ಕೇಂದ್ರದ RCEP ನಡೆಯಿಂದ ರೈತರಿಗೆ ಮರಣ ಶಾಸನ: ಸಿದ್ದರಾಮಯ್ಯ

ಮುಕ್ತ ವ್ಯಾಪಾರ ಒಪ್ಪಂದವನ್ನು ವಿರೋಧಿಸಿರುವ ಸೋನಿಯಾ ಗಾಂಧಿ ನಿರ್ಧಾರವನ್ನು ಸ್ವಾಗತಿಸಿರುವ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ್ದು ಪಾರದರ್ಶಕವಲ್ಲದ ನೀತಿ ಎಂದು ಖಂಡಿಸಿದ್ದಾರೆ.

news18-kannada
Updated:October 23, 2019, 12:34 PM IST
ಕೇಂದ್ರದ RCEP ನಡೆಯಿಂದ ರೈತರಿಗೆ ಮರಣ ಶಾಸನ: ಸಿದ್ದರಾಮಯ್ಯ
ಸಿದ್ದರಾಮಯ್ಯ
  • Share this:
ಬೆಂಗಳೂರು(ಅ. 23): ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (RCEP) ಅಡಿಯಲ್ಲಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆಯನ್ನು ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪಿಸಿದ್ಧಾರೆ. ಕೇಂದ್ರ ಸರ್ಕಾರದ ಈ ಪ್ರಯತ್ನವು ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ ಎಂದವರು ಎಚ್ಚರಿಸಿದ್ಧಾರೆ. ಇಂದು ಸಾಲು ಸಾಲಾಗಿ ಟ್ವೀಟ್​ಗಳನ್ನು ಮಾಡಿರುವ ಅವರು ಮುಕ್ತ ವ್ಯಾಪಾರ ನೀತಿಯಿಂದ ಕೃಷಿ ಕ್ಷೇತ್ರಕ್ಕೆ ಹೇಗೆ ಪೆಟ್ಟು ಬೀಳುತ್ತದೆಂದು ವಿವರಿಸಿದ್ದಾರೆ.

ಯುಪಿಎ ಸರ್ಕಾರ RCEP ಮಾತುಕತೆಯಲ್ಲಿ ಭಾಗಿಯಾಗಿದ್ದು ನಿಜ. ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ರೈತರ ಹಿತ ಕಾಪಾಡಲು ಕೆಲ ಬದಲಾವಣೆಗಳನ್ನ ಬಯಸಿದ್ದರು. ಆದರೆ, ನರೇಂದ್ರ ಮೋದಿ ಅವರು ಇಡೀ ದೇಶವನ್ನು ಕತ್ತಲಲ್ಲಿಟ್ಟು ಈ ಒಪ್ಪಂದಕ್ಕೆ ಸಹಿ ಹಾಕಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ಧಾರೆ.

ಇದನ್ನೂ ಓದಿ: ಜನರ ಕಷ್ಟಕ್ಕೆ ಸ್ಪಂದಿಸದಿದ್ರೆ ಸಸ್ಪೆಂಡ್​ ಆಗೋಗ್ತೀಯ; ಬದಾಮಿಯಲ್ಲಿ ಪಿಡಿಓಗೆ ಸಿದ್ದರಾಮಯ್ಯ ಎಚ್ಚರಿಕೆ

ಮುಕ್ತ ವ್ಯಾಪಾರ ಒಪ್ಪಂದವನ್ನು ವಿರೋಧಿಸಿರುವ ಸೋನಿಯಾ ಗಾಂಧಿ ನಿರ್ಧಾರವನ್ನು ಸ್ವಾಗತಿಸಿರುವ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ್ದು ಪಾರದರ್ಶಕವಲ್ಲದ ನೀತಿ ಎಂದು ಖಂಡಿಸಿದ್ದಾರೆ.

RCEP ಅಡಿಯಲ್ಲಿ ಹಾಲು ಉತ್ಪನ್ನಗಳ ಆಮದು ಮಾಡಿಕೊಳ್ಳುವುದು ದೇಶದ ಹೈನುಗಾರಿಕೆ ಕ್ಷೇತ್ರಕ್ಕೆ ಮಾರಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, “ಸುಮಾರು 10 ಕೋಟಿ ರೈತರ ಬದುಕು ಹೈನುಗಾರಿಕೆಯನ್ನು ಅವಲಂಬಿಸಿದೆ. ಕರ್ನಾಟಕದಲ್ಲಿಯೇ ಸುಮಾರು 86 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನ್ಯೂಜಿಲೆಂಡ್, ಆಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರ ಹಾಲು ಆಮದಿಗೆ ಅವಕಾಶ ನೀಡುವ RCEP ನಮ್ಮ ರೈತರನ್ನು ಬೀದಿ ಪಾಲು ಮಾಡಲಿದೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಹದಾಯಿ ಹೋರಾಟಕ್ಕೆ ಮಣಿದ ಕೇಂದ್ರ; ಯೋಜನೆಗೆ ಪರಿಸರ ಇಲಾಖೆ ಒಪ್ಪಿಗೆ

ನಾನು ಮುಖ್ಯಮಂತ್ರಿಯಾಗಿದ್ದಾಗ ಹೈನುಗಾರಿಕೆಯನ್ನು ಉತ್ತೇಜಿಸಲು ಕ್ಷೀರಧಾರೆ ಯೋಜನೆ ಮತ್ತು ಶಾಲಾ ಮಕ್ಕಳನ್ನ ಆರೋಗ್ಯವಂತರನ್ನಾಗಿ ಮಾಡಲು ಕ್ಷೀರಭಾಗ್ಯ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಈಗ ಮೋದಿ ಸರ್ಕಾರ ರೈತರು ಮತ್ತು ಶಾಲಾ ಮಕ್ಕಳ ಬದುಕು ಕಸಿಯಲು ಹೊರಟಿದೆ ಎಂದು ಸಿದ್ದರಾಮಯ್ಯ ಕೇಂದ್ರದ ವಿರುದ್ಧದ ಹರಿಹಾಯ್ದಿದ್ದಾರೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.
First published:October 23, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading