ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje ) ಇಂದು ಶೇಷಾದ್ರಿ ರಸ್ತೆ ಬಳಿ ಇರುವ ರಾಜ್ಯ ಚುನಾವಣಾ ಆಯೋಗದ (Election Commission) ಕಚೇರಿಯಲ್ಲಿ ಕಾಂಗ್ರೆಸ್ (Congress) ಪಕ್ಷದ ವಿರುದ್ಧ ದೂರು ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಅವರು ಚುನಾವಣೆಗೆ ಸ್ಪರ್ಧಿಸಲು ಬಿ ಫಾರಂ ನೀಡುವ ಅಧಿಕೃತ ವ್ಯಕ್ತಿಯಾಗಿದ್ದಾರೆ. ಆದರೆ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ (KPCC) ಹಣ ಸಂಗ್ರಹಿಸಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಲಂಚ (Bribe) ಸ್ವೀಕರಿಸಿದಂತೆ. ಇದು ಚುನಾವಣೆಯ ಕಾನೂನು ಮತ್ತು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಆದ್ದರಿಂದ ಕಾಂಗ್ರೆಸ್ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಮನವಿ
ಕರ್ನಾಟಕ ವಿಧಾನಸಭಾ ಚುನಾವಣೆ 2023ಗೆ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲು ಪ್ರತಿ ಆಕಾಂಕ್ಷಿಯಿಂದ ಹಣವನ್ನು ಸಂಗ್ರಹಿಸಿದ್ದೇವೆ ಎಂದು ಡಿಕೆ ಶಿವಕುಮಾರ್ ವಿವರಿಸಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಹಕ್ಕನ್ನು ಚಲಾಯಿಸಲು, ಹಣ ತೆಗೆದುಕೊಂಡದರೆ ಅದು ಲಂಚ ತೆಗೆದುಕೊಂಡಂತಾಗುತ್ತದೆ. ಇದನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಮನವಿ ಮಾಡಲಾಗಿದೆ.
ಇದನ್ನೂ ಓದಿ: Karnataka Election 2023: 'ನನಗೆ ಇಬ್ಬರು ಪತ್ನಿಯರು ಇದ್ದಾರೆ'! ವೈರಲ್ ಆಯ್ತು ಎಎಪಿ ಅಭ್ಯರ್ಥಿಯ ನಾಮಿನೇಷನ್ ಅಫಿಡವಿಟ್
ಇನ್ನು, ಟಿಕೆಟ್ ಆಕಾಂಕ್ಷಿಗಳು ಹಣ ನೀಡಿರುವುದರಿಂದ ಅಭ್ಯರ್ಥಿ ಸಹ ಹಣ ಪಾವತಿ ಮಾಡಿರುತ್ತಾರೆ ಎಂಬುವುದು ಸ್ಪಷ್ಟವಾಗಿದೆ. ಲಂಚ ನೀಡಿದ ಅಭ್ಯರ್ಥಿಗಳು ಮುಂಬರುವ ಚುನಾವಣಾ ಪ್ರಕ್ರಿಯೆಯಿಂದ ಅನರ್ಹರಾಗುತ್ತಾರೆ. ಹಣವನ್ನು ತೆಗೆದುಕೊಂಡು ಬಿ ಫಾರ್ಮ್ ನೀಡುವುದು ಸಹ ಕಾನೂನು ಬಾಹಿರವಾಗಿದೆ. ಸದ್ಯ ಕಾಂಗ್ರೆಸ್ ಪಕ್ಷ, ಡಿ.ಕೆ ಶಿವಕುಮಾರ್ ತಮ್ಮ ಅಭ್ಯರ್ಥಿಗಳಿಗೆ ನೀಡಿದ ಎಲ್ಲಾ ಬಿ ಫಾರ್ಮ್‍ಗಳು ಅಕ್ರಮವಾಗಿದೆ. ಅವುಗಳನ್ನು ತಿರಸ್ಕರಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಮನವಿ
ಚುನಾವಣಾ ಪ್ರಕ್ರಿಯೆಯಲ್ಲಿ ಡಿ.ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷ ಚುನಾವಣಾ ಹಕ್ಕನ್ನು ಮುಕ್ತವಾಗಿ ಚಲಾಯಿಸಲು ಬಿಡದೆ ಮಧ್ಯ ಪ್ರವೇಶ ಮಾಡಿದೆ. ಹಣ ಪಡೆದು ಆಕಾಂಕ್ಷಿಗಳಿಗೆ ಬಿ ಪಾರಂ ನೀಡುವುದು ಕಾನೂನುಬಾಹಿರ. ಇದು ಚುನಾವಣಾ ಪ್ರಕ್ರಿಯೆಗೆ ಕಳಂಕವಾಗಿದೆ. ಆದ್ದರಿಂದ ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಕೋರಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಬೇಕಾಗಿದೆ. ಕಾಂಗ್ರೆಸ್ ಅಧ್ಯಕ್ಷರು ಮತ್ತು ಟಿಕೆಟ್‍ಗಾಗಿ ಲಂಚ ನೀಡಿದ ಎಲ್ಲಾ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಚುನಾವಣೆಗಳು ಮತ್ತು ಅಕ್ರಮ ಎಸಗುವ ಮೂಲಕ ನೀಡಲಾದ ಬಿ ಫಾರ್ಮ್‍ಗಳನ್ನು ತಿರಸ್ಕರಿಸಬೇಕು. ನ್ಯಾಯ ಮತ್ತು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲು ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ