• Home
  • »
  • News
  • »
  • state
  • »
  • Sidddaramaiah: ಮದುವೆ ಮಂಟಪದಲ್ಲಿ ಆಪ್ತರ ಪರ ಮತ ಕೇಳಿ ಡಿಕೆಶಿಗೆ ಟಾಂಗ್ ಕೊಟ್ರಾ ಸಿದ್ದರಾಮಯ್ಯ?

Sidddaramaiah: ಮದುವೆ ಮಂಟಪದಲ್ಲಿ ಆಪ್ತರ ಪರ ಮತ ಕೇಳಿ ಡಿಕೆಶಿಗೆ ಟಾಂಗ್ ಕೊಟ್ರಾ ಸಿದ್ದರಾಮಯ್ಯ?

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​

ಟಿಕೆಟ್ ನೀಡುವ ಮೊದಲೇ ತಮ್ಮ ಆಪ್ತರಿಗೆ ಚುನಾವಣೆಯಲ್ಲಿ ಮತ ನೀಡುವಂತೆ ಮನವಿ ಮಾಡಿಕೊಂಡಿರುವ ಸಿದ್ದರಾಮಯ್ಯ ಪರೋಕ್ಷವಾಗಿ ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟಿದ್ದಾರೆ.

  • News18 Kannada
  • Last Updated :
  • Karnataka, India
  • Share this:

ವಿಧಾನಸಭಾ ಚುನಾವಣೆಗೆ (Assembly Election 2023) ಬೆರಳಣಿಕೆಯ ತಿಂಗಳು ಉಳಿದಿವೆ. ಚುನಾವಣೆಗೂ ಮುನ್ನವೇ ಅಭ್ಯರ್ಥಿಗಳನ್ನು ಘೋಷಿಸಲು ರಾಜಕೀಯ ಪಕ್ಷಗಳು (Political Party) ಮುಂದಾಗಿವೆ. ಇತ್ತ ಜೆಡಿಎಸ್ (JDS) ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಹೇಳಿದೆ. ಮತ್ತೊದೆಡೆ ಹಾಲಿ ಕಾಂಗ್ರೆಸ್ ಶಾಸಕರಿಗೆ (Congress MLA) ಟಿಕೆಟ್ ಖಚಿತ ಎಂಬ ಹೇಳಿಕೆಯನ್ನು ಕೆಪಿಸಿಸಿ (KPCC) ನೀಡಿದೆ. ಆದಾಗಿಯೂ ಕಾಂಗ್ರೆಸ್ ಚುನಾವಣಾ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಿತ್ತು. ಅದರಂತೆ​ ಆಕಾಂಕ್ಷಿಗಳು ಕಾಂಗ್ರೆಸ್ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಬಹುತೇಕರು ತಾವು ಸಲ್ಲಿಸಿರುವ ಅರ್ಜಿಯನ್ನು ಸೋಶಿಯಲ್ ಮೀಡಿಯಾದಲ್ಲಿ (Social Media) ಶೇರ್ ಮಾಡಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಹಾಲಿ ಶಾಸಕರಿರುವ ಕ್ಷೇತ್ರಗಳಿಗೂ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPCC President DK Shivakumar) ಬಣದ ಅಭ್ಯರ್ಥಿಗಳ ನಡುವೆ ಟಿಕೆಟ್ ಫೈಟ್ ಶುರುವಾಗಿದೆ.


ಸಿದ್ದರಾಮಯ್ಯ ಬಣ ಅಥವಾ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕರ ಕ್ಷೇತ್ರಕ್ಕೆ ಡಿಕೆಶಿ ಆಪ್ತರು ಅರ್ಜಿ ಸಲ್ಲಿಕೆ ಮಾಡಿರೋದು ಹಲವು ಚರ್ಚೆಗಳಿಗೆ ಕಾರಣವಾಗಿದೆ. ಉದಾಹರಣೆಗೆ ಸಿದ್ದರಾಮಯ್ಯ ಅವರ ಜೊತೆಯಲ್ಲಿ ಗುರುತಿಸಿಕೊಂಡಿರುವ ಶಿವಾಜಿ ನಗರದ ಶಾಸಕ ರಿಜ್ವಾನ್ ಅರ್ಷದ್ ಕ್ಷೇತ್ರಕ್ಕೆ ಡಿಕೆ ಶಿವಕುಮಾರ್ ಶಿಷ್ಯ ಮೊಹಮ್ಮದ್ ನಲಪಾಡ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.


Siddaramaiah Asks To Vote For his followers in koppal mrq
ಸಿದ್ದರಾಮಯ್ಯ,, ಮಾಜಿ ಸಿಎಂ


ಡಿಕೆಶಿಗೆ ಟಾಂಗ್ ಕೊಟ್ರಾ ಸಿದ್ದರಾಮಯ್ಯ?


ಇದೇ ರೀತಿ ರಾಜ್ಯದ ಬಹುತೇಕ ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಪಡೆಯಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣದ ಆಕಾಂಕ್ಷಿಗಳು ಪೈಪೋಟಿಯಲ್ಲಿದ್ದಾರೆ. ಇತ್ತ ಟಿಕೆಟ್ ನೀಡುವ ಮೊದಲೇ ತಮ್ಮ ಆಪ್ತರಿಗೆ ಚುನಾವಣೆಯಲ್ಲಿ ಮತ ನೀಡುವಂತೆ ಮನವಿ ಮಾಡಿಕೊಂಡಿರುವ ಸಿದ್ದರಾಮಯ್ಯ ಪರೋಕ್ಷವಾಗಿ ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟಿದ್ದಾರೆ.


ಬೆಂಬಲಿಗರ ಪರವಾಗಿ ಸಿದ್ದರಾಮಯ್ಯ ಮನವಿ


ಕೊಪ್ಪಳದ ಮದುವೆ ಮಂಟಪದಲ್ಲೇ ಸಿದ್ದರಾಮಯ್ಯ ತಮ್ಮ ಬೆಂಬಲಿಗರ ಪರ ಮತಯಾಚಿಸಿದ್ದಾರೆ. ತಮ್ಮ ಬೆಂಬಲಿಗರನ್ನು ಚುನಾವಣೆಯಲ್ಲಿ ಗೆಲ್ಲಿಸಿ ಎಂದಿದ್ದಾರೆ.


ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡದಿದ್ರೂ ಸಿದ್ದರಾಮಯ್ಯನವರೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ರಾ ಅನ್ನೋ ಪ್ರಶ್ನೆ ಮೂಡಿದೆ.


ಇದನ್ನೂ ಓದಿ:  Karnataka Assembly Elections: ಕಾಂಗ್ರೆಸ್​, ಜೆಡಿಎಸ್​ ಭದ್ರಕೋಟೆ ಭದ್ರಾವತಿ ವಶಪಡಿಸಿಕೊಳ್ಳಲು ಬಿಜೆಪಿ ರಹಸ್ಯ ನಡೆ!


ಯಾರ ಪರವಾಗಿ ಸಿದ್ದರಾಮಯ್ಯ ಮತಯಾಚನೆ?


ಕೊಪ್ಪಳದ ಕನಕಗಿರಿಗೆ ಶಿವರಾಜ್ ತಂಗಡಗಿ, ಕುಷ್ಟಗಿ ಅಮರೇಗೌಡ ಭಯ್ಯಾಪೂರ, ಯಲಬುರ್ಗಾಕ್ಕೆ ಬಸವರಾಜ್ ರಾಯರೆಡ್ಡಿ, ಕೊಪ್ಪಳ ರಾಘವೇಂದ್ರ ಹಿಟ್ನಾಳ,  ಗಂಗಾವತಿಯಿಂದ ಇಕ್ವಾಲ್ ಅನ್ಸಾರಿ ಗೆಲ್ಲಿಸುವಂತೆ ಸಿದ್ದರಾಮಯ್ಯ ಕರೆ ನೀಡಿದ್ದಾರೆ.


Siddaramaiah Asks To Vote For his followers in koppal
ಸಿದ್ದರಾಮಯ್ಯ, ಮಾಜಿ ಸಿಎಂ


ಸಿದ್ದರಾಮಯ್ಯನವರ ಈ ಘೋಷಣೆ ಕಾಂಗ್ರೆಸ್‌ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದ ಮಾಜಿ ಶಾಸಕರು  ಹಾಗೂ ಕಾಂಗ್ರೆಸ್ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಡಿಕೆಶಿಗೆ ದೂರು ನೀಡಲು ಕೆಲ ಕಾಂಗ್ರೆಸ್‌ ಮುಖಂಡರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.


ಬಿಜೆಪಿ ಶಕ್ತಿ ಪ್ರದರ್ಶನ


ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಭಾನುವಾರ ಬಿಜೆಪಿ ಬೃಹತ್‌ ಎಸ್​ಟಿ ಸಮಾವೇಶ ನಡೆಯಿತು. ಸಮಾವೇಶದದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸೇರಿ ಹಲವು ನಾಯಕರು ಭಾಗವಹಿಸಿದ್ರು.


ಇದನ್ನೂ ಓದಿ:  Voters Data Steal: ಮತದಾರರ ಮಾಹಿತಿ ಕನ್ನ; ಕಾಂಗ್ರೆಸ್ ಆರೋಪಕ್ಕೆ 5 ಅಂಶಗಳಲ್ಲಿ ಸಿಎಂ ತಿರುಗೇಟು


ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಎಸ್​ಸಿ, ಎಸ್​ಟಿಗಳ ಅಭಿವೃದ್ಧಿ ನಮ್ಮ ಸರ್ಕಾರದ ಗುರಿಯಾಗಿದೆ. ನಾವು ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಿಸಿದ್ದೇವೆ. ಕಾಂಗ್ರೆಸ್​ ಮೀಸಲಾತಿ ಹೆಚ್ಚಳ ಮಾಡದೇ ಎಸ್​ಟಿಗಳಿಗೆ ದ್ರೋಹ ಮಾಡಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಅಂತ ಹೇಳಿದ್ರು. ಇನ್ನು ಸಚಿವ ಶ್ರೀರಾಮುಲು ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಗುಡುಗಿದ್ರು.

Published by:Mahmadrafik K
First published: