ಇಂದು ದೆಹಲಿಯಲ್ಲಿ ಸೋನಿಯಾ -ಸಿದ್ದರಾಮಯ್ಯ ಭೇಟಿ; ಉಪಚುನಾವಣೆ ಅಭ್ಯರ್ಥಿಗಳ ಪಟ್ಟಿಗೆ ಬೀಳುತ್ತಾ ಮುದ್ರೆ?

ವಿರೋಧಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ. ಈಗಾಗಲೇ ರಾಜ್ಯ ವಿಧಾನಸಭಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಹೈಕಮಾಂಡ್ ಮುದ್ರೆ ಬೀಳುವುದೊಂದೇ ಬಾಕಿಯಿದೆ.

Sushma Chakre | news18-kannada
Updated:October 16, 2019, 8:51 AM IST
ಇಂದು ದೆಹಲಿಯಲ್ಲಿ ಸೋನಿಯಾ -ಸಿದ್ದರಾಮಯ್ಯ ಭೇಟಿ; ಉಪಚುನಾವಣೆ ಅಭ್ಯರ್ಥಿಗಳ ಪಟ್ಟಿಗೆ ಬೀಳುತ್ತಾ ಮುದ್ರೆ?
ಸೋನಿಯಾ ಗಾಂಧಿ ಮತ್ತು ಸಿದ್ದರಾಮಯ್ಯ.
  • Share this:
ನವದೆಹಲಿ (ಅ. 16): ಕರ್ನಾಟಕ ವಿಧಾನಸಭಾ ಉಪಚುನಾವಣೆಗೆ ರಾಜ್ಯದಲ್ಲಿ ಎಲ್ಲ ಪಕ್ಷಗಳೂ ಸಕಲ ರೀತಿಯ ಸಿದ್ಧತೆ ನಡೆಸಿವೆ. ಈಗಾಗಲೇ ಕಾಂಗ್ರೆಸ್​ನಿಂದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ನಿನ್ನೆಯಷ್ಟೇ ಕೆಪಿಸಿಸಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಜೊತೆ ರಾಜ್ಯ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದಾರೆ. ಆ ಪಟ್ಟಿಗೆ ಹೈಕಮಾಂಡ್ ಮುದ್ರೆ ಬೀಳುವುದೊಂದೇ ಬಾಕಿಯಿದೆ.

ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ಆಗಮಿಸಿದ್ದಾರೆ. ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ರಾತ್ರಿ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಆಗಮಿಸಿದ್ದಾರೆ. ಇಂದು ಅವರು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲಿದ್ದು, ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಗೆ ಒಪ್ಪಿಗೆ ಪಡೆಯಲಿದ್ದಾರೆ.

ಮಹಾರಾಷ್ಟ್ರ ಚುನಾವಣೆ; ಬಿಜೆಪಿ ಪರವಾಗಿ ಇಂದು ಸಿಎಂ ಬಿಎಸ್​ ಯಡಿಯೂರಪ್ಪ ಪ್ರಚಾರ

ವಿರೋಧಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ. ಹಲವು ದಿನಗಳಿಂದ ವಿಪಕ್ಷ ನಾಯಕನಾಗಲು ಪಕ್ಷದಲ್ಲಿ ಲಾಬಿ ನಡೆಸಿದ್ದ ಸಿದ್ದರಾಮಯ್ಯ ಕೊನೆಗೂ ತಾವು ಅಂದುಕೊಂಡಂತೆ ಯಶಸ್ವಿಯೂ ಆಗಿದ್ದಾರೆ. ಹೀಗಾಗಿ ತಮ್ಮನ್ನು ಪ್ರತಿಪಕ್ಷದ ನಾಯಕರನ್ನಾಗಿ ನೇಮಕ ಮಾಡಿರುವ ಕಾರಣ ಸೋನಿಯಾಗಾಂಧಿ ಅವರಿಗೆ ಇಂದು ಅಭಿನಂದನೆ ಸಲ್ಲಿಸಲಿದ್ದಾರೆ.

ರೈತರ ಸಂಪೂರ್ಣ ಸಾಲಮನ್ನಾ ಇಲ್ಲ, ನೆರೆ ಪರಿಹಾರಕ್ಕೆ ಹಣ ಬಳಕೆ ; ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ನಾಯಕರ ಭೇಟಿ ವೇಳೆ ಪಕ್ಷದ ಪದಾಧಿಕಾರಿಗಳ ನೇಮಕ ಹಾಗೂ ಸ್ವಪಕ್ಷೀಯರ ಮೇಲೆ ನಡೆಯುತ್ತಿರುವ ಐಟಿ ದಾಳಿ ಕುರಿತು ಪಕ್ಷದ ಮುಂದಿನ ನಡೆ, ಹಾಗೆಯೇ ವಿಧಾನಸಭೆ ಉಪಚುನಾವಣೆಯ ತಯಾರಿ, ಪಕ್ಷ ಸಂಘಟನೆ ಕುರಿತು ಚರ್ಚಿಸಲಿದ್ದಾರೆ. ನಂತರ ಇಂದು ರಾತ್ರಿಯೇ ಬೆಂಗಳೂರಿಗೆ ಸಿದ್ದರಾಮಯ್ಯ ವಾಪಾಸಾಗಲಿದ್ದಾರೆ. ಹೈಕಮಾಂಡ್​ ಒಪ್ಪಿಗೆ ದೊರೆತರೆ ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ. ಈ ಬಾರಿಯ ಕರ್ನಾಟಕ ವಿಧಾನಸಭಾ ಉಪಚುನಾವಣೆ ಜವಾಬ್ದಾರಿಯನ್ನು ಸಿದ್ದರಾಮಯ್ಯನವರಿಗೆ ವಹಿಸಲಾಗಿದೆ.

ನಿನ್ನೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ವಿಧಾನಸಭಾ ಕ್ಷೇತ್ರಗಳ ಕೈ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗಿತ್ತು. ಹೊಸಕೋಟೆ, ಕೆಆರ್ ಪುರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಶಿವಾಜಿನಗರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ತಯಾರಿಸಲಾಗಿದೆ. ಆಕಾಂಕ್ಷಿಗಳ ಪಟ್ಟಿಯನ್ನು ದೆಹಲಿಗೆ ಕಳಿಸಲು‌ ಸಭೆಯಲ್ಲಿ ನಿರ್ಧಾರ ಮಾಡಲಾಗಿದ್ದು, ಅಧಿಕೃತವಾಗಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆ ಮಾಡಲಿದೆ.ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳು

ಹೊಸಕೋಟೆ - ಪದ್ಮಾವತಿ ಭೈರತಿ ಸುರೇಶ್​
ಕೆಆರ್ ಪುರ - ಎಂಎಲ್ಸಿ ನಾರಾಯಣಸ್ವಾಮಿ
ಶಿವಾಜಿನಗರ - ರಿಜ್ವಾನ್ ಅರ್ಷದ್ ಅಥವಾ ಸಲೀಂ ಅಹಮದ್ ಅಥವಾ ಎಸ್ ಎ ಹುಸೇನ್
ಮಹಾಲಕ್ಷ್ಮಿ ಲೇಔಟ್ - ಕಾರ್ಪೊರೇಟರ್ ಶಿವರಾಜ್ ಅಥವಾ ಮಂಜುನಾಥ್ ಗೌಡ
ಯಶವಂತಪುರ - ಜೆಡಿಎಸ್​ನ ಜವರೇಗೌಡ ಅಥವಾ ಎಂ ರಾಜಕುಮಾರ್
ಚಿಕ್ಕಬಳ್ಳಾಪುರ - ಜಿ ಎಚ್ ನಾಗರಾಜ್ ಅಥವಾ ಆಂಜಿನಪ್ಪ ಯಲವಳ್ಳಿ ರಮೇಶ್

(ವರದಿ: ಧರಣೀಶ್ ಬೂಕನಕೆರೆ)

First published:October 16, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading