ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಳ್ಳಿ; ಕಟೀಲ್ ವಿರುದ್ಧ ಸಿದ್ದು ಲೇವಡಿ

ಕಟೀಳ್‌ ಅವರೇ, ನಾವು ಮನುಷ್ಯರ ಪರ, ಮನುಷ್ಯವಿರೋಧಿಗಳ ಪರ ಅಲ್ಲ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ, ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ?" ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

  • Share this:
ಬೆಂಗಳೂರು (ಆಗಸ್ಟ್‌ 13); ನಳಿನ್ ಕುಮಾರ್‌ ಕಟೀಳ್ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ? ಅವರು ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು? ಎಂದು ಕಟೀಳ್ ವಿರುದ್ದ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, "ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ?" ಎಂದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಲೇವಡಿ ಮಾಡಿದ್ದಾರೆ.

ಡಿಜೆ ಹಳ್ಳಿ ಗಲಭೆ ಬೆನ್ನಿಗೆ ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಳ್, "ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ದಲಿತರ ಪರವೋ? ಇಲ್ಲ ಭಯೋತ್ಪಾದಕರ ಪರವೋ? ಎಂದು ಪ್ರಶ್ನೆ ಮಾಡಿದ್ದರು.ಈ ಪ್ರಶ್ನೆಗೆ ಇಂದು ಅಷ್ಟೇ ಖಾರವಾಗಿ ಟ್ವೀಟ್‌ ಮೂಲಕ ಕಟೀಳ್‌ ಅವರಿಗೆ ಮರುಪ್ರಶ್ನೆ ಹಾಕಿರುವ ಸಿದ್ದರಾಮಯ್ಯ, "‌ನಳಿನ್ ಕುಮಾರ್‌ ಕಟೀಳ್ ಅವರೇ,  ನೀವು ದಲಿತರ ಪರವೋ? ಹಿಂದೂಗಳ ಪರವೋ? ನೀವೊಬ್ಬ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ? ಅವರು ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು? ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ?" ಎಂದು ಕಿಡಿಕಾರಿದ್ದಾರೆ.ಮತ್ತೊಂದು ಟ್ವೀಟ್‌ನಲ್ಲಿ, "ಕಟೀಳ್‌ ಅವರೇ, ನಾವು ಮನುಷ್ಯರ ಪರ, ಮನುಷ್ಯವಿರೋಧಿಗಳ ಪರ ಅಲ್ಲ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ, ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ?" ಎಂದು ಲೇವಡಿ ಮಾಡಿದ್ದಾರೆ.
Published by:MAshok Kumar
First published: