ಶಿವಮೊಗ್ಗ ಲೋಕಸಭಾ ಸ್ಥಾನಕ್ಕೆ ಬಿಎಸ್​ವೈ ರಾಜಿನಾಮೆ

news18
Updated:May 19, 2018, 3:51 PM IST
ಶಿವಮೊಗ್ಗ ಲೋಕಸಭಾ ಸ್ಥಾನಕ್ಕೆ ಬಿಎಸ್​ವೈ ರಾಜಿನಾಮೆ
  • Share this:
ನ್ಯೂಸ್ 18 ಕನ್ನಡ

ಬೆಂಗಳೂರು (ಮೇ. 19) : ಸಂಸದ ಸ್ಥಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಶಾಸಕ ಶ್ರೀರಾಮುಲು ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆ ಅಧಿವೇಶದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮುನ್ನ ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅವರಿಗೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ರಾಜಿನಾಮೆ ಪತ್ರವನ್ನು ಅಂಗೀಕರವಾಗಿದೆ.

ಶಿಕಾರಿಪುರದಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಬಿ.ಎಸ್‌.ಯಡಿಯೂರಪ್ಪ, ಮೊಳಕಾಲ್ಮೂರು ಕ್ಷೇತ್ರದಲ್ಲಿ ಗೆಲುವು ಪಡೆದಿರುವ ಬಿ.ಶ್ರೀರಾಮುಲು ಬಳ್ಳಾರಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇನ್ನೂ ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ  ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜಿನಾಮೆ ನೀಡಿದ್ದಾರೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಸಿ.ಎಸ್‌.ಪುಟ್ಟರಾಜು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.

ಶಿವಮೊಗ್ಗ , ಬಳ್ಳಾರಿ, ಮಂಡ್ಯ  ಲೋಕಸಭಾ ಕ್ಷೇತ್ರಗಳು ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.
First published:May 19, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ