• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Siddaramaiah: ಸಮಾಜ ಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? ಮಾಜಿ ಸಿಎಂ

Siddaramaiah: ಸಮಾಜ ಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? ಮಾಜಿ ಸಿಎಂ

ಸಿದ್ದರಾಮಯ್ಯ, ಮಾಜಿ ಸಿಎಂ

ಸಿದ್ದರಾಮಯ್ಯ, ಮಾಜಿ ಸಿಎಂ

Congress Manifesto: ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ‌ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

  • Share this:

ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆ (Congress Manifesto) ಇಡೀ ದೇಶದಲ್ಲಿಯೇ ಸದ್ದು ಮಾಡುತ್ತಿದೆ. ಪ್ರಣಾಳಿಕೆಯಲ್ಲಿ ಬಜರಂಗ ದಳ (Bajrang Dal) ನಿಷೇಧದ ಪ್ರಸ್ತಾಪಕ್ಕೆ ಹಿಂದೂ ಸಂಘಟನೆಗಳು (Hindu Organizations) ಕೆಂಡವಾಗಿವೆ. ಇದೇ ಪ್ರಸ್ತಾಪವನ್ನು ಚುನಾವಣಾ ಅಸ್ತ್ರವಾಗಿ ಮಾಡಿಕೊಂಡಿರುವ ಬಿಜೆಪಿ (BJP) ಬಜರಂಗಬಲಿ ಎಂದು ಮತ ಹಾಕಿ ಅಂತ ಮನವಿ ಮಾಡಿಕೊಳ್ಳುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah), ಕೆಪಿಸಿಸಿ ಅಧ್ಯಕ್ಷಡಿಕೆ ಶಿವಕುಮಾರ್ (KPCC President DK Shivakunar) ಸೇರಿದಂತೆ ಕಾಂಗ್ರೆಸ್ ನಾಯಕರು ತಮ್ಮ ಪ್ರಣಾಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇತ್ತ ಚುನವಣಾ ಪ್ರಚಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಹ ಬಜರಂಗಬಲಿ ಎಂದು ಘೋಷಣೆ ಕೂಗುತ್ತಾ ತಮ್ಮ ಮಾತು ಆರಂಭಿಸುವ ಮೂಲಕ ಮತಯಾಚನೆ ಮಾಡುತ್ತಿದ್ದಾರೆ.


ತಮ್ಮ ಪ್ರಣಾಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ‌ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.


ಜನರಿಗೆ ಬೇಕಿರುವುದು ಆಹಾರ, ಉದ್ಯೋಗ, ನೆಮ್ಮದಿಯಿಂದ ಬದುಕುವ ವಾತಾವರಣ. ಇದನ್ನು ಒದಗಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರದ ಕರ್ತವ್ಯ.


ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಸಮಾಜ ಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:  Kalghatagi: ಈ ಬಾರಿ ಯಾರಿಗೆ 'ಸಂತೋಷ', ಯಾರಿಗೆ ಸಿಹಿ 'ಲಾಡ್'? ಕುತೂಲಹದ ಕಣಜವಾದ ಕಲಘಟಗಿ


ಹೆಚ್​ಡಿಕೆ ಹೇಳಿದ್ದೇನು ?


ಬಜರಂಗ ದಳ ಹಾಗೂ ಪಿಎಫ್ಐ ನಿಷೇಧದಿಂದ ಏನು ಲಾಭ? ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಿಕೊಳ್ಳುವಂಥದ್ದು ಏನೂ ಅಲ್ಲ ಅನ್ನೋದು ಎಂದು ಹೇಳಿದ್ದಾರೆ.

top videos
    First published: