ರೈತರ ಪ್ರತಿಭಟನೆಯನ್ನು ಹತ್ತಿಕ್ಕಿದರೆ ತಕ್ಕ ಬೆಲೆ ತೆರಬೇಕಾದೀತು; ಸರ್ಕಾರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ

Farmers Protest: ಪ್ರತಿಭಟನೆಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ. ಹೋರಾಟ ಮಾಡುವ ಹಕ್ಕನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡಿದರೆ ಸರ್ಕಾರ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ

ಸಿದ್ದರಾಮಯ್ಯ

  • Share this:
ಬೆಂಗಳೂರು (ಜ. 26): ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಇಂದು ಸಾವಿರಾರು ರೈತರು ಬೆಂಗಳೂರಿಗೆ ಮುತ್ತಿಗೆ ಹಾಕಿದ್ದಾರೆ. ಟ್ರ್ಯಾಕ್ಟರ್​ ರ್ಯಾಲಿ ನಡೆಸಲು ಮುಂದಾಗಿದ್ದು, ಬೆಂಗಳೂರನ್ನು ಪ್ರವೇಶಿಸುವ ಮುನ್ನವೇ ಅನೇಕ ಕಡೆ ಪೊಲೀಸರು ಅವರನ್ನು ತಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರತಿಭಟನೆಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ. ಹೋರಾಟ ಮಾಡುವ ಹಕ್ಕನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡಿದರೆ ಸರ್ಕಾರ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶವಿದೆ. ಸರ್ವಾಧಿಕಾರಕ್ಕೆ ಪ್ರಜಾಪ್ರಭುತ್ವದಲ್ಲಿ ಅವಕಾಶ ಇಲ್ಲ. ಪ್ರತಿಭಟನೆಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ. ಹೋರಾಟ ಮಾಡುವ ಹಕ್ಕನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು. ರೈತರು ನಮ್ಮ ಬೆನ್ನೆಲುಬು. ಅವರನ್ನು ತಡೆದಿದ್ದಕ್ಕೆ ತಕ್ಕ ಉತ್ತರವನ್ನು ದೇಶದ ಜನರೇ ಕೊಡುತ್ತಾರೆ. ರೈತರ ಪ್ರತಿಭಟನೆಯನ್ನು ಹತ್ತಿಕ್ಕುವುದನ್ನು ನಾನು ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Republic Day 2021: ಕೋವಿಡ್ ಹೋರಾಟದಲ್ಲಿ ಕರ್ನಾಟಕ ಇಡೀ ದೇಶಕ್ಕೇ ಮಾದರಿಯಾಗಿದೆ; ರಾಜ್ಯಪಾಲ ವಜುಭಾಯಿ ವಾಲಾ

ರೈತರ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡಿದರೆ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮೊನ್ನೆ ರೈತರ ಪ್ರತಿಭಟನೆ ಹತ್ತಿಕ್ಕುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದರು. ಆದರೆ, ಈಗ ಪೊಲೀಸರ ಮೂಲಕ ರೈತರನ್ನು ರಾಜಧಾನಿಗೆ ಬರಲು ತಡೆಯುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ಕಗ್ಗೊಲೆ ಎಂದು ಆರೋಪಿಸಿದ್ದಾರೆ.

ಇನ್ನು, ರೈತರ ಪ್ರತಿಭಟನೆ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಪ್ರತಿಕ್ರಿಯೆ ನೀಡಿದ್ದು. ರೈತರ ಹೋರಾಟ ಶಾಂತ ರೀತಿಯಲ್ಲಿ ನಡೆಯುವುದಕ್ಕೆ ನನ್ನ ಅಭ್ಯಂತರ ಏನೂ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾದ ನಿರ್ಧಾರ ತೆಗೆದುಕೊಂಡು ಎರಡು ವರ್ಷಗಳ ನಂತರ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನವನ್ನು ನಾವು ಮಾಡಿಲ್ಲ. ಟ್ರ್ಯಾಕ್ಟರ್ ತಂದು ಪ್ರತಿಭಟನೆ ಮಾಡಿದರೆ ಜನರಿಗೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಅದಕ್ಕೆ ಬೇಡ ಎಂದು ಹೇಳಿದ್ದೇವೆ ಎಂದು ಸ್ಪಷ್ಟ ಪಡಿಸಿದ್ದಾರೆ.
Published by:Sushma Chakre
First published: