Siddaramaiah Tweet: ಮೊಟ್ಟೆ ಎಸೆದವ ಕಾಂಗ್ರೆಸ್‌ನವನಾಗಿದ್ರೆ ಜೈಲಿಗೆ ಕಳಿಸಿ! ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿ, ತಾನು ಕಾಂಗ್ರೆಸ್ ಕಾರ್ಯಕರ್ತ ಅಂತ ಹೇಳಿಕೊಂಡಿದ್ದಾನಂತೆ. ಇನ್ನು ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಅಪ್ಪಚ್ಚು ರಂಜನ್ ಹಾಗೂ ಬಿಜೆಪಿ ನಾಯಕರ ವಿರುದ್ಧ ಸರಣಿ ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಮತ್ತು ಅಪ್ಪಚ್ಚು ರಂಜನ್ (ಸಂಗ್ರಹ ಚಿತ್ರ)

ಸಿದ್ದರಾಮಯ್ಯ ಮತ್ತು ಅಪ್ಪಚ್ಚು ರಂಜನ್ (ಸಂಗ್ರಹ ಚಿತ್ರ)

  • Share this:
ಬೆಂಗಳೂರು: ಮಾಜಿ ಸಿಎಂ (Former CM) ಹಾಗೂ ಹಾಲಿ ವಿಪಕ್ಷ ನಾಯಕ (Opposition Party Leader) ಸಿದ್ದರಾಮಯ್ಯ (Siddaramaiah) ಮೇಲೆ ಮಡಿಕೇರಿಯಲ್ಲಿ (Madikeri) ಮೊಟ್ಟೆ (Egg) ಎಸೆದಿದ್ದ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಟ್ವಿಸ್ಟ್ ಸಿಗುತ್ತಿದೆ. ಮೊಟ್ಟೆ ಎಸೆದವರು ಬಿಜೆಪಿ ಕಾರ್ಯಕರ್ತ (BJP Worker) ಅಂತ ಕಾಂಗ್ರೆಸ್ (Congress) ಆರೋಪಿಸುತ್ತಿದೆ. ಪ್ರಕರಣದ ಪ್ರಮುಖ ಆರೋಪಿ ಸಂಪತ್‌ಗೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ (Appachu Ranjan) ಬೆಂಬಲ ನೀಡುತ್ತಿದ್ದಾರೆ ಅಂತ ಕಾಂಗ್ರೆಸ್ ನಾಯಕರು ಆರೋಪಿಸಿದ್ದರೆ. ಆದರೆ ಆರೋಪಿ ಸಂಪತ್ ತಾನು ಕಾಂಗ್ರೆಸ್ ಕಾರ್ಯಕರ್ತ (Congress Worker) ಅಂತ ಹೇಳಿದ್ದಾನೆ ಎನ್ನಲಾಗಿದೆ. ಸಿದ್ದರಾಮಯ್ಯನವರ ಹಿಂದೂ ವಿರೋಧಿ ಹೇಳಿಕೆಗೆ ಬೇಸತ್ತು ಹೀಗೆ ಮಾಡಿದ್ದೇನೆ ಅಂತಾ ಸಂಪತ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಇನ್ನು ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಅಪ್ಪಚ್ಚು ರಂಜನ್ ಹಾಗೂ ಬಿಜೆಪಿ ನಾಯಕರ ವಿರುದ್ಧ ಸರಣಿ ಟ್ವೀಟ್ (Tweet) ಮಾಡಿದ್ದಾರೆ.

ಸಿದ್ದರಾಮಯ್ಯ ಸರಣಿ ಟ್ವೀಟ್

ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ? ಅಂತ ಖಾರವಾಗಿ ಪ್ರಶ್ನಿಸಿದ್ದಾರೆ.“ಬೀದಿ ಪುಂಡರಿಗೂ ಆಪರೇಷನ್ ಕಮಲ!”

'ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ 'ಆಪರೇಷನ್ ಕಮಲ' ಕೂಡಾ ಬಿಜೆಪಿ ಕರ್ನಾಟಕ ನಡೆಸುತ್ತಿದೆ ಎಂದು ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ. ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಅಂತ ಟ್ವೀಟ್ ಮೂಲಕವೇ ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ ಹಾಕಿದ್ದಾರೆ.

ಇದನ್ನೂ ಓದಿ: Siddaramaiah: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್​ ಕಾರ್ಯಕರ್ತ!

ಮೊಟ್ಟೆ ಎಸೆದವ ಕಾಂಗ್ರೆಸ್ ಕಾರ್ಯಕರ್ತನಾ?

ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ದೊರೆತಿದ್ದು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ. ನಾನು ಬಿಜೆಪಿ ಕಾರ್ಯಕರ್ತನಲ್ಲ. ನಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಬಂಧಿತ ಆರೋಪಿ ಸಂಪತ್ ಹೇಳಿದ್ದಾರೆ ಎನ್ನಲಾಗುತ್ತಿದೆ.

“ಸಿದ್ದು ಹಿಂದೂ ವಿರೋಧಿ ಹೇಳಿಕೆಗೆ ಮೊಟ್ಟೆ ಎಸೆದೆ!”

ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದಿದ್ದು ನಾನೇ ಎಂದು ಕಾಂಗ್ರೆಸ್ ಕಾರ್ಯಕರ್ತ ಸಂಪತ್ ಒಪ್ಪಿಕೊಂಡಿದ್ದಾರೆ. ನಾನು ಕಾಂಗ್ರೆಸ್ ಕಾರ್ಯಕರ್ತನೆ, ಕಾಂಗ್ರೆಸ್​ನಲ್ಲಿ ಹಿಂದೂಗಳಿಲ್ವಾ? ಸಿದ್ದರಾಮಯ್ಯ ಹಿಂದೂಗಳು ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ? ಅವರ ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದಿದ್ದೆ ಎಂದು ಸಂಪತ್​ ಹೇಳಿದ್ದಾರೆ ಎನ್ನಲಾಗುತ್ತಿದೆ.

ಆಗಸ್ಟ್ 18ರಂದು ನಡೆದಿದ್ದ ಘಟನೆ

ಆಗಷ್ಟ್ 15ರಂದು ವೀರ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್ ಫ್ಲೆಕ್ಸ್ ವಿಚಾರವಾಗಿ ಗಲಾಟೆ ಶುರುವಾಗಿತ್ತು. ಈ ಘಟನೆಗೆ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ, ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್ ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ್ದರು. ಬಳಿಕ ಆಗಸ್ಟ 18 ರಂದು  ಮಲೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ತರಳುತ್ತಿದ್ದ ಸಿದ್ದರಾಮಯ್ಯ ಅವರ ಮೇಲೆ ಮಡಿಕೇರಿಯಲ್ಲಿ ಕಿಡಿಗೇಡಿಗಳು ಮೊಟ್ಟೆ ಎಸೆದಿದ್ದರು. ಈ ಪ್ರಕರಣ ಸಂಬಂಧ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ನಂತರ ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ.

ಇದನ್ನೂ ಓದಿ: Pralhad Joshi: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ; ಕೊಲೆಗೆ ಸಂಚು ಎಂಬ ಆರೋಪದಲ್ಲಿ ಹುರುಳಿಲ್ಲ ಎಂದ ಪ್ರಹ್ಲಾದ್ ಜೋಶಿ

ಪೊಲೀಸರಿಂದ ಪ್ರಮುಖ ಆರೋಪಿ ಬಂಧನ

ಕಾಂಗ್ರೆಸ್ ಕಾರ್ಯಕರ್ತ ಸಂಪತ್​ನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಕುಶಾಲನಗರ ಜೆಎಂಎಫ್​ಸಿ ನ್ಯಾಯಾಲಯ ಆವರಣದಲ್ಲಿ ಬಂಧಿಸಿದ್ದಾರೆ.
Published by:Annappa Achari
First published: