ನವದೆಹಲಿ: ಕಳೆದ ನಾಲ್ಕು ದಿನಗಳಿಂದ ಶುರುವಾಗಿದ್ದ ಸಿಎಂ ಸ್ಥಾನದ ಆಯ್ಕೆಯ ಹಗ್ಗ ಜಗ್ಗಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಸಿಎಂ ಆಗಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಆಗಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಆಯ್ಕೆ ಮಾಡಿ ಅಧಿಕೃತ ಮುದ್ರೆಯನ್ನು ಒತ್ತಿದೆ. ಕಳೆದ ಭಾನುವಾರದಿಂದ ಸಿಎಂ ಅಯ್ಕೆಯ ಕಸರತ್ತು ನಡೆಯುತ್ತಿತ್ತು. ಹೈಕಮಾಂಡ್ ಅಧಿಕಾರ ಹಂಚಿಕೆಯ ಸೂತ್ರವನ್ನರಿಸಿ ಸಿಎಂ ಆಯ್ಕೆಗೆ ಮುಂದಾಗಿತ್ತು. ಆದ್ರೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮಾತ್ರ ಯಾವ ಅಧಿಕಾರ ಹಂಚಿಕೆಯ ಸೂತ್ರವನ್ನು ಒಪ್ಪಿಕೊಳ್ಳದೇ, ಐದು ವರ್ಷದ ಪೂರ್ಣ ಅವಧಿಗೆ ನನ್ನನ್ನೇ ಸಿಎಂ ಮಾಡಬೇಕು ಎಂದು ಪಟ್ಟು ಹಿಡಿದಿದ್ದರು. ಶುಕ್ರವಾರ ಅಮವಾಸ್ಯೆ ಹಿನ್ನೆಲೆ ಮೇ 20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿಕ ಕಂಠೀರವ ಕ್ರೀಡಾಂಗಣದಲ್ಲಿ (Kantheerava Stadium) ನಡೆಯಲಿದೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೇ ಪ್ರಮಾಣ ವಚನ (Oath taking program) ತೆಗೆದುಕೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಕ್ಯಾಬಿನೆಟ್ (Framing Cabinet) ವಿಸ್ತರಣೆ ಆಗಲಿದೆ ಎಂಬ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ.
ಅಧಿಕಾರ ಹಂಚಿಕೆಗೆ ಸಿದ್ದರಾಮಯ್ಯ ಆರಂಭದಲ್ಲಿಯೇ ಒಪ್ಪಿಕೊಂಡಿದ್ದರು. ಆದರೆ ಡಿಕೆ ಶಿವಕುಮಾರ್ ಯಾವುದೇ ರೀತಿಯ ಅಧಿಕಾರ ಹಂಚಿಕೆಗೆ ಸಮ್ಮತಿ ಸೂಚಿಸಿರಲಿಲ್ಲ.
ಇದನ್ನೂ ಓದಿ: BS Yediyurappa: ಬಿಎಸ್ವೈ ಬದಿಗಿಟ್ಟಿದ್ದೇ ಬಿಜೆಪಿಗೆ ಮುಳುವಾಯ್ತಾ? 2024 ಚುನಾವಣೆಯಲ್ಲಿ ಮತ್ತೆ ರಾಜಕಾರಣಕ್ಕೆ 'ರಾಜಾಹುಲಿ'?
ಕಾಂಗ್ರೆಸ್ ವಿರುದ್ಧ ಕಟೀಲ್ ವಾಗ್ದಾಳಿ
ಅಧಿಕಾರಕ್ಕಾಗಿ, ಕುರ್ಚಿಗಾಗಿ ದೆಹಲಿಯಲ್ಲಿ ಗಲಾಟೆ ಮಾಡಿಕೊಳ್ಳುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಕಾಂಗ್ರೆಸ್ ಇವತ್ತು ಒಂದು ಗಲಾಟೆಯ ಪಾರ್ಟಿಯಾಗಿ ಮೂಡಿ ಬರುತ್ತಿದೆ. ಒಂದು ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್ ಇಷ್ಟು ತಡ ಮಾಡಿದರೆ ಹೇಗೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ