Karnataka Politics: ಸಿದ್ದರಾಮಯ್ಯ ಮಾತಿಗೆ ಕಿಮ್ಮತ್ತು ಇಲ್ಲ, RSS ಬಗ್ಗೆ ಪುಸ್ತಕ ಕಳುಹಿಸುವೆ; ST Somashekhar

ಸಿದ್ದರಾಮಯ್ಯನವರಿಗೆ ಸದ್ಯದಲ್ಲೇ ಆರ್,ಎಸ್ಎಸ್ ಸಂಘಟನೆಯ ಪುಸ್ತಕ ಕಳುಹಿಸಿಕೊಡುತ್ತೇನೆ. ಓದಿ RSS ಬಗ್ಗೆ ತಿಳಿದುಕೊಳ್ಳಲಿ. ಸಿದ್ದರಾಮಯ್ಯನವರಿಗೆ RSS ಬಗ್ಗೆ ಒಂದು ಪರ್ಸೆಂಟ್ ಸಹ ಗೊತ್ತಿಲ್ಲ ಎಂದು ಕಿಡಿಕಾರಿದರು.

ಎಸ್ ಟಿ ಸೋಮಶೇಖರ್

ಎಸ್ ಟಿ ಸೋಮಶೇಖರ್

  • Share this:
RSS ಮೂಲದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಹೇಳಿಕೆಗೆ ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ (Minister ST Somashekhar) ಹೇಳಿಕೆ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯನವರು ಆರ್ ಎಸ್ ಎಸ್ ಬಗ್ಗೆ ಸ್ಟಡಿ ಮಾಡಿಲ್ಲ. ಈ‌ ಹಿಂದೆ ಸಿದ್ದರಾಮಯ್ಯನವರೇ ಬನ್ನಿ RSS ಕಚೇರಿಗೆ ಕರೆದುಕೊಂಡು ಹೋಗುತ್ತೇನೆ. ಅವರ ಕೆಲಸದ ಬಗ್ಗೆ ಸ್ಟಡಿ ಮಾಡಿ ಎಂದಿದ್ದೆ. ಸಿಎಂ ಆಗಿ ಮಾತನಾಡುತ್ತಿದ್ದಾಗ ಅವರ ಮಾತಿಗೆ ತೂಕ ಇತ್ತು. ಸದ್ಯ ಅವರ ಮಾತನ್ನು ಅವರ ಪಕ್ಷದಲ್ಲೇ ಯಾರು ಕೇಳುತ್ತಿಲ್ಲಾ. ಕಾಂಗ್ರೆಸ್ (Congress) ಪಕ್ಷದಲ್ಲಿ ಸಿದ್ದರಾಮಯ್ಯ ನವರನ್ನ ನೆಗ್ಲೆಟ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮಾತಿಗೆ ಕಿಮ್ಮತ್ ಇಲ್ಲಾ ಎಂದು ವ್ಯಂಗ್ಯ ಮಾಡಿದರು.

ಆರ್ ಎಸ್ ಎಸ್ ದೇಶ ಭಕ್ತಿ ಸಂಘಟನೆ, ದೇಶದ ಅಭಿವೃದ್ಧಿ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುತ್ತಾರೆ. ಸಿದ್ದರಾಮಯ್ಯನವರಿಗೆ ಸದ್ಯದಲ್ಲೇ ಆರ್,ಎಸ್ಎಸ್ ಸಂಘಟನೆಯ ಪುಸ್ತಕ ಕಳುಹಿಸಿಕೊಡುತ್ತೇನೆ. ಓದಿ RSS ಬಗ್ಗೆ ತಿಳಿದುಕೊಳ್ಳಲಿ. ಸಿದ್ದರಾಮಯ್ಯನವರಿಗೆ RSS ಬಗ್ಗೆ ಒಂದು ಪರ್ಸೆಂಟ್ ಸಹ ಗೊತ್ತಿಲ್ಲ ಎಂದು ಕಿಡಿಕಾರಿದರು.

ಯಾವುದೇ ಕಾರಣಕ್ಕೂ ಕೇಸರಿಕರಣ ಮಾಡ್ತಿಲ್ಲ

ಇನ್ನೂ ಪಠ್ಯ ಪುಸ್ತಕ ಸಮಿತಿಯನ್ನ ಕೈಬಿಡಬೇಕೆಂಬ ಹೆಚ್.ವಿಶ್ವನಾಥ್ ಹೇಳಿಕೆಗೆ ತಿರುಗೇಟು ನೀಡಿದರು. ವಿಶ್ವನಾಥ್ ಯಾವಗಾಲೂ ಅಡ್ವೈಸ್ ಕೊಡ್ತಾ ಇರ್ತಾರೆ. ಒಳ್ಳೆ ಅಂಶಗಳನ್ನ ಪರಿಗಣಿಸುತ್ತೇವೆ. ಯಾವುದೇ ಕಾರಣಕ್ಕೂ ಕೇಸರಿಕರಣ ಮಾಡುತ್ತಿಲ್ಲಾ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ:  MLC ಚುನಾವಣೆಗೆ ಸ್ಪರ್ಧಿಸಿದ್ದೇ ದೊಡ್ಡ ಅಪರಾಧ: ED ದಾಳಿ ಬಳಿಕ ಕೆಜಿಎಫ್ ಬಾಬು ಹೇಳಿಕೆ

ವಿಶ್ವನಾಥ್ ಹಿರಿಯ ರಾಜಕಾರಣಿ

ಯಾರು ಕಂಪ್ಲೀಟ್ ಆಗಿ ಪುಸ್ತಕವನ್ನ ಓದಿಲ್ಲಾ. ರಾಜಕೀಯವಾಗಿ ಮಾತನಾಡುತ್ತಿದ್ದಾರೆ. ವಿಶ್ವನಾಥ್ ಅವರು ಕೇವಲ ಕರ್ನಾಟಕಕ್ಕೆ ಅಡ್ವೈಸ್ ಮಾಡುವುದಿಲ್ಲಾ. ನ್ಯಾಷನಲ್ ಹಾಗೂ ಇಂಟರ್ ನ್ಯಾಷನಲ್ ವಿಚಾರಗಳನ್ನ ಚೆನ್ನಾಗಿ ತಿಳಿದುಕೊಂಡಿದ್ದಾರೆ. ಅವರು ಹೇಳುವ ಒಳ್ಳೆದನ್ನ ಪರಿಗಣಿಸುತ್ತೇವೆ, ಕೆಟ್ಟದನ್ನ ಕೈಬಿಡುತ್ತೇವೆ. ಅವರು ಹಿರಿಯ ರಾಜಕಾರಣಿ ಎಂದು ವ್ಯಂಗ್ಯವಾಗಿ ತಿರುಗೇಟು ನೀಡಿದರು.

ಸಿದ್ದರಾಮಯ್ಯಗೆ ಸಂಸದ ಪ್ರತಾಪ್​ ಸಿಂಹ ತಿರುಗೇಟು

ಸಿದ್ದರಾಮಯ್ಯ ಆರ್.ಎಸ್.ಎಸ್ ಮೂಲದ ಪ್ರಶ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್​ ಸಿಂಹ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್ ನಲ್ಲಿದ್ದಾಗ ಸೋನಿಯಾ ಗಾಂಧಿ ಅವರನ್ನು ಏಕವಚನದಲ್ಲಿ ಮಾತನಾಡುತ್ತಿದ್ದರು. ಈಗ ಅವರದ್ದೇ ಪಕ್ಷಕ್ಕೆ ಹೋಗಿ ಮಹಾತಾಯಿ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಸೋನಿಯಾ ಅವರನ್ನು ಮಹಾತಾಯಿ, ಮಹಾನಾಯಕಿ ಎಂದು ಒಪ್ಪಿಕೊಳ್ಳುವ ದಯನೀಯ ಸ್ಥಿತಿಯಲ್ಲಿದ್ದಾರೆ.

ನೀವೂ ಆರ್.ಎಸ್.ಎಸ್ ಮೂಲ ಹುಡುಕುವ ಮೊದಲು ಸೋನಿಯಾ ಗಾಂಧಿ ಮೂಲ ಹುಡುಕಿ ಎಂದು ಪ್ರತಾಪ್​ ಸಿಂಹ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಜನತೆಗೆ ಇದನ್ನು ಮೊದಲು ತಿಳಿಸಿ, ಆಮೇಲೆ ಬೇರೆಯವರ ಬಗ್ಗೆ ಪ್ರಶ್ನೆ ಮಾಡಿ ಎಂದು ಉಡುಪಿಯಲ್ಲಿ ಸಿದ್ದರಾಮಯ್ಯಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು.

ಸಿದ್ದರಾಮಯ್ಯ ಆರ್ಯರಾ? ದ್ರಾವಿಡರಾ?

RSS ಮೂಲ ಕೆದಕಿದ್ದ ಸಿದ್ದರಾಮಯ್ಯ (Siddaramaiah) ಅವ್ರಿಗೆ ಬಿಜೆಪಿ ನಾಯಕರು (BJP Leaders) ಇಂದು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಆರ್ಯರಾ? ಅಥವಾ ದ್ರಾವಿಡರಾ? ಅನ್ನೋದನ್ನು ಮೊದಲು ಹೇಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಕಟುವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ಸಿಎಂಗೆ ಪತ್ರ ಬರೆದಿದ್ದ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಗೈದಿದ್ರು. ಇದೀಗಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು ನೀಡಿದ್ದಾರೆ. ಮೊದಲು ಸಿದ್ದರಾಮಯ್ಯ ಎಲ್ಲಿಂದ ಬಂದಿದ್ದಾರೆ ಅಂತ ಹೇಳಲಿ ಎಂದು ಸವಾಲು ಹಾಕಿದರು.

ಇದನ್ನೂ ಓದಿ:  SDPI ಸಂಘಟನೆ BJPಯ ಪಾಲಿಗೆ ಕಲ್ಪವೃಕ್ಷ ಇದ್ದಂತೆ, ತಾಕತ್ತಿದ್ರೆ ನಿಷೇಧಿಸಲಿ: ದಿನೇಶ್ ಗುಂಡೂರಾವ್ ಸವಾಲ್

ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಕಿಡಿ

ಸಿದ್ದರಾಮಯ್ಯ ಅವರು ಭಾರತ ಮತ್ತು ಭಾರತೀಯತೆಯನ್ನು ಮೆಕಾಲೆ ದೃಷ್ಟಿಕೋನದಿಂದ ನೋಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಆರ್ ಎಸ್ ಎಸ್ ನವರ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ ದೇಶದ ಜನರ ಕ್ಷಮೆಯಾಚಿಸಬೇಕೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ
Published by:Mahmadrafik K
First published: