Araga Jnanendra ಅದಕ್ಷತೆಯಿಂದಾಗಿ ಪೊಲೀಸ್ ಇಲಾಖೆ ಹಾದಿ ತಪ್ಪಿದೆ: ಸಿದ್ದರಾಮಯ್ಯ

ಸಿದ್ದರಾಮಯ್ಯ, ಮಾಜಿ ಸಿಎಂ

ಸಿದ್ದರಾಮಯ್ಯ, ಮಾಜಿ ಸಿಎಂ

ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

  • Share this:

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಗ್ಗಲೀಪುರದ (Kaggalipura Case) ಬಾಲಕಿಯ ಅತ್ಯಾಚಾರ ಪ್ರಕರಣ ನಡೆದು ವಾರ ಕಳೆದಿಲ್ಲ ಅಷ್ಟರಲ್ಲೇ ಕೋರಮಂಗಲದ (Koramangala Case) ಯುವತಿಯನ್ನು ನಾಲ್ವರು ರಾಕ್ಷಸರು ಅತ್ಯಾಚಾರಗೈದು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜೀವಂತವಾಗಿದೆ ಎಂಬ ನಂಬಿಕೆಯನ್ನೇ ಜನ ಕಳೆದುಕೊಂಡಿದ್ದಾರೆ. ದುಷ್ಟರನ್ನು, ಸಮಾಜಘಾತುಕರನ್ನು ಹಿಡಿದು ಸದೆಬಡಿಬೇಕಿದ್ದ ಸರ್ಕಾರ, ಅದರ ಬದಲಿಗೆ ರೌಡಿ ಶೀಟರ್ ಗಳು (Rowdy sheeter), ಕೊಲೆಗಡುಕರನ್ನು ರತ್ನಗಂಬಳಿ ಹಾಸಿ, ಸನ್ಮಾನಿಸಿ ಪಕ್ಷಕ್ಕೆ ಸೇರಿಸಿಕೊಂಡಿದ್ದರ ಫಲ ಜನಸಾಮಾನ್ಯರು ಉಣ್ಣಬೇಕಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷನಾಯಕ ಸಿದ್ದರಾಮಯ್ಯ (Former CM Siddaramaiah) ವಾಗ್ದಾಳಿ ನಡೆಸಿದ್ದಾರೆ.


ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದಾಗ ಮೈಮೇಲೆ ಕಂಬಳಿಹುಳ ಬಿದ್ದವರಂತೆ ಕುಣಿದಾಡಿ, ಎಗರಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಸಾಮರ್ಥ್ಯವೇ ಈ ಎಲ್ಲಾ ದೌರ್ಜನ್ಯಗಳಿಗೆ ಕಾರಣ ಎಂದು ಕಟುಪದಗಳಲ್ಲಿ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.




ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ


ಕಠಿಣ ಕ್ರಮದ ಭರವಸೆ ನೀಡುವ ಗೃಹಸಚಿವರು ಸ್ಯಾಂಟ್ರೋ ರವಿ ಹೇಳುವ ವರ್ಗಾವಣೆ ಮಾಡಿಸಲಷ್ಟೇ ಶಕ್ತರು ಎಂಬ ಜನರ ಮಾತು ನಿಜವಾಗಿದೆ. ಸಾಮರ್ಥ್ಯ, ನೈತಿಕತೆ ಈ ಯಾವುದೂ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕೂತಿರುವ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ಇದನ್ನೂ ಓದಿ:  Karnataka Election 2023: ಮೊಳಕಾಲ್ಮೂರು ಕಾಂಗ್ರೆಸ್ ಟಿಕೆಟ್ ಫೈಟ್​


ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯ ಮನವಿ

top videos


    ಆರಗ ಜ್ಞಾನೇಂದ್ರ ಅವರ ಅದಕ್ಷತೆಯಿಂದಾಗಿ ರಾಜ್ಯದ ಪೊಲೀಸ್ ಇಲಾಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ. ಚುನಾವಣಾ ಕಾಲದಲ್ಲಿ ಈ ರೀತಿಯ ಪೊಲೀಸ್ ನಿಷ್ಕ್ರಿಯತೆ ಅಪಾಯಕಾರಿಯಾದುದು. ಆದ್ದರಿಂದ ಚುನಾವಣಾ ಆಯೋಗ ಪೊಲೀಸ್ ಇಲಾಖೆಯ‌ ಕಾರ್ಯನಿರ್ವಹಣೆಯ ಮೇಲೆ ನಿಗಾ ಇಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

    First published: