• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Siddaramaiah: ಧರ್ಮಕ್ಕಾಗಿ ಕೊಲೆ ಮಾಡಿದ್ದೇವೆ ಎಂದವರನ್ನು ಯಾವ ದೇವರೂ ಕ್ಷಮಿಸಲಾರ -ಬಹಿರಂಗ ಪತ್ರದಲ್ಲಿ ಸಿದ್ದರಾಮಯ್ಯ ಆಕ್ರೋಶ

Siddaramaiah: ಧರ್ಮಕ್ಕಾಗಿ ಕೊಲೆ ಮಾಡಿದ್ದೇವೆ ಎಂದವರನ್ನು ಯಾವ ದೇವರೂ ಕ್ಷಮಿಸಲಾರ -ಬಹಿರಂಗ ಪತ್ರದಲ್ಲಿ ಸಿದ್ದರಾಮಯ್ಯ ಆಕ್ರೋಶ

<strong> ಕ್ರಮಕೈಗೊಳ್ಳಲು ಆಗ್ರಹಿಸಿದ್ದ ಸಿದ್ದರಾಮಯ್ಯ ಅಭಿಮಾನಿಗಳು </strong> <br /

ಪೇದೆ ಹಾಕಿರುವ ಸವಾಲ್​ ಪೋಸ್ಟ್​ ವಿರುದ್ಧ ಸಿದ್ದು ಅಭಿಮಾನಿಗಳು ಕಿಡಿಕಾರಿದ್ದರು.  ಸರ್ಕಾರಿ ಹುದ್ದೆಯಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುವುದು ಬಿಟ್ಟು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಪರ ಹೇಳಿಕೆ ನೀಡಿರುವುದು ಖಂಡನೀಯ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಗ್ರಹಿಸಿದ್ದರು.

<strong> ಕ್ರಮಕೈಗೊಳ್ಳಲು ಆಗ್ರಹಿಸಿದ್ದ ಸಿದ್ದರಾಮಯ್ಯ ಅಭಿಮಾನಿಗಳು </strong> <br / ಪೇದೆ ಹಾಕಿರುವ ಸವಾಲ್​ ಪೋಸ್ಟ್​ ವಿರುದ್ಧ ಸಿದ್ದು ಅಭಿಮಾನಿಗಳು ಕಿಡಿಕಾರಿದ್ದರು.  ಸರ್ಕಾರಿ ಹುದ್ದೆಯಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುವುದು ಬಿಟ್ಟು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಪರ ಹೇಳಿಕೆ ನೀಡಿರುವುದು ಖಂಡನೀಯ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಗ್ರಹಿಸಿದ್ದರು.

ರಾಜ್ಯದ ಯುವಕರನ್ನು ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ, ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನನ್ನನ್ನು ಆತಂಕಿತಗೊಳಿಸಿವೆ, ನೋವಿನಲ್ಲಿ ಮುಳುಗಿಸಿವೆ ಅಂತ ವಿಷಾದ ವ್ಯಕ್ತಪಡಿಸಿದ್ದಾರೆ.

  • News18 Kannada
  • 4-MIN READ
  • Last Updated :
  • Hindupur
  • Share this:

ಬೆಂಗಳೂರು: ಮಾಜಿ ಮುಖ್ಯಮಂತ್ರಿ (Ex CM) ಹಾಗೂ ಹಾಲಿ ವಿಪಕ್ಷ ನಾಯಕ (Opposition Party Leader) ಸಿದ್ದರಾಮಯ್ಯ (Siddaramaiah) ರಾಜ್ಯದ ಯುವ ಜನರಿಗೊಂದು (Youts) ಬಹಿರಂಗ ಪತ್ರ (Open Letter) ಬರೆದಿದ್ದಾರೆ. ರಾಜ್ಯದಲ್ಲಿ, ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ (Coastal Districts) ನಡೆಯುತ್ತಿರುವ ವಿದ್ಯಮಾನಗಳು ನನ್ನನ್ನು ಆತಂಕಿತಗೊಳಿಸಿವೆ, ನೋವಿನಲ್ಲಿ ಮುಳುಗಿಸಿವೆ ಅಂತ ಕಳವಳ ವ್ಯಕ್ತಪಡಿಸಿರುವ ಅವರು, ಮಸೂದ್ (Masood), ಪ್ರವೀಣ್ ನೆಟ್ಟಾರ್ (Praveen Nettar) ಹಾಗೂ ಫಾಜಿಲ್ (Fazil) ಹತ್ಯೆಗೆ (Murder) ಸಂತಾಪ ಸೂಚಿಸಿದ್ದಾರೆ. ಅಲ್ಲದೇ “ಧರ್ಮಕ್ಕಾಗಿ ಕೊಲೆ ಮಾಡಿದ್ದೇವೆ ಎನ್ನುವವರನ್ನು ಯಾವ ದೇವರೂ ಕ್ಷಮಿಸುವುದಿಲ್ಲ” ಅಂತ ಆಕ್ರೋಶದ ಮಾತನ್ನಾಡಿದ್ದಾರೆ.


ನಾಡಿನ ಯುವಜನರಿಗೆ ಸಿದ್ದರಾಮಯ್ಯ ಬಹಿರಂಗ ಪತ್ರ


ರಾಜ್ಯದ ಯುವಕರನ್ನು ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ, ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನನ್ನನ್ನು ಆತಂಕಿತಗೊಳಿಸಿವೆ, ನೋವಿನಲ್ಲಿ ಮುಳುಗಿಸಿವೆ ಅಂತ ವಿಷಾದ ವ್ಯಕ್ತಪಡಿಸಿದ್ದಾರೆ.


“ಕೊಲೆಯನ್ನು ಆತ್ಮಸಾಕ್ಷಿ ಸಹಿಸಬಾರದು”


ಬಾಳಿ ಬದುಕಬೇಕಾದ ಯುವಕರು ಕ್ಷುಲ್ಲಕ ಕಾರಣಗಳಿಗಾಗಿ, ಕೆಲವೊಮ್ಮೆ ಕಾರಣಗಳೆ ಇಲ್ಲದೆ ಹತ್ಯೆಗೀಡಾಗುತ್ತಿರುವುದನ್ನು ಕನ್ನಡ ನಾಡಿನ ಆತ್ಮಸಾಕ್ಷಿ ಸಹಿಸಬಾರದು ಅಂತ ಅವರು ಹೇಳಿದ್ದಾರೆ. ದುಡಿಯುವ ಜಾತಿ, ಪಂಗಡ, ಧರ್ಮಗಳಿಗೆ ಸೇರಿದ ಮಕ್ಕಳು ವಿನಾ ಕಾರಣ ಹತ್ಯೆಯಾಗುತ್ತಿರುವುದನ್ನು ಯಾವ ನಾಗರಿಕ ಸಮಾಜವೂ ಸಹಿಸಲಾಗದು ಅಂತ ಸಿದ್ದರಾಮಯ್ಯ ಹೇಳಿದ್ದಾರೆ.


ಇದನ್ನೂ ಓದಿ: Siddaramaiah: ಹಿಂದೂ ಸಂಘಟನೆಯವರ ಮೇಲೆ ಬುಲ್ಡೋಜರ್ ನುಗ್ಗಿಸಲು ಹೇಳಿದರೇ ಸಿದ್ದರಾಮಯ್ಯ? ಇದರ ಅಸಲಿಯತ್ತೇನು?


“ಧರ್ಮಕ್ಕಾಗಿ ಕೊಲೆ ಮಾಡಿದ್ದೇವೆ ಎನ್ನುವವರನ್ನು ಕ್ಷಮಿಸಲ್ಲ”


ಶಾಂತಿ, ಸೌಹಾರ್ದತೆಗೆ ಹೆಸರಾದ ಕರ್ನಾಟಕವನ್ನು ವಿನಾ ಕಾರಣ ಅಶಾಂತಿಯ ಕಡಲಲ್ಲಿ ಮುಳುಗಿಸಲಾಗುತ್ತಿದೆ. ಧರ್ಮಕ್ಕಾಗಿ ಕೊಲೆ ಮಾಡಿದ್ದೇವೆ ಎನ್ನುವವರನ್ನು ಯಾವ ದೇವರೂ ಕ್ಷಮಿಸುವುದಿಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಧರ್ಮವನ್ನು ನೀನು ರಕ್ಷಿಸಿದರೆ ಅದೆ ಧರ್ಮವು ನಿನ್ನನ್ನು ರಕ್ಷಿಸುತ್ತದೆ ಎಂಬ ಮಹಾಭಾರತದ ಮಾತುಗಳು, ಅವನ್ನು ಕೆಲವು ಮತಾಂಧರು ಹಾಗೂ ನಿರ್ಧಿಷ್ಟ ಹಿತಾಸಕ್ತಿಯುಳ್ಳ ಜನರು ಕುಗ್ಗಿಸಿದ್ದಾರೆ ಅಂತ ಬಹಿರಂಗ ಪತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ


ರಾಜ್ಯ ಸರ್ಕಾರದ ವರ್ತನೆ ಶಾಂತಿ ಸ್ಥಾಪಿಸುವ ಕಡೆಗೆ ಇಲ್ಲ. ಮುಗ್ಧರ ಹೆಣ ಬಿದ್ದರೆ ರಾಜಕೀಯ ನಡೆಯುತ್ತದೆ ಎಂದು ದುಷ್ಟರು ಭಾವಿಸಿದ್ದಾರೆ. 2018ರ ಬಿಜೆಪಿಯ ಪ್ರಣಾಳಿಕೆಯಲ್ಲಿ ಎನ್ಐಎ ಸ್ಥಾಪಿಸುತ್ತೇವೆಂದು ಆಶ್ವಾಸನೆ ಕೊಟ್ಟಿದ್ರು. ಕ್ರೂರ ಮನಸ್ಥಿತಿಯ CM, ಬೇಜವಾಬ್ಧಾರಿ ನಡವಳಿಕೆಯ ಗೃಹಮಂತ್ರಿ ರಾಜ್ಯ ಕಂಡಿರಲಿಲ್ಲ. ಕೆಟ್ಟ ಕಾರಣಕ್ಕಾಗಿ ಕರಾವಳಿಯು ರಾಜ್ಯಕ್ಕೆ ಮಾದರಿಯಾಗುವುದು ಬೇಡ. 30 ವರ್ಷಗಳ ಹಿಂದೆ ಕರಾವಳಿಯನ್ನು ರಾಜ್ಯ- ದೇಶಗಳ ಜನರು ಪ್ರೀತಿ, ಗೌರವ ಮತ್ತು ಹೆಮ್ಮೆಯ ಭಾವನೆಗಳಿಂದ ನೋಡುತ್ತಿದ್ದರಲ್ಲ, ಅಂಥ ಕರಾವಳಿಯನ್ನು ದಯಮಾಡಿ ನಿರ್ಮಾಣ ಮಾಡಿ ಅಂತ ಸಿದ್ದರಾಮಯ್ಯ ಕರೆ ನೀಡಿದ್ದಾರೆ.


“ಶಾಂತಿಯುತ ವಾತಾವರಣ ನಿರ್ಮಾಣವಾಗಲಿ”


ಕುಟುಂಬದ ಸದಸ್ಯರುಗಳೆಲ್ಲರೂ ಧರ್ಮಾತೀತವಾಗಿ ಒಂದಾಗಿ ವೇದಿಕೆ ರಚಿಸಿ. ಶಾಂತಿ ಸೌಹಾರ್ದದ ಕರಾವಳಿ ನಿರ್ಮಿಸಲು ಮುಂದಾಗಿ, ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ಮುಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಈ ಸಭೆಗಳನ್ನು ಅಧಿಕೃತಗೊಳಿಸುತ್ತೇವೆ. ಈಗ ನಾಡಿನಲ್ಲಿ ಅತ್ಯಂತ ತುರ್ತಾಗಿ ಶಾಂತಿಯುತವಾದ ವಾತಾವರಣ ನಿರ್ಮಾಣವಾಗಬೇಕಾಗಿದೆ ಅಂತ ಅವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: Praveen Nettar Murder: ಹಂತಕರಿಗೆ ಟಾರ್ಗೆಟ್ ಆಗಿದ್ದೇಕೆ ಪ್ರವೀಣ್ ನೆಟ್ಟಾರ್? ಬಿಜೆಪಿ ಕಾರ್ಯಕರ್ತನ ಹತ್ಯೆ ಹೇಗಾಯ್ತು?


ಫೇಸ್‌ಬುಕ್ ಪೋಸ್ಟ್‌ಗೆ ಸಿದ್ದರಾಮಯ್ಯ ಸ್ಪಷ್ಟನೆ


ಇನ್ನು ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಸಂಘಟನೆ ಮೇಲೆ ಬುಲ್ಡೋಜರ್  ನುಗ್ಗಿಸಬೇಕು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹರಿದಾಡುತ್ತಿರುವ ಪೋಸ್ಟ್​​ ಸಂಬಂಧ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

First published: