Jagadguru Charukeerthi Swamiji: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ

ಚಾರುಕೀರ್ತಿ ಭಟ್ಟಾರಕ ಶ್ರೀ

ಚಾರುಕೀರ್ತಿ ಭಟ್ಟಾರಕ ಶ್ರೀ

ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀ ನಿಧನರಾಗದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ವಿಧಿವಶರಾಗಿದ್ದಾರೆ.

  • News18 Kannada
  • 2-MIN READ
  • Last Updated :
  • Hassan, India
  • Share this:

ಹಾಸನ(ಮಾ.23): ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಶ್ರೀಗಳ ನಿಧನ ವಿಚಾರ ತಿಳಿದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.


1949ರ ಮೇ 3ರಂದು ಜನಿಸಿದ ಶ್ರೀಗಳು, 1970ರಲ್ಲಿ ಮಠದ ಪೀಠಾಧಿಪತಿಗಳಾಗಿ ನೇಮಕಗೊಂಡಿದ್ದರು. ಮೂಲತಃ ಕಾರ್ಕಳದ ವರಂಗ ಗ್ರಾಮದವರು ಅವರ ಪೂರ್ವಾಶ್ರಮದ ಹೆಸರು ರತ್ನವರ್ಮ. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದ ಅವರು ಬಳಿಕ ಮೈಸೂರು ಯೂನಿವರ್ಸಿಟಿಯಲ್ಲಿ ಇತಿಹಾಸ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.


ಇದನ್ನೂ ಓದಿ: Karnataka Assembly Elections: ಮೀಸಲು ಕ್ಷೇತ್ರ, ಜೆಡಿಎಸ್ ಭದ್ರಕೋಟೆ ಸಕಲೇಶಪುರಕ್ಕೆ ಲಗ್ಗೆ ಇಡುತ್ತಾ ಬಿಜೆಪಿ?


ಇಷ್ಟೇ ಅಲ್ಲದೇ ಚಾರುಕೀರ್ತಿ ಭಟ್ಟಾರಕ ಶ್ರೀಗಳು ಪ್ರಾಕೃತ, ಸಂಸ್ಕೃತ ಹಾಗೂ ಕನ್ನಡ ಭಾಷೆಯಲ್ಲಿ ಪರಿಣತಿ ಹೊಂದಿದ್ದರು. ಸ್ವಸ್ಥಿ ಶ್ರಿ ಚಾರುಕೀರ್ತಿ ಎನ್ನುವ ಬಿರುದಾಂಕಿತ ಜೈನಭಟ್ಟಾರಕ ಶ್ರೀಗಳಿಗೆ ದೇಶಾದ್ಯಂತ ಅಪಾರ ಭಕ್ತವರ್ಗವಿದೆ.


ಶಿಕ್ಷಣಕ್ಕೆ ಆದ್ಯತೆ ನೀಡಿದ್ದ ಶ್ರೀಗಳು ಪಾಲಿಟೆಕ್ನಿಕ್, ಇಂಜಿನಿಯರಿಂಗ್, ನರ್ಸಿಂಗ್, ಪ್ರಾಕೃತ ವಿವಿ ಸ್ಥಾಪನೆ ಮಾಡಿದ್ದರು. ಅಲ್ಲದೇ ನೂರಾರು ಜೈನ‌ ದೇವಾಲಯ ಪುನರುಜ್ಜೀವನ ಗೊಳಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ. 12 ವರ್ಷ ವಾಹನ ಸಂಚಾರವನ್ನೇ ಮಾಡದೆ ದವಳ ಮತ್ತು ಜಯದವಳ ಆಗಮ ಗ್ರಂಥ ರಚನೆ ಮಾಡಿದ್ದ ಶ್ರೀಗಳು, ಇದುವರೆಗೆ ಮೊಬೈಲ್ ಬಳಕೆ ಮಾಡಿಲ್ಲ ಎಂಬುವುದು ಮತ್ತೊಂದು ವಿಶೇಷ.




ಇನ್ನು ಚಾರುಕೀರ್ತಿ ಭಟ್ಟಾರಕ ಶ್ರೀಗಳು 1981ರ ಮಹಾಮಸ್ತಕಾಭಿಷೇಕ ಯಶಸ್ವಿಯಾಗಿ ನೆರವೇರಿಸಿದ್ದಕ್ಕೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯಿಂದ ಕರ್ಮಯೋಗಿ ಎಂಬ ಬಿರುದೂ ಪಡೆದಿದ್ದರು. ಶ್ರವಣ ಬೆಳಗೊಳದಲ್ಲಿ ನಡೆದ ನಾಲ್ಕು ಮಹಾಮಸ್ತಕಾಭಿಷೇಕ ಇವರ ಸುಪರ್ದಿಯಲ್ಲಿ ನೆರವೇರಿತ್ತು ಎಂಬುವುದು ಉಲ್ಲೇಖನೀಯ.

top videos
    First published: