Shivamogga Dasara 2020: ಈ ಬಾರಿ ಅತ್ಯಂತ ಸರಳವಾಗಿ ಶಿವಮೊಗ್ಗ ದಸರಾ ಆಚರಣೆ; ಸಚಿವ ಕೆ.ಎಸ್.ಈಶ್ವರಪ್ಪ

ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಹಾಗೂ ಮನೆ ಸಮೀಪದ ದೇವಾಲಯಗಳಲ್ಲಿಯೇ ದಸರಾ ಆಚರಿಸಬೇಕು. ಬನ್ನಿಯನ್ನು ಶ್ರದ್ಧಾಪೂರ್ವಕ ತಮ್ಮ ದೇವರಿಗೆ ಸಮರ್ಪಿಸಬಹುದಾಗಿದೆ. ತಾನು ಸಹ ಈ ಬಾರಿ ಬನ್ನಿ ಕಡಿಯುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

news18-kannada
Updated:September 17, 2020, 11:57 AM IST
Shivamogga Dasara 2020: ಈ ಬಾರಿ ಅತ್ಯಂತ ಸರಳವಾಗಿ ಶಿವಮೊಗ್ಗ ದಸರಾ ಆಚರಣೆ; ಸಚಿವ ಕೆ.ಎಸ್.ಈಶ್ವರಪ್ಪ
ಕಳೆದ ವರ್ಷದ ಶಿವಮೊಗ್ಗ ದಸರಾ ಆಚರಣೆಯ ದೃಶ್ಯ
  • Share this:
ಶಿವಮೊಗ್ಗ(ಸೆ.17): ಶಿವಮೊಗ್ಗದಲ್ಲಿ ಸಹ ಮೈಸೂರು ದಸರಾ ಮಾದರಿಯಲ್ಲೇ ವಿಜೃಂಭಣೆಯಿಂದ ದಸರಾ ಉತ್ಸವ ಆಚರಣೆ ಮಾಡಲಾಗುತ್ತದೆ. ಮೈಸೂರು ಬಿಟ್ಟರೆ ರಾಜ್ಯದಲ್ಲಿ ಶಿವಮೊಗ್ಗದಲ್ಲೇ ಅತ್ಯಂತ ಸಗಡರ ಸಂಭ್ರಮದಿಂದ ದಸರಾ ಉತ್ಸವ ನಡೆಯುವುದು. ಶಿವಮೊಗ್ಗದಲ್ಲಿ ಸಹ ಜಂಬು ಸವಾರಿ ನಡೆಯುತ್ತದೆ. ಆದರೆ  ಈ ಬಾರಿ ಕೊರೋನಾ  ಭೀತಿ ಹಿನ್ನೆಲೆಯಲ್ಲಿ ದಸರಾ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲು‌ ನಿರ್ಧರಿಸಲಾಗಿದೆ. ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿ ಶಿವಮೊಗ್ಗ ನಗರದಲ್ಲಿ ಅತ್ಯಂತ ಸರಳವಾಗಿ ಸಾಂಪ್ರದಾಯಿಕವಾಗಿ ದಸರಾ ಹಬ್ಬವನ್ನು ಆಚರಿಸಲು ತಿರ್ಮಾನಿಸಲಾಗಿದೆ. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ  ಈ ತೀರ್ಮಾನ ಮಾಡಲಾಗಿದೆ.  ಕೊರೋನಾ ಎಲ್ಲೆಡೆ ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ನಾವು ಈಗಾಗಲೇ ಹಲವಾರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೇವೆ.  ಜನರನ್ನು ಸೇರಿಸಿ ಕರೋನಾ ಹರಡಲು ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಬಾರದು. ಈ ಹಿನ್ನೆಲೆಯಲ್ಲಿ ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ತೀರ್ಮಾನಿಸಿರುವಂತೆ ಅತ್ಯಂತ ಸರಳವಾಗಿ ದಸರಾ ಆಚರಿಸಲಾಗುವುದು ಎಂದು  ಸಚಿವ ಈಶ್ಚರಪ್ಪ ಹೇಳಿದರು.

ಚಂದ್ರಶೇಖರ್ ಆಜಾದ್ ಮೈದಾನದಲ್ಲಿ ನಡೆಯುವ ಬನ್ನಿ ಕಾರ್ಯಕ್ರಮಕ್ಕೆ ಪ್ರತಿ ವರ್ಷದಂತೆ ಎಲ್ಲಾ ದೇವಾಲಯಗಳ ದೇವರನ್ನು ಈ ಬಾರಿ ಕರೆದುಕೊಂಡು ತರಲು ಅವಕಾಶವಿಲ್ಲ. ಶಿವಮೊಗ್ಗ ನಗರದ ಮುಜರಾಯಿ ಇಲಾಖೆ ದೇವಸ್ಥಾನಗಳಿಂದ ದೇವರನ್ನು ಕರೆತರಬಹುದಾಗಿದೆ. ಖಾಸಗಿ ದೇವಾಲಯಗಳ ದೇವರನ್ನು ಕರೆತರಲು ಅವಕಾಶವಿಲ್ಲ. ದೇವರನ್ನು ಕರೆತರುವ ಸಂದರ್ಭದಲ್ಲಿ ಮೆರವಣಿಗೆ ಮಾಡುವಂತಿಲ್ಲ. ಸಾಂಕೇತಿಕವಾಗಿ ಬನ್ನಿ ಮಂಟಪಕ್ಕೆ ಕರೆ ತಂದು ವಿಧಿ ವಿಧಾನಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

PM Modi Birthday Special: ಪ್ರಧಾನಿ ಮೋದಿಯವರ ಅಪರೂಪದ ಫೋಟೋಗಳು ಇಲ್ಲಿವೆ

ಸಾರ್ವಜನಿಕರು ತಮ್ಮ ಮನೆಯಲ್ಲಿಯೇ ಹಾಗೂ ಮನೆ ಸಮೀಪದ ದೇವಾಲಯಗಳಲ್ಲಿಯೇ ದಸರಾ ಆಚರಿಸಬೇಕು. ಬನ್ನಿಯನ್ನು ಶ್ರದ್ಧಾಪೂರ್ವಕ ತಮ್ಮ ದೇವರಿಗೆ ಸಮರ್ಪಿಸಬಹುದಾಗಿದೆ. ತಾನು ಸಹ ಈ ಬಾರಿ ಬನ್ನಿ ಕಡಿಯುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ದಸರಾ ಸಂದರ್ಭದಲ್ಲಿ ಶಿವಮೊಗ್ಗ ನಗರಾದ್ಯಂತ ಪ್ರತಿವರ್ಷದಂತೆ ಗರಿಷ್ಟ ಅಲಂಕಾರ ಮಾಡಬೇಕು. ಚಂದ್ರಶೇಖರ ಆಜಾದ್ ಮೈದಾನದಲ್ಲಿ ನಡೆಯುವ ಬನ್ನಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸದೇ ಸಹಕರಿಸಬೇಕು. ದಸರಾ ಆಚರಣೆಯ ಎಲ್ಲಾ ಕಾರ್ಯಕ್ರಮಗಳನ್ನು ಟಿವಿ, ಇಂಟರ್​​ನೆಟ್​​ ಮೂಲಕ ನೇರ ಪ್ರಸಾರ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು. ಜನರು ಮನೆಯಲ್ಲಿಯೇ ಕುಳಿತು ಎಲ್ಲಾ ಕಾರ್ಯಕ್ರಮಗಳನ್ನು ವೀಕ್ಷಿಸಬಹುದಾಗಿದೆ ಎಂದರು.

ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಈ‌ ವೇಳೆ ಉಪಸ್ಥಿತರಿದ್ದರು.
Published by: Latha CG
First published: September 17, 2020, 11:57 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading