ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ; ಸರ್ಕಾರ ಒಳಗೊಳಗೆ ಖುಷಿ ಪಡ್ತಿದೆ: UT Khader ಆರೋಪ

ಬಿಜೆಪಿ ಸರ್ಕಾರ ಈ ವಿಚಾರವಾಗಿ ಮೌನವಾಗಿದ್ದು, ಒಳಗೊಳಗೆ ಖುಷಿ ಪಡುತ್ತಿದೆ. ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ‌ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆರೋಪಿಸಿದರು.

ಯು.ಟಿ.ಖಾದರ್

ಯು.ಟಿ.ಖಾದರ್

  • Share this:
ಜಾತ್ರೆ(Fair)ಗಳಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ (Muslim Traders) ನಡೆಸುವುದಕ್ಕೆ ಹಿಂದೂ ಸಂಘಟನೆಗಳ (Hindu Organization)ವಿರೋಧಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು (Congress Leaders) ತಮ್ಮ ಅಸಮಾಧಾನ ಹೊರ ಹಾಕಿದರು. ಈ ಕುರಿತು ಮಾತನಾಡಿದ  ವಿಧಾನಸಭೆಯ ಕಾಂಗ್ರೆಸ್ ಉಪನಾಯಕ ಯು.ಟಿ ಖಾದರ್ (UT Khader), ಭಾರತ ದೇಶ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದೆ. ಇಲ್ಲಿ ಎಲ್ಲಾ ಧರ್ಮೀಯರು ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಆದರೆ, ಕೆಲವರು ಧರ್ಮಗಳ ನಡುವೆ ಕಂದಕವನ್ನ ಸೃಷ್ಟಿಸುತ್ತಿದ್ದಾರೆ. ಕರಾವಳಿ ಭಾಗದಲ್ಲಿ (Karnataka Coastal Area) ಕೆಲ ಹಿತಾಸಕ್ತಿಗಳು ಭಿತ್ತಿ ಪತ್ರಗಳನ್ನ ಹಾಕುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ, ದ್ವೇಷ ಸೃಷ್ಟಿಸಲು ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹಾಕಿರುವ ಬಗ್ಗೆ ಮುಲ್ಕಿ ಸೇರಿದಂತೆ ಕೆಲವೆಡೆ ಭಿತ್ತಿ ಪತ್ರಗಳನ್ನ ಹಾಕಲಾಗಿದೆ. ಇದೊಂದು ಅಸಹ್ಯ ಕೃತ್ಯ. ಇದಕ್ಕೆ ಹಿಂದೂ ಸಹೋದರರು ಬೆಂಬಲ ಕೊಡಬಾರದು.  ಬಿಜೆಪಿ ಸರ್ಕಾರ ಈ ವಿಚಾರವಾಗಿ ಮೌನವಾಗಿದ್ದು, ಒಳಗೊಳಗೆ ಖುಷಿ ಪಡುತ್ತಿದೆ. ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ‌ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆರೋಪಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

ಇನ್ನು ಇದೇ ವಿಷಯದ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಮುಸ್ಲಿಂ ವ್ಯಾಪಾರಸ್ಥರಿಗೆ ಜಾತ್ರೆಗಳಲ್ಲಿ ಅವಕಾಶ ನೀಡದ ವಿಚಾರದ ಬಗ್ಗೆ ನಾನು ಟಿವಿಯಲ್ಲಿ ನೋಡಿದ್ದೇನೆ. ಈ ಸಂಬಂಧ ಪೊಲೀಸ್ ವರದಿ ಕೇಳಿದ್ದೇನೆ. ಈ ರೀತಿ ಮನಸ್ಸುಗಳು ಒಡಯಬಾರದು, ಇದು ದುರಾದೃಷ್ಟ. ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡ್ತೇವೆ. ಶಾಂತಿ ಸುವ್ಯವಸ್ಥೆ ಕದಡದಂತೆ ನೋಡಿಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ: Durga Parameshwari Temple: ಮುಸ್ಲಿಂ ವ್ಯಾಪಾರಿ ಕಟ್ಟಿಸಿದ ದೇವಸ್ಥಾನಕ್ಕೇ ಮುಸ್ಲಿಮರಿಗೆ ನಿಷೇಧ

ಹಿಜಾಬ್ ತೀರ್ಪು ವಿರೋಧಿಸಿ ಒಂದು ಕೋಮಿನವರು ಅಂಗಡಿ ಬಂದ್ ಮಾಡಿದ್ರು. ಆ್ಯಕ್ಷನ್ ಗೆ ರಿಯಾಕ್ಷನ್ ಎನ್ನುವಂತೆ ಆಗಿದೆ. ನಾನು ಈ ಬಗ್ಗೆ ವರದಿ ಪಡೆಯುತ್ತೇ‌ನೆ ಎಂದು ಹೇಳಿದರು.

BSYಗೆ ಮಾಹಿತಿ ನೀಡಿದ ಯು.ಟಿ.ಖಾದರ್

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರ ವ್ಯಾಪಾರಕ್ಕೆ ನಿರಾಕರಣೆ ವಿಚಾರವನ್ನು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಪ್ರಶ್ನೋತ್ತರ ಬಳಿಕ ಶೂನ್ಯ ವೇಳೆಯಲ್ಲಿ ಈ ಕುರಿತು ಮಾತನಾಡಲು ಸ್ಪೀಕರ್ ಸಹ ಅನುಮತಿ ನೀಡಿದ್ದಾರೆ.

ಇನ್ನು ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಯು.ಟಿ.ಖಾದರ್ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತು ಮಾಹಿತಿ ನೀಡಿದರು.

ಏನಿದು ವಿವಾದ?

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಣ್ಯ ಪ್ರಸಿದ್ಧ ದೇವಸ್ಥಾನ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ (Durga Parameshwari Temple) ಜಾತ್ರೋತ್ಸವ ದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ (Muslim Traders) ವ್ಯಾಪಾರ ನಿಷೇಧ ಭಾರೀ ವಿವಾದವನ್ನು ಪಡೆದಿದೆ. ಮಾರ್ಚ್ 17 ರಿಂದ ಆರಂಭವಾದ ಜಾತ್ರೋತ್ಸವ ಮಾರ್ಚ್ 25ರವರೆಗೆ ನಡೆಯಲಿದೆ. ಮಾರ್ಚ್ 23 ರಂದು ಹಗಲು ರಥೋತ್ಸವ ನಡೆದರೆ, ಮಾರ್ಚ್ 24ರಂದು ರಾತ್ರಿ ರಥೋತ್ಸವ ನಡೆಯಲಿದೆ. ಮಾರ್ಚ್25 ರಂದು ದುರ್ಗಾಪರಮೇಶ್ವರಿಯ ಶಯನ ಮಹೋತ್ಸವ (Shayana Mahotsava) ನಡೆಯಲಿದೆ.

ಈ ಮೂರು ದಿನದಲ್ಲಿ ಬಪ್ಪನಾಡು ಕ್ಷೇತ್ರದಲ್ಲಿ ಕೋಟ್ಯಾಂತರ ರೂಪಾಯಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ಒಂದು ಕೋಟಿ ರೂಪಾಯಿಗೂ ಅಧಿಕ ಮಲ್ಲಿಗೆ ಹೂವು ಮಾರಾಟವಾಗುತ್ತದೆ. ಈ ಮಲ್ಲಿಗೆ ಹೂವಿನ ಮಾರಾಟವನ್ನು ಮುಸ್ಲಿಮರೇ ಮಾಡುತ್ತಿದ್ದು, ಈ ಬಾರಿ ಮಾತ್ರ ಮುಸ್ಲಿಮರಿಗೆ ಅವಕಾಶ ನಿರಾಕರಿಸಲಾಗಿದೆ.

ಇದನ್ನೂ ಓದಿ:  Karnataka Assembly: ‘ಯಡಿಯೂರಪ್ಪ ಬಿಟ್ರೆ ಬಿಜೆಪಿಯಲ್ಲಿ ಇನ್ಯಾರಿಗೂ ಜವಾಬ್ದಾರಿ ಇಲ್ಲ’ ಸದನದಲ್ಲಿ BSYರನ್ನು ಕೊಂಡಾಡಿದ ಸಿದ್ದು

ಹಿಜಾಬ್‌‌‌ ವಿಚಾರವಾಗಿ ಅಂಗಡಿ ಬಂದ್ ಮಾಡಿದ ಮುಸ್ಲಿಂ ವ್ಯಾಪಾರಿಗಳಿಗೆ ಸೆಡ್ಡು ಹೊಡೆಯಲು ಹಿಂದೂ ಸಂಘಟನೆಗಳು ಮುಸ್ಲಿಂ ವ್ಯಾಪಾರಿಗಳಿಗೆ ಜಾತ್ರೋತ್ಸವದಲ್ಲಿ ಅವಕಾಶ ನೀಡಬಾರದೆಂದು ಒತ್ತಾಯ ಮಾಡಿದ್ದಾರೆ.
Published by:Mahmadrafik K
First published: