• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Siddaramaiah Oath Ceremony: ಇಂದಿನಿಂದ ಜೋಡೆತ್ತಿನ ಪರ್ವ; ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Siddaramaiah Oath Ceremony: ಇಂದಿನಿಂದ ಜೋಡೆತ್ತಿನ ಪರ್ವ; ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

Karnataka CM And DCM Oath Taking: ಡಾ.ಜಿ.ಪರಮೇಶ್ವರ್, ಕೆ.ಹೆಚ್​.ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ ಮತ್ತು ಬಿಝೆಡ್​ ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

  • News18 Kannada
  • 2-MIN READ
  • Last Updated :
  • Karnataka, India
  • Share this:

ಬೆಂಗಳೂರು: ಕಂಠೀರವ ಕ್ರೀಡಾಂಗಣದ (Kantheerava Stadium) ಬೃಹತ್ ವೇದಿಕೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಮತ್ತು ಉಪ ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್ (DK Shivakumar) ಪ್ರಮಾಣ ವಚನ ಸ್ವೀಕರಿಸಿದರು. ಉಭಯ ನಾಯಕರ ಜೊತೆಯಲ್ಲಿ ಸಚಿವರಾಗಿ ಡಾ.ಜಿ.ಪರಮೇಶ್ವರ್, ಕೆ.ಹೆಚ್​.ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ ಮತ್ತು ಬಿಝೆಡ್​ ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶುಕ್ರವಾರ ಸುಮಾರು 27 ಶಾಸಕರು ಪ್ರಮಾಣವಚನ ಸ್ವೀಕರಿಸ್ತಾರೆ ಎಂದು ಹೇಳಲಾಗಿತ್ತು. ಹೈಕಮಾಂಡ್ (Congress High Command) ಗ್ರೀನ್ ಸಿಗ್ನಲ್ ನೀಡದ ಹಿನ್ನೆಲೆ ಪ್ರಮುಖ ಸಮುದಾಯದ ಎಂಟು ಜನರು ಮೊದಲ ಹಂತದಲ್ಲಿ ಸಂಪುಟ ಸೇರ್ಪಡೆಯಾಗಿದ್ದಾರೆ.


ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್, ಮಧ್ಯಪ್ರದೇಶ ಮಾಜಿ ಸಿಎಂ ಕಮಲ್‌ನಾಥ್ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ಕೆಸಿ ವೇಣುಗೋಪಾಲ್, ರಣ್​ದೀಪ್​ ಸುರ್ಜೇವಾಲಾ ಸೇರಿದಂತೆ ಬಹುತೇಕ ಗಣ್ಯರು ಪದಗ್ರಹಣಕ್ಕೆ ಸಾಕ್ಷಿಯಾದರು.


ಡಿಕೆ ಶಿವಕುಮಾರ್-ರಾಹಲ್ ಗಾಂಧಿ-ಸಿದ್ದರಾಮಯ್ಯ


ಅಧಿಕಾರಿಗಳ  ಜೊತೆ ಚರ್ಚೆ


ಪದಗ್ರಹಣ ಕಾರ್ಯಕ್ರಮಕ್ಕೂ ಮುನ್ನ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ.




ಇದನ್ನೂ ಓದಿ: Karnataka CM Oath Taking Ceremony Live: ಶಿವ-ರಾಮಯ್ಯ ಸರ್ಕಾರ, ಕಂಠೀರವ ಸ್ಟೇಡಿಯಂನಲ್ಲಿ ಅಭಿಮಾನಿಗಳ ದಂಡು

top videos


    ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿ ISN ಪ್ರಸಾದ್ ಸೇರಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸುತ್ತಿದ್ದ, ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ 5 ಗ್ಯಾರಂಟಿ ಗಳ ಘೋಷಣೆಗೆ ತಯಾರಿ ನಡೆಸಲಾಗುತ್ತಿದೆ.

    First published: