HOME » NEWS » State » SIDDARAMAIAH DECIDED TO MOVE NO CONFIDENCE MOTION AGAINST BS YEDIYURAPPA GOVERNMENT SCT

ಯಡಿಯೂರಪ್ಪ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ಸಿದ್ದರಾಮಯ್ಯ

ಯಡಿಯೂರಪ್ಪ ನೇತೃತ್ವದ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಯಡಿಯೂರಪ್ಪನವರ ಮಗ, ಮೊಮ್ಮಗ, ಅಳಿಯ ಎಲ್ಲಾ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ನಾವು ಸರ್ಕಾರದ ವಿರುದ್ಧ ಅವಿಶ್ವಾಸ ಮಂಡಿಸಲು ತೀರ್ಮಾನ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

news18-kannada
Updated:September 25, 2020, 1:42 PM IST
ಯಡಿಯೂರಪ್ಪ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ಸಿದ್ದರಾಮಯ್ಯ
ಸಿದ್ದರಾಮಯ್ಯ
  • Share this:
ಬೆಂಗಳೂರು (ಸೆ. 24): ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಮುಂದಾಗಿದೆ. ಅವಿಶ್ವಾಸ ನಿರ್ಣಯಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೋಟೀಸ್ ನೀಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಶಾಕ್ ನೀಡಿದ್ದಾರೆ.

ಶಾಸಕಾಂಗ ಪಕ್ಷದ ಸಭೆ ಬಳಿಕ ಮಾತನಾಡಿರುವ ಸಿದ್ದರಾಮಯ್ಯ, ನಾವು ಸರ್ಕಾರದ ವಿರುದ್ಧ ಅವಿಶ್ವಾಸ ಮಂಡಿಸಲು ತೀರ್ಮಾನ ಮಾಡಿದ್ದೇವೆ. ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಯಡಿಯೂರಪ್ಪನವರ ಮಗ, ಮೊಮ್ಮಗ, ಅಳಿಯ ಎಲ್ಲಾ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮೆಡಿಕಲ್, ಲ್ಯಾಪ್‌ಟಾಪ್, ಟ್ರಾನ್ಸ್​ಫಾರ್ಮ್​ ಎಲ್ಲದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ, ಅಭಿವೃದ್ಧಿ ಕುಂಟಿತ, ಆರ್ಥಿಕ ಅಧೋಗತಿಗೆ ಹೋಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ ಡ್ರಗ್ ಕೇಸ್; ಇಂದು ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ

ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ವಿರೋಧ ಕಾನೂನು ತಂದಿದ್ದಾರೆ. ಒಂದು ವರ್ಷ ನಾಲ್ಕು ತಿಂಗಳಲ್ಲಿ ರಾಜ್ಯ ಅಧೋಗತಿಗೆ ಹೋಗಿದೆ. ಯಡಿಯೂರಪ್ಪನವರ ಸರ್ಕಾರ ಒಂದು ಲಕ್ಷ, ಒಂದು ಸಾವಿರ ಕೋಟಿ ಸಾಲ ಮಾಡಿದೆ. ಯಡಿಯೂರಪ್ಪ ಮಂತ್ರಿ ಮಂಡಲದ ವಿಶ್ವಾಸ ಕಳೆದುಕೊಂಡಿದ್ದಾರೆ. ಈಗಾಗಲೇ ಅವಿಶ್ವಾಸ ಮಂಡನೆಗೆ ನೋಟೀಸ್ ಕೊಟ್ಟಿದ್ದೆ. ನಾವು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಖಚಿತಪಡಿಸಿದ್ದಾರೆ.

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ವಿಪಕ್ಷ ನಾಯಕ ಸಿದ್ದರಾಮಯ್ಯ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧರಿಸಿದ್ದಾರೆ. ಸಿಎಂ‌ ಯಡಿಯೂರಪ್ಪನವರ ಮಗ ಬಿವೈ ವಿಜಯೇಂದ್ರ ಅವರ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರೇ ನೇರ ಕಾರಣ. ಸಿಎಂ‌ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಹೋರಾಟ ನಡೆಸುವ ಬಗ್ಗೆಯೂ ಕಾಂಗ್ರೆಸ್ ಶಾಸಕಾಂಗ‌ ಪಕ್ಷದ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ. ಬಿಜೆಪಿ ಶಾಸಕರಿಗೆ ಸಿಎಂ ಯಡಿಯೂರಪ್ಪನವರ ಮೇಲೆ ವಿಶ್ವಾಸ ಇಲ್ಲ. ಸಚಿವರ ಇಲಾಖೆಯಲ್ಲಿ ವಿಜಯೇಂದ್ರ ನೇರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಹಿರಿಯ ಸಚಿವರಿಂದಲೇ‌ ಈ ಬಗ್ಗೆ ಅಸಮಾಧಾನ ಇದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್​ಗೂ ದೂರು ಹೋಗಿದೆ. ಈಗ ಅವಿಶ್ವಾಸ ನಿರ್ಣಯ ಮಂಡಿಸಲು ಸೂಕ್ತ ಸಮಯ ಎಂದು ಸಿದ್ದರಾಮಯ್ಯ ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
Published by: Sushma Chakre
First published: September 24, 2020, 11:01 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories