ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ (Karnataka-Maharashtra Border Issue) ವಿವಾದ ಹಿನ್ನೆಲೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿ ಪ್ರದೇಶಗಳಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡೂ ರಾಜ್ಯಗಳ ಗಡಿ ಪ್ರದೇಶಗಳ ಜನರು ಸರಿಯಾದ ಸಮಯಕ್ಕೆ ಬಸ್ ಸಿಗದೇ (Bus Service) ಸರ್ಕಾರ ಮತ್ತು ರಾಜಕಾರಣಿಗಳ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಹಾರಾಷ್ಟ್ರದಲ್ಲಿಯ ಕಿಡಿಗೇಡಿಗಳು ಕರ್ನಾಟಕ ಬ್ಯಾಂಕ್ (Karnataka Bank), ಬಸ್ಗಳಿಗೆ ಮಸಿ ಬಳಿದು ಪುಂಡಾಟ ಮೆರೆಯುತ್ತಿದ್ದಾರೆ. ಇದರ ಜೊತೆಗೆ ಕರ್ನಾಟಕ ಸರ್ಕಾರದ (Karnataka Government) ವಿರುದ್ಧವೂ ಸಹ ಘೋಷಣೆ ಕೂಗಿದ್ದಾರೆ. ಇದೀಗ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಹಾಗೂ ಗಲಾಟೆ ಸಂಬಂಧ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ (Former CM Siddaramaiah) ಪ್ರತಿಕ್ರಿಯಿಸಿದ್ದು, ರಾಜ್ಯ ಬಿಜೆಪಿ ಸರ್ಕಾರದ (BJP Government) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದಿನ ಪತ್ರಿಕೆಗಳಲ್ಲಿ ಬಿತ್ತರವಾದ ಲೇಖನ ತುಣುಕುಗಳನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿಯ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ ಎಂದು ಆಕ್ರೋಶ ಹೊರ ಹಾಕಿದರು.
ಮಧ್ಯ ಪ್ರವೇಶಿಸಿ ಶಾಂತಿ ಕಾಪಾಡಿ
ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ಶಾಂತಿ ಕಾಪಾಡಬೇಕು ಎಂದು ಆಗ್ರಹಿಸಿದರು.
ಕೇಂದ್ರದ ನೆರವು ಪಡೆಯಲಿ
"ಡಬಲ್ ಎಂಜಿನ್ ಸರ್ಕಾರ" ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಸರ್ಕಾರದ ನೆರವನ್ನು ಪಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: Maharashtra Villages: ನಮ್ಮ ಗ್ರಾಮಗಳನ್ನು ಕರ್ನಾಟಕಕ್ಕೆ ಸೇರಿಸಿ; ಜಿಲ್ಲಾಧಿಕಾರಿಗೆ ಪತ್ರ ಬರೆದ ಗ್ರಾಮಸ್ಥರು
ರೋಗಿಗಳ ಗೋಳು ಕೇಳೋರು ಯಾರು?
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಜಯಪುರ (Vijayapura) ಜಿಲ್ಲೆಯ ರೋಗಿಗಳಿಗೆ ಸಂಕಷ್ಟ ತಂದೊಡ್ಡಿದೆ. ವಿಜಯಪುರದ ಜನರು ಮಹಾರಾಷ್ಟ್ರದ ಮೀರಜ್, ಸಾಂಗ್ಲಿ ಜಿಲ್ಲೆಗೆ ದಿನನಿತ್ಯ 700 ರಿಂದ 800 ಮಂದಿ ಚಿಕಿತ್ಸೆಗಾಗಿ ತೆರಳುತ್ತಿದ್ದರು. ಆದರೆ ಗಡಿ ವಿವಾದದಿಂದಾಗಿ ಬಸ್ ಸಂಪರ್ಕ (Bus Service) ಇಲ್ಲದೇ ರೋಗಿಗಳು ಹೈರಾಣಾಗಿದ್ದಾರೆ.
ಇದೀಗ ವಿಜಯಪುರದಿಂದ ಕಾಗವಾಡಕ್ಕೆ (Kagawada) ಹೋಗಿ, ಅಲ್ಲಿಂದ ಮೀರಜ್ಗೆ (Meeraj) ಹೋಗಬೇಕಾಗಿದೆ. ಅದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಮಾಲೀಕರು (Private Bus Owners) ಹೆಚ್ಚಿನ ಹಣ ಪಡೆಯುತ್ತಿದ್ದಾರೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ಬಸ್ ಬಂದ್ ಆಗಿದ್ದಕ್ಕೆ ಜನರು ನಡೆದುಕೊಂಡೆ ರಾಜ್ಯ ಪ್ರವೇಶ ಮಾಡುತ್ತಿದ್ದಾರೆ.
ಇದನ್ನೂ ಓದಿ: Poster Politics: ನೊಂದ ಗುತ್ತಿಗೆದಾರರು ಪ್ರಾಯೋಜಿಸುವ Guess & Win Contest; ಸಚಿವ ಮುನಿರತ್ನ ವಿರುದ್ಧ ಪೋಸ್ಟರ್ ವಾರ್
ಕರವೇ ಕಾರ್ಯಕರ್ತರ ವಿರುದ್ಧ ದೂರು ದಾಖಲು
ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರ ಮೇಲೆ ದೂರು ದಾಖಲಾಗಿದೆ. 8 ರಿಂದ 12 ಕರವೇ ಕಾರ್ಯಕರ್ತರ ವಿರುದ್ಧ ಹಿರೇಬಾಗೇವಾಡಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ