Ayodhya Verdict: ಬೆಂಗಳೂರಿನಾದ್ಯಂತ ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳು ಬಂದ್

ಬಿಗಿ ಪೊಲೀಸ್​​ ಬಂದೋಬಸ್ತ್​​ ನಡುವೆಯೂ ಏನಾದರೂ ಅನಾಹುತ ಸಂಭವಿಸಬಹುದು ಎಂದು ನಗರದ ಗೋರಿಪಾಳ್ಯದಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದೆ.

news18-kannada
Updated:November 9, 2019, 10:59 AM IST
Ayodhya Verdict: ಬೆಂಗಳೂರಿನಾದ್ಯಂತ ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳು ಬಂದ್
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ನ.09): ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಸಂಬಂಧ ಸುಪ್ರೀಂಕೋರ್ಟ್‌ ಇಂದು ತೀರ್ಪು ನೀಡಲಿದೆ. ಸುಪ್ರೀಂಕೋರ್ಟ್​ನಿಂದ ಅಂತಿಮ ತೀರ್ಪು ಹೊರ ಬೀಳಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 144 ಸೆಕ್ಷನ್​​ ಜಾರಿ ಮಾಡಲಾಗಿದೆ. ಪೊಲೀಸರು ಕರ್ಪ್ಯೂ ಜಾರಿಗೊಳಿಸಿ ಎಲ್ಲಾ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ತೀರ್ಪು ಏನೇ ಬರಲಿ ಗಲಭೆ ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಿಎಂ ಬಿ.ಎಸ್​​ ಯಡಿಯೂರಪ್ಪ ಮತ್ತಲವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತ ಸಾರ್ವಜನಿಕರು ಬೆಂಗಳೂರಿನಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡುತ್ತಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಂತೆ ಬೆಂಗಳೂರಿನಲ್ಲಿಯೂ ಪೊಲೀಸರು 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ಗಲಭೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರಾದ್ಯಂತ ಬಿಗಿ ಪೊಲೀಸ್​​ ಬಂದೋಬಸ್ತ್​​​​ ಏರ್ಪಡಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಸೇರಿದಂತೆ ಹತ್ತಾರು ಸಾವಿರ ಸಿಬ್ಬಂದಿ ನಿಯೋಜಿಸಲಾಗಿದ್ದು, 50 ಕೆಎಸ್​ಆರ್​​ಪಿ ಮತ್ತು 30 ಸಿಎಆರ್ ಜತೆಗೆ ಒಂದು ಸಿಆರ್​​ಪಿಎಫ್ ತುಕಡಿ ನಿಯೋಜಿಸಲಾಗಿದೆ.

ಬಿಗಿ ಪೊಲೀಸ್​​ ಬಂದೋಬಸ್ತ್​​ ನಡುವೆಯೂ ಏನಾದರೂ ಅನಾಹುತ ಸಂಭವಿಸಬಹುದು ಎಂದು ನಗರದ ಗೋರಿಪಾಳ್ಯದಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದೆ. ಶಾಂತಿನಗರ, ಶಿವಾಜಿನಗರ, ಮಜೆಸ್ಟಿಕ್​​​, ಕೆ.ಆರ್​​ ಮಾರ್ಕೆಟ್​​ ಸೇರಿದಂತೆ ಚಾಮರಾಮಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನರ ಓಡಾಟ ಕಡಿಮೆಯಾಗಿದೆ.

ಇದನ್ನೂ ಓದಿ: Ayodhya Verdict: ಸೋಷಿಯಲ್‌ ಮೀಡಿಯಾ ಬಳಕೆದಾರರಿಗೆ ಪೊಲೀಸ್​​​ ಇಲಾಖೆ ಮಹತ್ವದ​ ಸೂಚನೆ

ನಗರಾದ್ಯಂತ ಪೊಲೀಸ್​​ ಬಿಗಿ ಬಂದೋಬಸ್ತ್​​ ಮಾಡಲಾಗಿದೆ. ಜನ ತೀರ್ಪಿನ ಬಳಿಕ ಪರಿಸ್ಥಿತಿ ನೋಡಿಕೊಂಡು ಅಂಗಡಿ ತೆರೆಯಲು ನಿರ್ಧರಿಸಿದ್ದಾರೆ. ಈಗಾಗಲೇ ಬೆಳಿಗ್ಗೆ 6ರಿಂದ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸೆಕ್ಷನ್ 144 ಬೆಳಿಗ್ಗೆ 7ರಿಂದ ರಾತ್ರಿ 12 ರವರೆಗೂ ಜಾರಿಯಲ್ಲಿ ಇರಲಿದೆ. ತೀರ್ಪಿನ ನಂತರ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಿಷೇಧ ಹೇರಲಾಗಿದೆ.
----------
First published:November 9, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading