ರಾಯಚೂರು: ಮನೆಯಲ್ಲಿ ಅಳವಡಿಸಿದ್ದ ಎಸಿ (Air Cooler) ಸ್ಫೋಟಗೊಂಡು ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಶಕ್ತಿನಗರ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಾವು ಯಾವಾಗ ಯಾವ ರೂಪದಲ್ಲಿ ಬರುತ್ತದೆ ಎಂದು ತಿಳಿಯುವುದು ಕಷ್ಟ ಎನ್ನುವುದಕ್ಕೆ ಇದೇ ಸಾಕ್ಷಿ (Proof) ಮನೆಯಲ್ಲಿ ಸುಮ್ಮನೇ ಕೂತರೂ ಸಾಯುವ ಸಮಯ ಬಂದರೆ ಎಳೆದುಕೊಂಡು ಹೋಗುತ್ತದೆ ಎನ್ನುತ್ತಾರಲ್ಲಾ ಅದು ಇದಕ್ಕೆ. ಎಳೆ ವಯಸ್ಸಿನವರ ಜೀವ (Life) ಎಸಿ ಇಂದ ಬಲಿಯಾಗಿದೆ.
ಮೃತರನ್ನು ರಂಜಿತಾ (33) ಮತ್ತು ಆಕೆಯ ಮಕ್ಕಳಾದ ಮೃದುಲಾ (13) ಮತ್ತು ತಾರುಣ್ಯ (5) ಎಂದು ಗುರುತಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಏನಾಗಿದೆ ಎಂಬ ಮಾಹಿತಿಯನ್ನು ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ನಿಜವಾಗಿ ನಡೆದ ಎಲ್ಲಾ ಘಟನೆಯ ಡೀಟೆಲ್ಸ್ ಇಲ್ಲಿದೆ ಓದಿ.
ಏರ್ ಕಂಡಿಷನರ್ ಸ್ಫೋಟದಿಂದ ಬೆಂಕಿ ಹತ್ತಿಕೊಂಡಿದೆ ಮನೆ ತುಂಬಾ ಬೆಂಕಿ ಉರಿದ ಕಾರಣ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ. ಅಷ್ಟೇ ಅಲ್ಲ ಮನೆಯ ಕೊಠಡಿಯ ತುಂಬೆಲ್ಲಾ ಒಂದೇ ಸಮನೆ ಹೊತ್ತಿ ಉರಿದ ಬೆಂಕಿ ತಾಯಿ ಹಾಗೂ ಮಗುವಿಗೂ ತಗುಲಿದೆ. ಇದರಿಂದಾಗಿ ತಾಯಿ ಮಗು ಸಜೀವನ ದಹನವಾಗಿದ್ದಾರೆ.
ಇದನ್ನೂ ಓದಿ: Basavaraj Bommai: ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ನಿನ್ನೆ ಸಂಜೆ ಈ ಘೋರ ಘಟನೆ ನಡೆದಿದೆ. ರಾಯಚೂರು ಡಿವೈಎಸ್ಪಿ ಶಕ್ತಿನಗರ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಎಸಿ ಸ್ಫೋಟಕ್ಕೆ ತಕ್ಷಣದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಇವರಿಬ್ಬರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಇದರ ಮಾಹಿತಿ ಇನ್ನೂ ಹೊರಬಿದ್ದಿಲ್ಲ.
ಮೃತ ಮಹಿಳೆ ಮತ್ತು ಆಕೆಯ ಪತಿ ಸಿದ್ಧಲಿಂಗಯ್ಯ ಇಬ್ಬರೂ ಮಂಡ್ಯ ಜಿಲ್ಲೆಯವರು. ಮೃತ ರಂಜಿತಾ ಕುಟುಂಬ ಸದಸ್ಯರಿಗೆ ಮಾಹಿತಿ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ. ರಂಜಿತಾ ಕುಟುಂಬದವರು ಬಂದ ನಂತರ ಅವರ ದೂರಿನ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹವಾನಿಯಂತ್ರಣ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಇದು ತೀರಾ ಸಾಮಾನ್ಯವಾದ ಕಾರಣ, ಪೊಲೀಸರು ಆಳವಾದ ತನಿಖೆಯನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ವಾಹನ ಅಪಘಾತ ಜಿಲ್ಲಾಸ್ಪತ್ರೆಗೆ ದಾಖಲಾದ
ಜಿಲ್ಲೆಯ ಭಾನಾಪುರ ಬಳಿ ತಡರಾತ್ರಿ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಚಿವ ಹಾಲಪ್ಪ ಆಚಾರ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.
ಬಳಿಕ ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಸ್ತೆಯಲ್ಲಿ ಸಂಚರಿಸುವಾಗ ಜಾಗೃತರಾಗಿರಬೇಕು. ಇಂತಹ ಘಟನೆಗಳು ನಡೆಯಬಾರದು, ಈ ವರ್ಷದಲ್ಲಿ ನನ್ನ ಕ್ಷೇತ್ರದಲ್ಲಿ ರೀತಿಯ ದುರ್ಘಟನೆಗಳು ನಡೆದಿರಲಿಲ್ಲ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಜೊತೆಗೆ ಘಟನೆಗೆ ಕಾರಣವಾದ ಇನ್ನೊಂದು ವಾಹನದ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ