ಕ್ಕೆ ಸಂಭವಿಸಿದೆ. ಈ ಅವಘಡದಲ್ಲಿ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಭೂಮಿ ಕಂಪಿಸುವ ಮತ್ತು ಶಬ್ದ ಕೇಳುವ ಮಟ್ಟಕ್ಕೆ ಸ್ಫೋಟದ ತೀವ್ರತೆ ಇತ್ತು. ಜನರು ಭೂ ಕಂಪವಾಯಿತೆಂದು ಮನೆಯಿಂದ ಹೊರಗೋಡಿದ ಘಟನೆಗಳೂ ಹಲವೆಡೆ ವರದಿಯಾಗಿವೆ. ಸ್ಫೋಟಗೊಂಡ ಜಿಲೆಟಿನ್​ಗಳನ್ನ ಹೊತ್ತು ಸಾಗುತ್ತಿದ್ದ ಲಾರಿ ಸಂಪೂರ್ಣ ನಾಶವಾಗಿದೆ. ಕೆಲವರ ಪ್ರಕಾರ, ಲಾರಿಯಲ್ಲಿದ್ದ 50 ಬಾಕ್ಸ್​ಗಳ ಡೈನಮೈಟ್​ಗಳು ಒಂದಾದ ಒಂದರಂತೆ ಸ್ಫೋಟಗೊಂಡಿವೆ. ಶಿವಮೊಗ್ಗ ಗ್ರಾಮೀಣ ಶಾಸಕ ಅಶೋಕ್ ನಾಯ್ಕ್ ಈ ಬಗ್ಗೆ ಮಾತನಾಡಿ, ತನ್ನ ಕ್ಷೇತ್ರದಲ್ಲೇ ಈ ದುರ್ಘಟನೆ ಸಂಭವಿಸಿದ್ದು, ತನಗೂ ಭಾರೀ ಶಬ್ದ ಕೇಳಿಸಿತೆಂದಿದ್ದಾರೆ.

"ಎಲ್ಲಾ ಕಡೆ ದಟ್ಟ ಹೊಗೆ ಹಬ್ಬಿದೆ. ಏನೂ ಕಾಣುತ್ತಿಲ್ಲ. ಕನಿಷ್ಠ 6 ಮಂದಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಿರಬಹುದು. ಈಗಲೇ ಏನನ್ನೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ" ಎಂದು ನಿನ್ನೆ ತಡರಾತ್ರಿ ಅವರು ನ್ಯೂಸ್18ಗೆ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲಾಧಿಕಾರಿ, ಎಸ್​ಪಿ ಸೇರಿದಂತೆ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ, ಇನ್ನಷ್ಟು ಜಿಲೆಟಿನ್ ಕಡ್ಡಿಗಳು ಸ್ಫೋಟಗೊಳ್ಳುವ ಅಪಾಯ ಇದ್ದರಿಂದ ಬಹಳ ಎಚ್ಚರಿಕೆಯಿಂದ ಅಪಘಾತದ ಸ್ಥಳಕ್ಕೆ ಹೋಗಲಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಒಂದು ವರದಿ ಪ್ರಕಾರ ಕಲ್ಲು ಕ್ವಾರಿಯಲ್ಲಿ ಬಿಹಾರ ಮೂಲದ 15ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಅವರಲ್ಲಿ ಯಾರೂ ಬದುಕಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಸ್ಫೋಟಗೊಂಡ ರಭಸಕ್ಕೆ ದೇಹಗಳು ಗುರುತು ಸಿಗಲಾರದಷ್ಟು ಛಿದ್ರಗೊಂಡಿವೆ ಎನ್ನಲಾಗುತ್ತಿದೆ.

ಜಿಲೆಟಿನ್ ಕಡ್ಡಿಗಳ ಸ್ಫೋಟಕ್ಕೆ ಇನ್ನೂ ನಿಖರ ಕಾರಣ ಗೊತ್ತಾಗಿಲ್ಲ. ಲಘು ಭೂಕಂಪನದಿಂದ ಜಿಲೆಟಿನ್ ಕಡ್ಡಿಗಳ ಘರ್ಷಣೆಯಾಗಿ ಅದರಿಂದ ಡೈನಾಮೈಟ್ ಸ್ಫೋಟಗೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಆದರೆ ಭೂಕಂಪನ ಸಂಭವಿಸಿರುವುದು ಎಲ್ಲಿಯೂ ದಾಖಲಾಗಿಲ್ಲ. ಭೂಕಂಪ ಮಾಪನ ಕೇಂದ್ರಗಳಲ್ಲಿ ಕಂಪನ ದಾಖಲಾಗಿಲ್ಲ.ಈ ಕುರಿತು ಟ್ವೀಟ್​ ಮಾಡುವ ಮೂಲಕ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ, "ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ.ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ" ಎಂದು ಭರವಸೆ ನೀಡಿದ್ದಾರೆ.
Published by: MAshok Kumar
First published: January 22, 2021, 9:10 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories