ಉಪಚುನಾವಣೆ ಶಾಕ್: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ರಾಜೀನಾಮೆ

ಈ ಉಪಚುನಾವಣೆಯು ಸಿದ್ದರಾಮಯ್ಯ ಪಾಲಿಗೆ ಪ್ರತಿಷ್ಠೆಯ ವಿಷಯವಾಗಿತ್ತು. ಕಾಂಗ್ರೆಸ್​ನೊಳಗಿನ ಆಂತರಿಕ ಮುಸುಕಿನ ಗುದ್ದಾಟದ ನಡುವೆಯೂ ಅವರು ಈ ಚುನಾವಣೆಯಲ್ಲಿ ಎಡಬಿಡದೇ ಕೆಲಸ ಮಾಡಿದ್ದರು. ಆದರೆ, ಬಿಜೆಪಿಯ ಗೆಲುವನ್ನು ತಡೆಗಟ್ಟಲು ಅವರಿಂದ ಸಾಧ್ಯವಾಗಿಲ್ಲ.

ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್.

ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್.

 • News18
 • Last Updated :
 • Share this:
  ಬೆಂಗಳೂರು(ಡಿ. 09): ಉಪಚುನಾವಣೆಯಲ್ಲಿ ಹೀನಾಯ ಸೋಲುಂಡ ಕಾಂಗ್ರೆಸ್ ಪಕ್ಷದಲ್ಲಿ ಅಲ್ಲೋಲಕಲ್ಲೋಲದ ಸ್ಥಿತಿ ನಿರ್ಮಾಣವಾಗಿದೆ. ಸೋಲಿನ ಹೊಣೆ ಹೊತ್ತು ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್​ ಶಾಸಕಾಂಗ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರಿಬ್ಬರೂ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಹೈಕಮಾಂಡ್​ಗೆ ಸಲ್ಲಿಸಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ರಾಜೀನಾಮೆಯನ್ನು ಅಂಗೀಕರಿಸಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.

  ಡಿ. 5ರಂದು 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು ಬಿಜೆಪಿ 12 ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರವನ್ನು ಭದ್ರಪಡಿಸಿಕೊಂಡಿದೆ. ಕನಿಷ್ಠ 9 ಕ್ಷೇತ್ರಗಳಲ್ಲಿ ಗೆಲುವು ಕಾಣುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ ಪಕ್ಷ ಕೇವಲ 2 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಹುಣಸೂರು ಮತ್ತು ಶಿವಾಜಿನಗರ ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಉಳಿದ ಕ್ಷೇತ್ರಗಳು ಪಕ್ಷದ ಕೈ ತಪ್ಪಿವೆ.

  ಇದನ್ನೂ ಓದಿ: ಹೊಸಕೋಟೆಯಲ್ಲಿ ಕುರುಬ-ಒಕ್ಕಲಿಗ ಚಕ್ರವ್ಯೂಹಕ್ಕೆ ಸಿಕ್ಕು ಸೋತರಾ ಎಂಟಿಬಿ ನಾಗರಾಜ್?

  ಈ ಉಪಚುನಾವಣೆಯು ಸಿದ್ದರಾಮಯ್ಯ ಪಾಲಿಗೆ ಪ್ರತಿಷ್ಠೆಯ ವಿಷಯವಾಗಿತ್ತು. ಕಾಂಗ್ರೆಸ್​ನೊಳಗಿನ ಆಂತರಿಕ ಮುಸುಕಿನ ಗುದ್ದಾಟದ ನಡುವೆಯೂ ಅವರು ಈ ಚುನಾವಣೆಯಲ್ಲಿ ಎಡಬಿಡದೇ ಕೆಲಸ ಮಾಡಿದ್ದರು. ಆದರೆ, ಬಿಜೆಪಿಯ ಗೆಲುವನ್ನು ತಡೆಗಟ್ಟಲು ಅವರಿಂದ ಸಾಧ್ಯವಾಗಿಲ್ಲ.

  ಕಾಂಗ್ರೆಸ್​ ಶಾಸಕಾಂಗ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದರ ಕುರಿತಾಗಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ಜನ ಅನರ್ಹ ಶಾಸಕರನ್ನು ಸೋಲಿಸುತ್ತಾರೆ ಎಂದು ಭಾವಿಸಿದ್ದೆ. ಆದರೆ ನನ್ನ ನಂಬಿಕೆ ಹುಸಿಯಾಗಿತ್ತು. ಹಾಗಾಗಿ ಕಾಂಗ್ರೆಸ್​ ಹೈಕಮಾಂಡ್​​ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದೇನೆ ಎಂದರು.

  ಇನ್ನು ದಿನೇಶ್ ಗುಂಡೂರಾವ್ ಅವರು ಶೀಘ್ರದಲ್ಲೇ ಸುದ್ದಿಗೋಷ್ಠಿ ಉದ್ದೇಶಿಸಿ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ.

  ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

  First published: