Siddaramaiah: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವೆಬ್​ಸೈಟ್​​ ಹಿಂದಿಮಯ; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ, ಪೋಷಣೆಗಿರುವ ಇಲಾಖೆಯೇ 2,000 ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿಸಿದರೆ ಕನ್ನಡ ಭಾಷೆಯನ್ನು ರಕ್ಷಿಸುವವರು ಯಾರು ಸಚಿವರೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ

  • Share this:
ಬೆಂಗಳೂರು (ಆ.06):  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ (Department of Kannada and Culture) ವೆಬ್‌ಸೈಟ್‌ನಲ್ಲಿ (Website) ಹರ್‌ ಘರ್‌ ತಿರಂಗ ಅಭಿಯಾನವನ್ನು ಹಿಂದಿಯಲ್ಲಿ ಉಲ್ಲೇಖಿಸಿದ್ದರ ವಿರುದ್ಧ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ (Tweet) ಮಾಡಿ ಟೀಕಿಸಿದ್ದರು.  ಬಲವಂತವಾಗಿ ಹಿಂದಿ ಹೇರುವ ಮೂಲಕ ಕನ್ನಡಕ್ಕೆ ಅಪಮಾನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರೇ (BJP Leaders), ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು, ಇದು ನಾವು ಹೇಳಿ ಬರುವಂಥದ್ದಲ್ಲ. ಹಿಂದಿ (Hindi) ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ (BJP Leaders) ಸಲಹೆ ನೀಡಿದ್ದಾರೆ. 

ಕನ್ನಡ ಭಾಷೆಯನ್ನು ರಕ್ಷಿಸುವವರು ಯಾರು?

ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್‌ ಕುಮಾರ್‌ ಅವರು ಸ್ಪಷ್ಟಪಡಿಸಬೇಕು’ ಎಂದು ಅವರು ಆಗ್ರಹಿಸಿದ್ದರು. ಅಲ್ಲದೇ, ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು‌ ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸುವವರು ಯಾರು ಎಂದು ಪ್ರಶ್ನೆ ಮಾಡಿದ್ದರು.

ವೆಬ್‌ಸೈಟ್‌ನಲ್ಲಿದ್ದ ಹಿಂದಿ ಉಲ್ಲೇಖವನ್ನು ತೆಗೆದ ಇಲಾಖೆ

ಈ ಮಧ್ಯೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತನ್ನ ವೆಬ್‌ಸೈಟ್‌ನಲ್ಲಿದ್ದ ಹಿಂದಿ ಉಲ್ಲೇಖವನ್ನು ತೆಗೆದಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ: Siddaramotsava: ಸಿದ್ದರಾಮೋತ್ಸವದ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ದೂರು! ಸಿದ್ದು ಮೇಲೆ ಸಿಡುಕು ಯಾರಿಗೆ?





ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ

ನಾನು ಚಾಟಿ ಬೀಸಿದ ನಂತರ ಸರ್ಕಾರ ಎಚ್ಚೆತ್ತುಕೊಂಡು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಅನಗತ್ಯವಾಗಿ ತುರುಕಿದ್ದ ಹಿಂದಿಯನ್ನು ಕಿತ್ತೊಗೆದಿದೆ. ಬಿಜೆಪಿ  ನಾಯಕರೇ, ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು, ಇದು ನಾವು ಹೇಳಿ ಬರುವಂಥದ್ದಲ್ಲ. ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ ಎಂದು ಸಲಹೆ ನೀಡಿದ್ದಾರೆ.

ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆ ಪ್ರಚಾರ

'ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೋ ಅಥವಾ ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೋ ಎಂಬುದನ್ನು ಮುಖ್ಯಮಂತ್ರಿಗಳು ಹಾಗೂ ಇಲಾಖೆ ಸಚಿವರು ಸ್ಪಷ್ಟಪಡಿಸಬೇಕು. ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ, ಪೋಷಣೆಗಿರುವ ಇಲಾಖೆಯೇ 2,000 ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿಸಿದರೆ ಕನ್ನಡ ಭಾಷೆಯನ್ನು ರಕ್ಷಿಸುವವರು ಯಾರು ಸಚಿವರೇ' ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Belagavi Politics: ಸಿದ್ದರಾಮೋತ್ಸವ ಬೆನ್ನಲ್ಲೇ ಲಿಂಗಾಯತ ನಾಯಕನ ಬರ್ತ್ ಡೇಗೆ ಬಿಜೆಪಿ ಪ್ಲಾನ್; ರಾಜ್ಯಪಾಲ ಆಗ್ತಾರಾ ಆ ಮುಖಂಡ?

ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ
 'ಅಧಿಕಾರ ಉಳಿಸಿಕೊಳ್ಳಲು ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಏಕೆ ಅಡವಿಡುತ್ತೀರಾ. ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ. ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಸಚಿವ ಸುನೀಲ್‌ ಕುಮಾರ್‌ ಅವರಿಗೆ ಇಂತಹ ಗುಲಾಮಿ ಮನಸ್ಥಿತಿ ಬರಬಾರದಿತ್ತು' ಎಂದು ವ್ಯಂಗ್ಯವಾಡಿದ್ದಾರೆ.
Published by:Pavana HS
First published: