HOME » NEWS » State » SIDDARAMAIAH LEKKA KODI CAMPAIGN AGAINST BS YEDIYURAPPA GOVERNMENT DCM MINISTERS ON TWITTER SCT

ಇನ್ನಾದರೂ ಲೆಕ್ಕ ಕೊಡ್ತೀರಾ?; ಡಿಸಿಎಂ ಕಾರಜೋಳ, ಸಚಿವರ ಮುಂದೆ ಸಾಲುಸಾಲು ಪ್ರಶ್ನೆಯಿಟ್ಟ ಸಿದ್ದರಾಮಯ್ಯ

ಕೊರೋನಾದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಮತ್ತೆ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ವಿ. ಸೋಮಣ್ಣ, ಸುರೇಶ್ ಕುಮಾರ್, ಶಶಿಕಲಾ ಜೊಲ್ಲೆ ಅವರಿಗೆ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಹಾಕಿದ್ದಾರೆ.

news18-kannada
Updated:August 9, 2020, 1:28 PM IST
ಇನ್ನಾದರೂ ಲೆಕ್ಕ ಕೊಡ್ತೀರಾ?; ಡಿಸಿಎಂ ಕಾರಜೋಳ, ಸಚಿವರ ಮುಂದೆ ಸಾಲುಸಾಲು ಪ್ರಶ್ನೆಯಿಟ್ಟ ಸಿದ್ದರಾಮಯ್ಯ
ಸಿದ್ದರಾಮಯ್ಯ
  • Share this:
ಬೆಂಗಳೂರು (ಆ. 9): ಲೆಕ್ಕ ಕೊಡಿ ಅಭಿಯಾನದ ಮೂಲಕ ರಾಜ್ಯ ಸರ್ಕಾರದ ಮುಂದೆ ಸಾಲು ಸಾಲು ಪ್ರಶ್ನೆಗಳನ್ನಿಟ್ಟಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ಸರ್ಕಾರದ ಸಚಿವರ ಮೇಲೆ ಪ್ರಶ್ನೆಗಳ ದಾಳಿ ನಡೆಸಿದ್ದಾರೆ. ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ವಿ. ಸೋಮಣ್ಣ, ಸುರೇಶ್ ಕುಮಾರ್, ಶಶಿಕಲಾ ಜೊಲ್ಲೆ ಅವರಿಗೆ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಹಾಕಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ನೀಡಲು ಸರ್ಕಾರ ವಿಫಲವಾಗಿರುವುದರಿಂದಲೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯಸರ್ಕಾರ ಕೈಕಾಲು ಬಿಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತ ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಸರ್ಕಾರ ಹೊರಟಿದೆ ಎಂದಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ, ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ,ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು? ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ತಿಗೊಂಡಿವೆ? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು? ಈಗಲಾದರೂ ಈ ವಿವರ ನೀಡುವಿರಾ ಎಂದು ಕೇಳಿದ್ದಾರೆ.ವಸತಿ ಸಚಿವ ವಿ. ಸೋಮಣ್ಣ ಅವರಿಗೆ ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ, ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ನೀಡಿದ ಪರಿಹಾರ ಎಷ್ಟು? ಕಟ್ಟಿದ ಹೊಸ ಮನೆಗಳೆಷ್ಟು? ಪ್ರತಿಬಾರಿ ನೆರೆ ನೀರಿನಲ್ಲಿ ಮುಳುಗುವ ಮನೆಗಳೆಷ್ಟು? ಎಷ್ಟು ಕುಟುಂಬಗಳು ಶೆಡ್‌ನಲ್ಲಿವೆ?ಎಷ್ಟು ಕುಟುಂಬಗಳು ಬಾಡಿಗೆ ಮನೆಯಲ್ಲಿವೆ? ಎಂದು ಕೇಳಿದ್ದಾರೆ.ಶಶಿಕಲಾ ಜೊಲ್ಲೆ ಅವರಿಗೂ ಪ್ರಶ್ನೆ ಕೇಳಿರುವ ಸಿದ್ದರಾಮಯ್ಯ ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಅಂಗನವಾಡಿ ಕಟ್ಟಡಗಳೆಷ್ಟು? ಅವುಗಳಲ್ಲಿ ದುರಸ್ತಿವಾಗಿರುವುದೆಷ್ಟು? ಪುನರ್ ನಿರ್ಮಾಣವಾಗಿದ್ದೆಷ್ಟು? ಇವುಗಳ ದುರಸ್ತಿ-ಪುನರ್ ನಿರ್ಮಾಣಕ್ಕೆ ಖರ್ಚಾದ ಹಣ ಎಷ್ಟು? ಎಂದು ಮಾಹಿತಿಯನ್ನು ಸಿದ್ದರಾಮಯ್ಯ ಕೇಳಿದ್ದಾರೆ.ಇನ್ನು,  ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಸರ್ಕಾರಿ ಶಾಲಾ ಕಟ್ಟಡಗಳೆಷ್ಟು? ಎಷ್ಟು ಕಟ್ಟಡಗಳನ್ನು ದುರಸ್ತಿ ಪಡಿಸಲಾಗಿದೆ ಮತ್ತು ಪುನರ್ ನಿರ್ಮಿಸಿಗೊಳ್ಳಲಾಗಿದೆ? ದುರಸ್ತಿಗೆ ಬಾಕಿ ಉಳಿದಿರುವುದು ಎಷ್ಟು? ಇದಕ್ಕಾಗಿ ಖರ್ಚಾದ ಹಣ ಎಷ್ಟು? ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ  ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.ಕೊರೋನಾದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಮತ್ತೆ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಸಿದ್ದರಾಮಯ್ಯ ಕೇಳಿರುವ ಪ್ರಶ್ನೆಗೆ ಸಚಿವರು ಉತ್ತರ ನೀಡುತ್ತಾರಾ ಎಂದು ಕಾದು ನೋಡಬೇಕು.
Published by: Sushma Chakre
First published: August 9, 2020, 1:27 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories