• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Siddaramaiah: 'ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮನೆಯಲ್ಲಿ ಹೇಳ್ತಿದ್ದಾರೆ' -ಕೋಲಾರ ಜನರಿಗೆ ಬಿಗ್​ ಶಾಕ್​ ಕೊಟ್ಟ ಮಾಜಿ ಸಿಎಂ

Siddaramaiah: 'ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮನೆಯಲ್ಲಿ ಹೇಳ್ತಿದ್ದಾರೆ' -ಕೋಲಾರ ಜನರಿಗೆ ಬಿಗ್​ ಶಾಕ್​ ಕೊಟ್ಟ ಮಾಜಿ ಸಿಎಂ

ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯದ 25 ಕ್ಷೇತ್ರಗಳಲ್ಲಿ ನಿಲ್ಲುವಂತೆ ಕೇಳುತ್ತಿದ್ದಾರೆ. ಎಲ್ಲಾ ಕ್ಷೇತ್ರದಲ್ಲೂ ನಿಲ್ಲಲು ಆಗೋದಿಲ್ಲ ಅಲ್ವಾ. ಮನೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಹೇಳಿದ್ದಾರೆ ಎಂದು ತಿಳಿಸಿದರು.

  • News18 Kannada
  • 4-MIN READ
  • Last Updated :
  • Chitradurga, India
  • Share this:

ಚಿತ್ರದುರ್ಗ: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ವರುಣಾ ಕ್ಷೇತ್ರದಿಂದ (Varuna Constituency) ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದು, ನಮ್ಮ ಮನೆಯಲ್ಲಿ ವರುಣಾದಿಂದ ಸ್ಪರ್ಧಿಸಿ ಎಂದಿದ್ದಾರೆ ಎಂದು ಚಿತ್ರದುರ್ಗದಲ್ಲಿ (Chitradurga) ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಕೋಲಾರದಿಂದಲೇ (Kolar) ಸ್ಪರ್ಧೆ ಮಾಡಬೇಕು ಎಂದು ಒತ್ತಾಯ ಮಾಡಿದ್ದ ಕ್ಷೇತ್ರದ ಜನರಿಗೆ ಬಿಗ್​ ಶಾಕ್ (Big Shock)​ ನೀಡಿದ್ದಾರೆ. ಇದರೊಂದಿಗೆ ಕ್ಷೇತ್ರ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನವನ್ನು ಸಿದ್ದರಾಮಯ್ಯ ಮಾಡಿದ್ದಾರೆ. ಆದರೆ ಹೈಕಮಾಂಡ್ (High Command)​ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಗ್ರೀನ್​ ಸಿಗ್ನಲ್ (Green Signal)​ ನೀಡಲಿದೆ ಎಂಬುವುದನ್ನು ಕಾದು ನೋಡಬೇಕಿದೆ.


2 ಕ್ಷೇತ್ರದಲ್ಲಿ ಸ್ಪರ್ಧಿಸುವಂತೆಯೂ ಮನೆಯಲ್ಲಿ ಹೇಳ್ತಿದ್ದಾರೆ


ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯದ 25 ಕ್ಷೇತ್ರಗಳಲ್ಲಿ ನಿಲ್ಲುವಂತೆ ಕೇಳುತ್ತಿದ್ದಾರೆ. ಎಲ್ಲಾ ಕ್ಷೇತ್ರದಲ್ಲೂ ನಿಲ್ಲಲು ಆಗೋದಿಲ್ಲ ಅಲ್ವಾ. ಮನೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಹೇಳಿದ್ದಾರೆ. ಇದೇ ವೇಳೆ ಮತ್ತೊಂದು ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವಂತೆ ಹೇಳಿದ್ದಾರೆ. ಈಗ ವರುಣಾ ಕ್ಷೇತ್ರವನ್ನು ಕ್ಲೀಯರ್ ಮಾಡಲು ಹೇಳಿದ್ದೇನೆ. ಆದರೆ ಇನ್ನು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂದು ನಿರ್ಧಾರ ಮಾಡಿಲ್ಲ. ಯೋಚನೆ ಮಾಡಿ ನೋಡೋಣಾ ಎಂದು ಹೇಳಿದರು.


ಇದನ್ನೂ ಓದಿ: Karnataka Elections: ತಳ್ಳಾಟ ನೂಕಾಟದಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಶಾಸಕ ರಾಮಪ್ಪ ಅಭಿಮಾನಿಗೆ ಕಪಾಳ ಮೋಕ್ಷ!




ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

top videos


    ಇದೇ ವೇಳೆ ಬಾದಾಮಿ ‌ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ನಡೆಸುತ್ತಿರುವ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಎಲ್ಲಾ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದೇನೆ ಎಂದು ಹೇಳಿದರು. ಇದೇ ವೇಳೆ ಬಿಜೆಪಿ ಹಿಂದೂ-ಮುಸ್ಲಿಂರು ಅಣ್ಣ ತಮ್ಮಂದಿರಂತೆ ಕಾಣುತ್ತದೆ ಎಂದು ಹೇಳಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿ ಮುಸ್ಲಿಮರಿಗೆ ಏಕೆ ಟಿಕೆಟ್​ ನೀಡಿಲ್ಲ, ಮಂತ್ರಿ ಮಾಡಲ್ಲ ಎಂದು ಕಿಡಿಕಾರಿದರು.

    First published: