ಬೆಂಗಳೂರು (ಮೇ 28): ನಿನ್ನೆಯಷ್ಟೆ RSS ಮೂಲ ಕೆದಕಿದ್ದ ಸಿದ್ದರಾಮಯ್ಯ (Siddaramaiah) ಅವ್ರಿಗೆ ಬಿಜೆಪಿ ನಾಯಕರು (BJP Leaders) ಇಂದು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಆರ್ಯರಾ? ಅಥವಾ ದ್ರಾವಿಡರಾ? ಅನ್ನೋದನ್ನು ಮೊದಲು ಹೇಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಕಟುವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಸಿಎಂಗೆ ಪತ್ರ ಬರೆದಿದ್ದ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಗೈದಿದ್ರು. ಇದೀಗಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು ನೀಡಿದ್ದಾರೆ. ಮೊದಲು ಸಿದ್ದರಾಮಯ್ಯ ಎಲ್ಲಿಂದ ಬಂದಿದ್ದಾರೆ ಅಂತ ಹೇಳಲಿ ಎಂದು ಸವಾಲು ಹಾಕಿದರು.
ರೋಹಿತ್ ಚಕ್ರತೀರ್ಥ ಕುರಿತು ಮಾಹಿತಿ ಪಡೆಯುವೆ
ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯಿಂದ ರೋಹಿತ್ ಚಕ್ರತೀರ್ಥರನ್ನು ಕೈಬಿಡಬೇಕೆಂಬ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಈ ವಿಚಾರಗಳ ಬಗ್ಗೆ ಶಿಕ್ಷಣ ಸಚಿವರಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಏನೇನಾಗಿದೆ ಅಂತ ನೋಡಿಕೊಂಡು ಮುಂದುವರೆಯುತ್ತೇವೆ ಎಂದರು.
ಎಲ್ಲರೂ ಕೋರ್ಟ್ ಆದೇಶ ಪಾಲಿಸಬೇಕು
ಹಿಜಾಬ್ ವಿವಾದ ಮಾಡುವ ಅಗತ್ಯ ಇಲ್ಲ. ಈಗಾಗಲೇ ಕೋರ್ಟ್ ತನ್ನ ಆದೇಶ ಕೊಟ್ಟಿದೆ. ಎಲ್ಲರೂ ಕೋರ್ಟ್ ಆದೇಶ ಪಾಲಿಸಬೇಕು. ಶೇ.99.99ರಷ್ಟು ಮಂದಿ ಕೋರ್ಟ್ ಆದೇಶ ಪಾಲಿಸಿದ್ದಾರೆ. ಹಿಜಾಬ್ ಬಗ್ಗೆ ಮಂಗಳೂರು ವಿವಿ ಸಿಂಡಿಕೇಟ್ ನಿರ್ಣಯ ತೆಗೆದುಕೊಂಡಿದೆ. ಆಡಳಿತ ಮಂಡಳಿ ಏನು ನಿರ್ಧಾರ ಮಾಡುತ್ತಾರೋ ಅದನ್ನು ಪಾಲಿಸಬೇಕು. ಸಿಂಡಿಕೇಟ್ ಸಹ ಕೋರ್ಟ್ ಆದೇಶ ಪಾಲಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಹಿಜಾಬ್ ಬಿಟ್ಟು ವಿದ್ಯಾರ್ಜನೆ ಕಡೆ ಗಮನ ಕೊಡಲಿ ಎಂದು ಮನವಿ ಮಾಡಿದರು.
Ashwath Narayan: ಸಚಿವ ಅಶ್ವತ್ಥ ನಾರಾಯಣ ವಿರುದ್ಧ FIR ದಾಖಲು
MES ಪುಂಡಾಟಿಕೆ ಖಂಡಿಸಿದ ಸಿಎಂ
ಕನ್ನಡಿಗರಿಗೆ ತೊಂದರೆ ಕೊಟ್ಟರೆ ಸುಮ್ಮನೆ ಇರಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಈಗಾಗಲೇ ಪ್ರಕರಣದ ಬಗ್ಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಎಂಇಎಸ್ನವರು ಕಾನೂನು ಕೈಗೆತ್ತಿಕೊಳ್ಳೋದನ್ನು ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು. ಎಂಇಎಸ್ ನವರು ನಮ್ಮ ನೆಲದಲ್ಲಿ ಕಾನೂನು ಕೈಗೆತ್ತಿಕೊಳ್ಳೋದನ್ನು ಸಹಿಸಲ್ಲ. ಅವರಿಗೆ ಈ ಪ್ರಕರಣದಲ್ಲಿ ಸ್ಪಷ್ಟ ಸಂದೇಶ ಕಳಿಸಿದ್ದೇವೆ. ಕನ್ನಡಿಗರಿಗೆ ತೊಂದರೆ ಕೊಟ್ಟರೆ ಸುಮ್ಮನೆ ಇರಲ್ಲ ಎಂದು ಎಚ್ಚರಿಕೆ ರವಾನಿಸಿದರು.
ಹೆಡ್ಗೆವಾರ್ ಆರಂಭದಲ್ಲಿ ಕಾಂಗ್ರೆಸ್ನಲ್ಲಿದ್ದರು
ಹೆಡ್ಗೆವಾರ್ ಆರಂಭದಲ್ಲಿ ಕಾಂಗ್ರೆಸ್ನಲ್ಲಿದ್ದರು ಮತ್ತು ಅದರ ಸೇವಾದಳದ ಮುಖ್ಯಸ್ಥರಾಗಿದ್ದರು. ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆ ಮತ್ತು ಕ್ರಾಂತಿಕಾರಿಗಳಿಗೆ ನೀಡಿದ ಬೆಂಬಲದ ಬಗ್ಗೆ ಹಲವು ಕಾಂಗ್ರೆಸ್ ಮುಖಂಡರು ಬರೆದಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಸೈದ್ಧಾಂತಿಕ ಭಿನ್ನಾಭಿಪ್ರಾಯ ಹೊಂದಿರಬಹುದು, ಆದರೆ ಹೆಡ್ಗೆವಾರ್ ಅವರು ನಿಜವಾದ ದೇಶಭಕ್ತರಾಗಿದ್ದರು ಮತ್ತು ಅವರು ಭಾರತದಲ್ಲಿ ಆರ್ ಎಸ್ ಎಸ್ ಸ್ಥಾಪಕರು ಎಂದು ಜೋಶಿ ಹೇಳಿದರು.
ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಕಿಡಿ
ಸಿದ್ದರಾಮಯ್ಯ ಅವರು ಭಾರತ ಮತ್ತು ಭಾರತೀಯತೆಯನ್ನು ಮೆಕಾಲೆ ದೃಷ್ಟಿಕೋನದಿಂದ ನೋಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಆರ್ ಎಸ್ ಎಸ್ ನವರ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ ದೇಶದ ಜನರ ಕ್ಷಮೆಯಾಚಿಸಬೇಕೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Text Book Row: ಪಠ್ಯಪುಸ್ತಕ ಪರಿಷ್ಕರಣೆ ವಿರೋಧ; ಮೇ 31ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರವೇ ಸಜ್ಜು
ಸಿದ್ದರಾಮಯ್ಯಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು
ಸಿದ್ದರಾಮಯ್ಯ ಆರ್.ಎಸ್.ಎಸ್ ಮೂಲದ ಪ್ರಶ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್ ನಲ್ಲಿದ್ದಾಗ ಸೋನಿಯಾ ಗಾಂಧಿ ಅವರನ್ನು ಏಕವಚನದಲ್ಲಿ ಮಾತನಾಡುತ್ತಿದ್ದರು. ಈಗ ಅವರದ್ದೇ ಪಕ್ಷಕ್ಕೆ ಹೋಗಿ ಮಹಾತಾಯಿ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಸೋನಿಯಾ ಅವರನ್ನು ಮಹಾತಾಯಿ, ಮಹಾನಾಯಕಿ ಎಂದು ಒಪ್ಪಿಕೊಳ್ಳುವ ದಯನೀಯ ಸ್ಥಿತಿಯಲ್ಲಿದ್ದಾರೆ. ನೀವೂ ಆರ್.ಎಸ್.ಎಸ್ ಮೂಲ ಹುಡುಕುವ ಮೊದಲು ಸೋನಿಯಾ ಗಾಂಧಿ ಮೂಲ ಹುಡುಕಿ ಎಂದು ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಜನತೆಗೆ ಇದನ್ನು ಮೊದಲು ತಿಳಿಸಿ, ಆಮೇಲೆ ಬೇರೆಯವರ ಬಗ್ಗೆ ಪ್ರಶ್ನೆ ಮಾಡಿ ಎಂದು ಉಡುಪಿಯಲ್ಲಿ ಸಿದ್ದರಾಮಯ್ಯಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ