Karnataka Elections: ಇಂದು ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ

ಮಾಜಿ ಸಿಎಂ ಸಿದ್ದರಾಮಯ್ಯ/ ಸಿಎಂ ಬಸವರಾಜ ಬೊಮ್ಮಾಯಿ

ಮಾಜಿ ಸಿಎಂ ಸಿದ್ದರಾಮಯ್ಯ/ ಸಿಎಂ ಬಸವರಾಜ ಬೊಮ್ಮಾಯಿ

Nomination: ಇಂದು ಮಧ್ಯಾಹ್ನ 2 ಗಂಟೆಗೆ ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

  • Share this:

ಬೆಂಗಳೂರು: ಹಾವೇರಿಯ ಶಿಗ್ಗಾಂವಿ (Shiggaon Constituency) ವಿಧಾನಸಭಾ ಕ್ಷೇತ್ರದಿಂದ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ನಾಮಪತ್ರ ಸಲ್ಲಿಸಲಿದ್ದು, ನಾಮಪತ್ರ ಸಲ್ಲಿಕೆಯ (Nomination) ಮೆರವಣಿಗೆಯಲ್ಲಿ ನಟ ಸುದೀಪ್ (Actor Sudeep) ಭಾಗಿಯಾಗಲಿದ್ದಾರೆ. ಸಿಎಂಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (BJP President JP Nadda) ಸಾಥ್ ನೀಡಲಿದ್ದಾರೆ. ಶಿಗ್ಗಾಂವಿ ಪಟ್ಟಣದಲ್ಲಿ 11 ಗಂಟೆಗೆ ಬೊಮ್ಮಾಯಿ ರೋಡ್ ಶೋ ನಡೆಯಲಿದ್ದು, ರಾಣಿ ಚೆನ್ನಮ್ಮ ವೃತ್ತದಿಂದ ಕ್ರೀಡಾಂಗಣದವರೆಗೂ ರೋಡ್ ಶೋ ನಡೆಯಲಿದೆ.


ಇಂದು ಮಧ್ಯಾಹ್ನ 2 ಗಂಟೆಗೆ ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಸಿದ್ದರಾಮನ ಹುಂಡಿ ಮತ್ತು ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.


ಬೆಳಗ್ಗೆ 10.30ಕ್ಕೆ ಉತ್ತನಹಳ್ಳಿ, ಬೆಳಗ್ಗೆ 11ಕ್ಕೆ ನಂಜನಗೂಡಿನ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2ಗಂಟೆಗೆ ನಂಜನಗೂಡಿನ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಸಂಜೆ 5ಗಂಟೆಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.




ವಿಜಯೇಂದ್ರ ನಾಮಪತ್ರ ಸಲ್ಲಿಕೆ


ಮಾಜಿ ಸಿಎಂ ಬಿಎಸ್​  ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಇಂದು  ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಶಿಕಾರಿಪುರ ಬಿಜೆಪಿ ಅಭ್ಯರ್ಥಿಯಾಗಿ ಬಿವೈ ವಿಜಯೇಂದ್ರ ಬೆಳಗ್ಗೆ 9:30 ಶಿಕಾರಿಪುರದ ಶ್ರೀ ಹುಚ್ಚುರಾಯ ಸ್ವಾಮೀ ದೇವಾಲಯ ಹಾಗೂ ಶ್ರೀ ರಾಘವೇಂದ್ರ ಸ್ವಾಮೀ ಮಠಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಶಿಕಾರಿಪುರ ಪ್ರಮುಖ ರಸ್ತೆಗಳಲ್ಲಿ ತೆರದ ಜೀಪಿನಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಬಳಿಕ ನಾಮಪತ್ರ ಸಲ್ಲಿಸಲಿದ್ದಾರೆ.


ಇದನ್ನೂ ಓದಿ: Mangaluru: ಹಾಡಹಗಲೇ ಬಿಜೆಪಿ ಕಾರ್ಯಕರ್ತನ ಹತ್ಯೆ; ನಾಲ್ವರು ಅರೆಸ್ಟ್


ಸುನಿಲ್ ಕುಮಾರ್ ನಾಮಪತ್ರ ಸಲ್ಲಿಕೆ


ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಕಾರ್ಕಳ‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ವಿ.ಸುನಿಲ್ ಕುಮಾರ್, ಸ್ವರಾಜ್ ಮೈದಾನದಿಂದ ಕಾರ್ಕಳ ನಗರದಾದ್ಯಂತ rally ನಡೆಸಿ ಬಳಿಕ ನಾಮಪತ್ರ ಸಲ್ಲಿಸಲಿದ್ದಾರೆ.

top videos
    First published: