ರಾಜ್ಯ ಕಾಂಗ್ರೆಸ್ ನಾಯಕರ ಹೆಗಲಿಗೆ ಮನವೊಲೈಕೆ ಟಾಸ್ಕ್; ರೆಸಾರ್ಟ್ ಮುಂದೆ ಪ್ರತಿಭಟನೆಗೆ ಸಿದ್ದರಾಮಯ್ಯ, ಡಿಕೆಶಿ ತಂಡ‌ ಸಿದ್ಧತೆ

ಕಾಂಗ್ರೆಸ್‌ ಹೈಕಮಾಂಡ್‌ನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಮಾಜಿ ಸಿದ್ದರಾಮಯ್ಯ ಮೇಲೆ ಒತ್ತಡ ಹೆಚ್ಚಾಗಿದ್ದು, ಅತೃಪ್ತರ ಮನವೋಲಿಸುವ ಟಾಸ್ಕ್ ನೀಡಲಾಗಿದೆ. ಹೀಗಾಗಿ  ಕಾಂಗ್ರೆಸ್ ಅತೃಪ್ತ ಶಾಸಕರು ಉಳಿದುಕೊಂಡಿರುವ ರಮಾಡ ರೆಸಾರ್ಟ್‌ ಎದುರು ಈ ಇಬ್ಬರೂ ನಾಯಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಲಾಗಿದೆ ಎನ್ನಲಾಗಿದೆ.

MAshok Kumar | news18-kannada
Updated:March 18, 2020, 2:57 PM IST
ರಾಜ್ಯ ಕಾಂಗ್ರೆಸ್ ನಾಯಕರ ಹೆಗಲಿಗೆ ಮನವೊಲೈಕೆ ಟಾಸ್ಕ್; ರೆಸಾರ್ಟ್ ಮುಂದೆ ಪ್ರತಿಭಟನೆಗೆ ಸಿದ್ದರಾಮಯ್ಯ, ಡಿಕೆಶಿ ತಂಡ‌ ಸಿದ್ಧತೆ
ಡಿ.ಕೆ. ಶಿವಕುಮಾರ್‍ - ಸಿದ್ದರಾಮಯ್ಯ.
  • Share this:
ಬೆಂಗಳೂರು (ಮಾರ್ಚ್‌ 18); ನಗರದಲ್ಲಿ ಬೀಡು ಬಿಟ್ಟಿರುವ ಮಧ್ಯಪ್ರದೇಶದ ಅತೃಪ್ತ ಶಾಸಕರನ್ನು ಮನವೋಲೈಸುವ ಜವಾಬ್ದಾರಿಯನ್ನು ಕಾಂಗ್ರೆಸ್ ಹೈ ಕಮಾಂಡ್‌ ರಾಜ್ಯ ನಾಯಕರಿಗೆ ನೀಡಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಯಲಹಂಕದ ರಮಾಡ ರೆಸಾರ್ಟ್‌ ಎದುರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದಾರೆ. ಪರಿಣಾಮ ಡಿಸಿಪಿ ರವಿ ಚೆನ್ನಣ್ಣನವರ್‍ ಅವರ ನೇತೃತ್ವದಲ್ಲಿ ರೆಸಾರ್ಟ್‌‌ಗೆ ಬಿಗಿ ಭದ್ರತೆ ನೀಡಲಾಗಿದೆ.

ಮಧ್ಯಪ್ರದೇಶದ ಮಾಜಿ ಕಾಂಗ್ರೆಸ್‌ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿದ್ದು ಅವರ ಬೆಂಬಲಿಗ 22 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪರಿಣಾಮ ಕಾಂಗ್ರೆಸ್ ಪಕ್ಷದ ಕಮಲನಾಥ್ ನೇತೃತ್ವದ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಆದರೆ, ಮಧ್ಯಪ್ರದೇಶದಲ್ಲಿ ರಾಜೀನಾಮೆ ನೀಡಿರುವ ಎಲ್ಲಾ ಶಾಸಕರೂ ಬಿಜೆಪಿ ನಾಯಕರ ಭದ್ರತೆಯಲ್ಲಿ ಬೆಂಗಳೂರಿನ ಐಶಾರಾಮಿ ರೆಸಾರ್ಟ್‌‌ನಲ್ಲಿ ಆಶ್ರಯಪಡೆದಿದ್ದಾರೆ.

ಇವರ ಮನವೋಲಿಸಲು ಕಾಂಗ್ರೆಸ್ ನಾಯಕರು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ. ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಇಂದು ಇದೇ ಕಾರಣಕ್ಕೆ ಬೆಂಗಳೂರಿಗೆ ಆಗಮಿಸಿದ್ದರು. ಆದರೆ, ಅವರಿಗೆ ಕಾಂಗ್ರೆಸ್ ಅತೃಪ್ತ ಶಾಸಕರು ಇರುವ ರೆಸಾರ್ಟ್‌‌ಗೆ ಪ್ರವೇಶ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಅಲ್ಲದೆ ದಿಗ್ವಿಜಯ್ ಸಿಂಗ್ ಅನ್ನು ಬಂಧಿಸಿ ಎಫ್‌ಐಆರ್ ದಾಖಲಿಸಿ ನಂತರ ಬಿಡುಗಡೆ ಮಾಡಲಾಯಿತು. ಅಲ್ಲದೆ, ಯಾವುದೇ ಕಾಂಗ್ರೆಸ್‌ ನಾಯಕರಿಗೂ ರೆಸಾರ್ಟ್‌ ಬಳಿ ಪ್ರವೇಶ ನಿಷೇಧಿಸಲಾಗಿದೆ.

 

ಕಾಂಗ್ರೆಸ್‌ ಹೈಕಮಾಂಡ್‌ನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಮಾಜಿ ಸಿದ್ದರಾಮಯ್ಯ ಮೇಲೆ ಒತ್ತಡ ಹೆಚ್ಚಾಗಿದ್ದು, ಅತೃಪ್ತರ ಮನವೋಲಿಸುವ ಟಾಸ್ಕ್ ನೀಡಲಾಗಿದೆ. ಹೀಗಾಗಿ  ಕಾಂಗ್ರೆಸ್ ಅತೃಪ್ತ ಶಾಸಕರು ಉಳಿದುಕೊಂಡಿರುವ ರಮಾಡ ರೆಸಾರ್ಟ್‌ ಎದುರು ಈ ಇಬ್ಬರೂ ನಾಯಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಯೋಜನೆ ರೂಪಿಸಲಾಗಿದೆ ಎನ್ನಲಾಗಿದೆ. ಪರಿಣಾಮ ಈ ರೆಸಾರ್ಟ್‌ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ : ಅಮೃತಹಳ್ಳಿ ಪೊಲೀಸ್ ಠಾಣೆಯಿಂದ ದಿಗ್ವಿಜಯ್ ಸಿಂಗ್ ಮತ್ತಿತರರು ಬಿಡುಗಡೆ; ಎಫ್ಐಆರ್ ದಾಖಲು
First published:March 18, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading