ಬೆಂಗಳೂರು (ಜ.26): 'ಫ್ರೀ ಕಾಶ್ಮೀರ' ನಾಮಫಲಕ ಹಿಡಿದು ಪ್ರತಿಭಟನೆ ನಡೆಸಿದ್ದ ನಳಿನಿ ಪರ ಬ್ಯಾಟಿಂಗ್ ನಡೆಸುವ ಬದಲು, ಅವಳ ಪರ ವಕಾಲತ್ತು ವಹಿಸುವಂತೆ ಮೈಸೂರಿನ ವಕೀಲರ ತಂಡ ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲ್ ಹಾಕಿತ್ತು. ಈ ಸವಾಲಿನ ಬೆನ್ನಲ್ಲೇ ಸಿದ್ದರಾಮಯ್ಯ ಮೈಸೂರು ಬಾರ್ ಕೌನ್ಸಿಲ್ನಲ್ಲಿ ತಮ್ಮ ಸದಸ್ಯತ್ವ ನವೀಕರಣಕ್ಕೆ ಅವರು ಮುಂದಾಗಿದ್ದರು. ಈ ಹಿನ್ನೆಲೆ ಅವರು ಮತ್ತೆ ವಕೀಲಿ ವೃತ್ತಿ ಆರಂಭಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.
ಈ ಎಲ್ಲಾ ಗಾಳಿ ಸುದ್ದಿಗಳಿಗೆಲ್ಲಾ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ, ಮೈಸೂರಿನಲ್ಲಿ 'ಫ್ರೀ ಕಾಶ್ಮೀರ' ಫಲಕ ಹಿಡಿದಿದ್ದ ಯುವತಿಯ ಪರ ನಾನು ವಕಾಲತ್ತು ವಹಿಸುತ್ತಿಲ್ಲ. ನನ್ನ ಲೈಸೆನ್ಸ್ ಅನ್ನು ಹಿಂದೆ ಅಮಾನತು ಮಾಡಿದ್ದರು. ಈ ಅಮಾನತು ತೆಗೆಯುವಂತೆ ಅರ್ಜಿ ಸಲ್ಲಿಸಿದ್ದೇನೆ. ಯುವತಿಯ ಪರ ಯಾರೇ ವಕಾಲತ್ತು ವಹಿಸಿದರೂ ಅವರಿಗೆ ಬೆಂಬಲ ನೀಡುತ್ತೇನೆ. ಈ ಬಗ್ಗೆ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ 'Free Kashmir' ಫಲಕ ಹಿಡಿದಿದ್ದ ಯುವತಿಯ ಪರ ನಾನು ವಕಾಲತ್ತು ವಹಿಸುತ್ತಿಲ್ಲ. ನನ್ನ ಲೈಸೆನ್ಸ್ ಅನ್ನು ಹಿಂದೆ ಅಮಾನತು ಮಾಡಿದ್ದರು. ಅಮಾನತು ತೆಗೆಯುವಂತೆ ಅರ್ಜಿ ಸಲ್ಲಿಸಿದ್ದೇನೆ.
ಯುವತಿಯ ಪರ ಯಾರೇ ವಕಾಲತ್ತು ವಹಿಸಿದರೂ ಅವರಿಗೆ ಬೆಂಬಲ ನೀಡುತ್ತೇನೆ. ಈ ಬಗ್ಗೆ ಗೊಂದಲ ಬೇಡ. 2/4
— Siddaramaiah (@siddaramaiah) January 26, 2020
ಇದನ್ನು ಓದಿ: ನಳಿನಿ ಪರ ಬ್ಯಾಟಿಂಗ್ ಮಾಡೋ ಬದಲು ವಾದ ಮಂಡಿಸಿ; ಸಿದ್ದರಾಮಯ್ಯಗೆ ಮೈಸೂರು ವಕೀಲರ ಬಹಿರಂಗ ಸವಾಲು
ಅವರು ಅರ್ಜಿ ಸಲ್ಲಿಸಿದ್ದ ಸಮಯ ಹಾಗೂ ಮೈಸೂರು ವಕೀಲರು ನೀಡಿದ ಹೇಳಿಕೆಗಳು ಅವರು ವಕೀಲಿ ವೃತ್ತಿಯನ್ನು ಆರಂಭಿಸುವ ಬಗ್ಗೆ ಸಾಕಷ್ಟು ಅನುಮಾನ ಹುಟ್ಟು ಹಾಕಿದ್ದವು. ಈ ಹಿನ್ನೆಲೆ ಈ ಕುರಿತು ಅವರು ಟ್ವೀಟರ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ 14 ಗಣ್ಯರಿಗೆ ಕೊಲೆ ಬೆದರಿಕೆ ಪತ್ರ ಬರೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದರ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷಿಸಬೇಕು.
ಭಯದ ವಾತಾವರಣ ಸೃಷ್ಟಿಸಿ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಗೊಳಿಸುವ ಯಾವುದೇ ಶಕ್ತಿಗಳಾದರೂ ಸರಿ ಅಂಥವರಿಗೆ ತಕ್ಕ ಶಿಕ್ಷೆಯಾಗಲೇಬೇಕು. 1/4
— Siddaramaiah (@siddaramaiah) January 26, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ