ಅತ್ತ ಚಳಿಗಾಲದ ಅಧಿವೇಶನ, ಇತ್ತ ಸಿದ್ದರಾಮಯ್ಯ ಸ್ವಕ್ಷೇತ್ರ ಪ್ರವಾಸ; ಕಲಾಪದ ಬಗ್ಗೆ ಯಾಕಿಷ್ಟು ನಿರ್ಲಕ್ಷ್ಯ?

ಬೆಳಗಾವಿ ಅಧಿವೇಶನದಲ್ಲಿ ನೆಪ ಮಾತ್ರಕ್ಕೆ ಕಾಣಿಸಿಕೊಳ್ಳುತ್ತಿದ್ದು, ಕಲಾಪದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ನಿರಾಸಕ್ತಿ ತೋರಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಶಾಸಕಾಂಗ ಪಕ್ಷದ ನಾಯಕರಾಗಿದ್ದುಕೊಂಡು ಅಧಿವೇಶನಕ್ಕೆ ಬಾರದಿರಲು ಕಾರಣವೇನೆಂಬ ಬಗ್ಗೆಯೂ ಚರ್ಚೆಯಾಗುತ್ತಿದೆ.

sushma chakre | news18
Updated:December 18, 2018, 11:50 AM IST
ಅತ್ತ ಚಳಿಗಾಲದ ಅಧಿವೇಶನ, ಇತ್ತ ಸಿದ್ದರಾಮಯ್ಯ ಸ್ವಕ್ಷೇತ್ರ ಪ್ರವಾಸ; ಕಲಾಪದ ಬಗ್ಗೆ ಯಾಕಿಷ್ಟು ನಿರ್ಲಕ್ಷ್ಯ?
ಸಿದ್ದರಾಮಯ್ಯ
sushma chakre | news18
Updated: December 18, 2018, 11:50 AM IST
ಚಿದಾನಂದ ಪಟೇಲ್

ಬಾಗಲಕೋಟೆ (ಡಿ. 18): ಮಾಜಿ ಸಿಎಂ ಸಿದ್ದರಾಮಯ್ಯ ನಾಳೆಯಿಂದ ಎರಡು ದಿನಗಳ ಕಾಲ ಸ್ವಕ್ಷೇತ್ರ ಬದಾಮಿಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅತ್ತ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದರೆ ಇತ್ತ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲಿ ಠಿಕಾಣಿ ಹೂಡಲಿದ್ದಾರೆ.

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾದ ದಿನವೇ ಸಿಂಗಾಪುರ್ ಪ್ರವಾಸಕ್ಕೆ ತೆರಳಿದ್ದ ಸಿದ್ದರಾಮಯ್ಯ ಕಳೆದ ಬುಧವಾರ ರಾತ್ರಿ ಬೆಂಗಳೂರಿಗೆ ಹಿಂತಿರುಗಿದ್ದರು. ಆದರೂ ಗುರುವಾರ ಮತ್ತು ಶುಕ್ರವಾರದ ಅಧಿವೇಶನಕ್ಕೆ ಹಾಜರಾಗದೆ ನಿನ್ನೆ ಅಂದರೆ ಸೋಮವಾರ ಬೆಂಗಳೂರಿನಿಂದ ನೇರವಾಗಿ ಬೆಳಗಾವಿಗೆ ಹೋಗುವುದಾಗಿ ಹೇಳಿದ್ದರು. ಆದರೆ, ನಿನ್ನೆ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭಕ್ಕೆ ತೆರಳಿದ್ದ ಸಿದ್ದರಾಮಯ್ಯ ಸಂಜೆ ಅಧಿವೇಶನದಲ್ಲಿ ಕಾಣಿಸಿಕೊಂಡಿದ್ದರು. ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್​ ಶಾಸಕಾಂಗ ಸಭೆಯೂ ಇರುವುದರಿಂದ ಬೆಳಗ್ಗೆಯೇ ಸುವರ್ಣಸೌಧದಲ್ಲಿ ಕಾಣಿಸಿಕೊಂಡಿದ್ದಾರೆ ಸಿದ್ದರಾಮಯ್ಯ. ಬದಾಮಿ ಪ್ರವಾಸದ ನಂತರ ಶುಕ್ರವಾರ ದೆಹಲಿಗೆ ತೆರಳಲಿದ್ದು, ಸಿದ್ದರಾಮಯ್ಯ ಉದ್ದೇಶಪೂರ್ವಕವಾಗಿಯೇ ಅಧಿವೇಶನವನ್ನು ನಿರ್ಲಕ್ಷಿಸುತ್ತಿದ್ದಾರಾ? ಎಂಬ ಅನುಮಾನಗಳು ಮೂಡತೊಡಗಿವೆ.

ಇದನ್ನೂ ಓದಿ: ಕೆಲವೇ ಕ್ಷಣಗಳಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್​ ಶಾಸಕಾಂಗ ಸಭೆ ಆರಂಭ; ಬೆಂಗಳೂರಿನಲ್ಲೇ ಉಳಿದ ರಾಮಲಿಂಗಾರೆಡ್ಡಿ

ನಿನ್ನೆ ನೆಪ ಮಾತ್ರಕ್ಕೆ ಸಂಜೆಯ ಹೊತ್ತಿಗೆ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಇಂದು ಪೂರ್ತಿ ದಿನ ಕಲಾಪಗಳಲ್ಲಿ ಭಾಗವಹಿಸಲಿದ್ದಾರೆ. ಮತ್ತೆ ನಾಳೆಯಿಂದ 2 ದಿನಗಳ ಕಾಲ ಬದಾಮಿ ಪ್ರವಾಸ ಕೈಗೊಳ್ಳಲಿದ್ದು, ಜಯಂತಿ, ಮೂರ್ತಿ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲಿದ್ದಾರೆ. ನಾಳೆ ಬೆಳಗಾವಿಯಿಂದ ರಸ್ತೆ ಮಾರ್ಗವಾಗಿ ಬದಾಮಿಗೆ ಪ್ರವಾಸ ಕೈಗೊಳ್ಳಲಿರುವ ಸಿದ್ದರಾಮಯ್ಯ ಬೆಳಗ್ಗೆ 10ಕ್ಕೆ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಪಿಎಲ್ ಡಿ ಬ್ಯಾಂಕ್ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 4ಕ್ಕೆ ಪಿಡಿಒಗಳೊಂದಿಗೆ ಸಭೆ ನಡೆಸಲಿದ್ದಾರೆ.

ನಾಳೆ ಬದಾಮಿಯಲ್ಲೇ ವಾಸ್ತವ್ಯ ಹೂಡಲಿರುವ ಸಿದ್ದರಾಮಯ್ಯ ಡಿ. 20ರಂದು ರಾಗಾಪೂರ ಗ್ರಾಮದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 10.30ಕ್ಕೆ ಬೂದಿನಗಡ ಗ್ರಾಮದಲ್ಲಿ ಕನಕದಾಸರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12ಕ್ಕೆ ಪಿಎಲ್ ಡಿ ಬ್ಯಾಂಕ್ ಆವರಣದಲ್ಲಿ ಕನಕ ಜಯಂತಿ ಕಾರ್ಯಕ್ರಮ, ಮಧ್ಯಾಹ್ನ 3ಕ್ಕೆ ಅಧಿಕಾರಿಗಳೊಂದಿಗೆ ಬನಶಂಕರಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಸಭೆ ಮುಗಿಸಿಕೊಂಡು ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಪ್ರಯಾಣ ಮಾಡಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.
Loading...

ಇದನ್ನೂ ಓದಿ: ದತ್ತಾತ್ರೇಯ ಜಯಂತಿಗಿಂತ ಒಳ್ಳೇ ದಿನ ಬೇಕೇನ್ರೀ? ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಮಾಡಿದ ಸಿದ್ದರಾಮಯ್ಯ

ಬಳಿಕ, ಶುಕ್ರವಾರ ಸಂಜೆ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಅಲ್ಲಿಗೆ, ಬೆಳಗಾವಿ ಅಧಿವೇಶನದಲ್ಲಿ ನೆಪ ಮಾತ್ರಕ್ಕೆ ಕಾಣಿಸಿಕೊಳ್ಳುತ್ತಿದ್ದು, ಕಲಾಪದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ನಿರಾಸಕ್ತಿ ತೋರಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಶಾಸಕಾಂಗ ಪಕ್ಷದ ನಾಯಕರಾಗಿದ್ದುಕೊಂಡು ಅಧಿವೇಶನಕ್ಕೆ ಬಾರದಿರಲು ಕಾರಣವೇನೆಂಬ ಬಗ್ಗೆಯೂ ಚರ್ಚೆಯಾಗುತ್ತಿದೆ. ಉತ್ತರಕರ್ನಾಟಕ ಭಾಗದ ಶಾಸಕರಾಗಿರುವ ಸಿದ್ದರಾಮಯ್ಯ ಅವರು ಉತ್ತರದ ಸಮಸ್ಯೆ ಬಗ್ಗೆ ಕಲಾಪದಲ್ಲಿ ಬೆಳಕು ಚೆಲ್ಲದೆ ಕಲಾಪಕ್ಕೆ ಗೈರಾಗಿರುವುದು ಮೈತ್ರಿ ಸರ್ಕಾರದಲ್ಲಿ ಕೆಲವರ ಅಸಮಾಧಾನಕ್ಕೂ ಕಾರಣವಾಗಿದೆ.

First published:December 18, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626