HOME » NEWS » State » SIDDARAMAIAH HAS NO MORAL RIGHT TO SPEAK OUT AGAINST OUR GOVERNMENT SAYS DCM ASHWATH NARAYAN HK

ನೆರೆಯ ಬಗ್ಗೆ ಸರಕಾರದ ವಿರುದ್ಧ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ

ಎಲ್ಲ ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿಗಳು ನಡೆಯುತ್ತಿವೆ. ಆಫ್ ‌ಲೈನ್‌ ತರಗತಿಗಳು ಆರಂಭವಾಗಬೇಕು ಎಂಬುದು ವಿದ್ಯಾರ್ಥಿಗಳು ಬಯಸುತ್ತಿದ್ದಾರೆ. ಹೀಗಾಗಿ ಸರಕಾರವು ಕಾಲೇಜುಗಳನ್ನು ತೆರೆಯಲು ನಿರ್ಧರಿಸಿದೆ

news18-kannada
Updated:October 19, 2020, 3:05 PM IST
ನೆರೆಯ ಬಗ್ಗೆ ಸರಕಾರದ ವಿರುದ್ಧ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ
ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ
  • Share this:
ಮೈಸೂರು(ಅಕ್ಟೋಬರ್​. 19): ನೆರೆ ವಿಷಯವನ್ನು ಇಟ್ಟುಕೊಂಡು ಸರಕಾರದ ವಿರುದ್ಧ ಮಾತನಾಡುವ ನೈತಿಕತೆಯನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಳೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತರಾಟೆಗೆ ತೆಗೆದುಕೊಂಡರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸೋಮವಾರ ತಾಯಿ ಚಾಮುಂಡಿ ದರ್ಶನ ಪಡೆದ ನಂತರ ತಮ್ಮನ್ನು ನೆರೆ ನಿರ್ವಹಣೆಯಲ್ಲಿ ಸರಕಾರ ವಿಫಲವಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಸರಕಾರದ ರಾಜೀನಾಮೆ ಕೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ನೆರೆಯಲ್ಲೂ ರಾಜಕೀಯ ಮಾಡಬೇಕಾದ ಕರ್ಮ ಸಿದ್ದರಾಮಯ್ಯ ಅವರಿಗೆ ಬಂದಿದೆ ಎಂದು ಕುಟುಕಿದರು. ಎನ್‌ಡಿಆರ್‌ಎಫ್‌ ಮಾನದಂಡವನ್ನು ಎಲ್ಲ ರಾಜ್ಯಗಳು ಒಪ್ಪಿಕೊಂಡಿವೆ. ಅದರ ನಿಯಮಗಳಂತೆ ರಾಜ್ಯಕ್ಕೂ ಕೇಂದ್ರದಿಂದ ನೆರವು ಬಂದಿದೆ. ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲೇ ಹಣ ಬಂದಿದೆ. ಹತ್ತು ವರ್ಷ ಆಡಳಿತ ನಡೆಸಿದ್ದ ಯುಪಿಎ ಸರಕಾರ ರಾಜ್ಯದಲ್ಲಿ ನೆರೆ ಬಂದಾಗಲೆಲ್ಲ ಎಷ್ಟು ನೆರವು ನೀಡಿತ್ತು ಎಂಬುದನ್ನು ಕಾಂಗ್ರೆಸ್‌ ನಾಯಕರು ಮಾಹಿತಿ ಪಡೆಯಲಿ ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದರು.

ಕಾಲೇಜುಗಳನ್ನು ತೆರೆಯುವ ಬಗ್ಗೆ ಕೇಂದ್ರ ಸರಕಾರ ಮತ್ತು ಯುಜಿಸಿಯಿಂದ ಈಗಾಗಲೇ ರಾಜ್ಯಕ್ಕೆ ಸ್ಪಷ್ಟವಾದ ಮಾರ್ಗಸೂಚಿ ಬಂದಿದೆ. ಆ ಹಿನ್ನೆಲೆಯಲ್ಲಿ ಎಲ್ಲ ಮೂಲಭೂತ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದಷ್ಟು ಬೇಗ ಕಾಲೇಜುಗಳನ್ನು ತೆರೆಯುವ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಎಲ್ಲ ಕಾಲೇಜುಗಳಲ್ಲಿ ಆನ್‌ಲೈನ್‌ ತರಗತಿಗಳು ನಡೆಯುತ್ತಿವೆ. ಆಫ್ ‌ಲೈನ್‌ ತರಗತಿಗಳು ಆರಂಭವಾಗಬೇಕು ಎಂಬುದು ವಿದ್ಯಾರ್ಥಿಗಳು ಬಯಸುತ್ತಿದ್ದಾರೆ. ಹೀಗಾಗಿ ಸರಕಾರವು ಕಾಲೇಜುಗಳನ್ನು ತೆರೆಯಲು ನಿರ್ಧರಿಸಿದೆ. ಆದಷ್ಟು ಬೇಗ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.

ಇದನ್ನೂ ಓದಿ ಶಿರಾ ಉಪ ಚುನಾವಣೆಯಲ್ಲಿ ಜಾತಿ ಲೆಕ್ಕಾಚಾರ ಜೋರು: ಮೂರು ಪಕ್ಷದಲ್ಲಿ ಕುಂಚಿಟಿಗ ಒಕ್ಕಲಿಗ ಸಮುದಾಯದವರೇ ಅಭ್ಯರ್ಥಿಗಳು

ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿಯೇ ಗೆಲ್ಲುತ್ತದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಜನರಿಗೆ ಸ್ಥಿರ ಸರಕಾರ ಬೇಕಿದೆ. ಆ ನಿಟ್ಟಿನಲ್ಲಿ ಜನರು ಆಲೋಚನೆ ಮಾಡುತ್ತಿದ್ದಾರೆ. ಹಿಂದೆ ಜನರು ಅನೇಕ ಸಲ ಅವಕಾಶ ಕೊಟ್ಟಿದ್ದರು. ಸಿಕ್ಕ ಅವಕಾಶಗಳನ್ನು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಹಾಳು ಮಾಡಿಕೊಂಡರು. ಇನ್ನೂ ಅಂಥ ಪಕ್ಷಗಳಿಗೆ ಮತ ಹಾಕಿ ಪ್ರಯೋಜನವಿಲ್ಲ ಎಂಬ ಸತ್ಯ ಜನರಿಗೆ ಅರಿವಾಗಿದೆ ಎಂದು ಡಿಸಿಎಂ ಹೇಳಿದರು.

ಅಧಿಕಾರಕ್ಕಾಗಿ ಸಮ್ಮಿಶ್ರ ಸರಕಾರ ಮಾಡಿಕೊಂಡಿದ್ದ ಆ ಎರಡೂ ಪಕ್ಷಗಳ ನಾಯಕರು ಅಧಿಕಾರ ಇದ್ದಾಗಲೂ ಕಚ್ಚಾಡುತ್ತಿದ್ದರು. ಈಗ ಅಧಿಕಾರ ಇಲ್ಲದಿದ್ದಾಗಲೂ ಕಚ್ಚಾಡುತ್ತಿದ್ದಾರೆ. ಅವರಿಗೆ ಕಚ್ಚಾಟದಲ್ಲಿ ಆಸಕ್ತಿ ಇದೆಯೇ ವಿನಾ ರಾಜ್ಯದ ಅಭಿವೃದ್ಧಿಯಲ್ಲಿ ಇಲ್ಲ ಎಂದು ಅವರು ಲೇವಡಿ ಮಾಡಿದರು.
Published by: G Hareeshkumar
First published: October 19, 2020, 3:05 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories