ಬೆಂಗಳೂರು: ಬೇರೆ ಪಕ್ಷಗಳ ಬಹಳ ಜನ ಶಾಸಕರು (MLAs) ಕಾಂಗ್ರೆಸ್ ಗೆ (Congress) ಸೇರಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ಗೆ ಒಳ್ಳೆಯ ವಾತಾವರಣ ಇದೆ. ಹಾಗಾಗಿ ಹಲವರು ಕಾಂಗ್ರೆಸ್ ಕಡೆ ಮುಖ ಮಾಡುತ್ತಿದ್ದಾರೆ. ಮಂತ್ರಿಯಾಗಿದ್ದ (Minister) ಕೆಲವರು ಕಾಂಗ್ರೆಸ್ ಸೇರುವ ಸಂಭವ ಇದೆ. ಅವನು ನಳಿನ್ ಕುಮಾರ್ ಕಟೀಲ್ (Nalin Kumar Kateel) ಅಧ್ಯಕ್ಷನಾಗಲು ಲಾಯಕ್ಕಲ್ಲ. ಅಭಿವೃದ್ಧಿ (Development) ಚರ್ಚೆ ಬಿಟ್ಟು ಲವ್ ಜಿಹಾದ್ (Love Jihad) ಬಗ್ಗೆ ಮಾತಾಡಿ ಅಂತಾರೆ ಎಂದು ಕಿಡಿಕಾರಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಎಂಎಲ್ಎ ಕೆ.ಎಸ್ ಕಿರಣ್ ಕುಮಾರ್ ಹಾಗೂ ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಯಾದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ, ಡಾ.ಜಿ ಪರಮೇಶ್ವರ್, ಕೆ.ಎಚ್ ಮುನಿಯಪ್ಪ, ಜಮೀರ್ ಅಹ್ಮದ್, ಕೆಎನ್ ರಾಜಣ್ಣ, ಶಾಸಕ ಡಾ.ರಂಗನಾಥ್, ಸಲೀಂ ಅಹ್ಮದ್ ಹಾಗೂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಇಬ್ಬರು ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಧರ್ಮ, ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಆಗ್ತಿದೆ
ಪಕ್ಷ ಸೇರ್ಪಡೆ ಕಾರ್ಯಕ್ರಮ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಗೆ ಒಳ್ಳೆಯ ವಾತಾವರಣ ಇದೆ. ಹಾಗಾಗಿ ಹಲವರು ಕಾಂಗ್ರೆಸ್ ಕಡೆ ಮುಖ ಮಾಡುತ್ತಿದ್ದಾರೆ.
ಬೇರೆ ಪಕ್ಷಗಳ ಬಹಳ ಜನ ಶಾಸಕರು ಕಾಂಗ್ರೆಸ್ ಗೆ ಸೇರಲಿದ್ದಾರೆ. ಜೊತೆಗೆ ಮಂತ್ರಿಯಾಗಿದ್ದ ಕೆಲವರು ಸೇರುವ ಸಂಭವ ಇದೆ. ನಾವು ಬಿಜೆಪಿ ರೀತಿ ಒಳಗೊಂದು ಹೊರಗೊಂದು ಹೇಳುವುದಿಲ್ಲ. ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಧರ್ಮ, ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @rssurjewala, ವಿಪಕ್ಷ ನಾಯಕರಾದ @siddaramaiah ಅವರ ಸಮ್ಮುಖದಲ್ಲಿ
ಚಿಕ್ಕನಾಯಕನಹಳ್ಳಿಯ ಮಾಜಿ ಶಾಸಕರಾದ ಕಿರಣ್ ಕುಮಾರ್, ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್, ತುಮಕೂರು ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕರಾದ ಹೆಚ್. ನಿಂಗಪ್ಪ, ಮಾಜಿ ಜಿ.ಪಂ ಸದಸ್ಯರಾದ ಸುಬ್ರಹ್ಮಣ್ಯ ಅವರು ಕಾಂಗ್ರೆಸ್ ಸೇರ್ಪಡೆಯಾದರು. pic.twitter.com/WQAR1tJwie
— Karnataka Congress (@INCKarnataka) February 20, 2023
ಕೋಮುವಾದಿ ಪಕ್ಷವನ್ನು ಬಿಟ್ಟು ನಮ್ಮ ಪಕ್ಷ ಸೇರ್ಪಡೆಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇದರಿಂದ ನಮಗೆ ಹೆಚ್ಚು ಶಕ್ತಿ ಬಂದಂತೆ ಆಗಿದೆ. ಈಗ ಬಿಜೆಪಿ ಸೇರಿದ ನಾಯಕರಿಗೆ ಅರಿವಾಗಿದೆ. ಬಿಜೆಪಿ ಸೇರಿ ತಪ್ಪು ಮಾಡಿದೆ ಅಂತ ಹೇಳಿ ವಾಪಸ್ ಬಂದಿದ್ದಾರೆ.
ಪಕ್ಷಕ್ಕೆ ಸೇರ್ಪಡೆಯಾಗಿರುವ ನಾಯಕರಿಗೆ ಸ್ವಾಗತ ಮಾಡುತ್ತೇನೆ. ಕೇವಲ ನಾಯಕರು ಮಾತ್ರವಲ್ಲ, ಅನೇಕ ಜನ ಸಾಮಾನ್ಯರು, ಅಭಿಮಾನಿಗಳು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ: Rohini Sindhuri: 'So Madly Beautiful, 8 ಡಿಲಿಟೆಡ್ ಫೋಟೋ ಸೀಕ್ರೆಟ್' -ರೋಹಿಣಿ ವಿರುದ್ಧ ರೂಪಾ ಮತ್ತೊಂದು ಬಾಂಬ್
ಇವರೆಲ್ಲಾ ರಾಜಕೀಯಕ್ಕೆ ನಾಲಾಯಕ್
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿ, ಅವನು ಒಂದು ಪಕ್ಷದ ರಾಜ್ಯಾಧ್ಯಕ್ಷನಾಗಲು ಲಾಯಕ್ಕಲ್ಲ. ಅಭಿವೃದ್ಧಿ ಚರ್ಚೆ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತಾಡಿ ಅಂತಾರೆ, ಇವರೆಲ್ಲಾ ರಾಜಕೀಯಕ್ಕೆ ನಾಲಾಯಕ್. ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದಾಗ ಟಿಪ್ಪು ವರ್ಸಸ್ ಅಬ್ಬಕ್ಕ ಅಂತಾ ಹೇಳಿದ್ದಾರೆ. ಇವರೆಲ್ಲಾ ಸಮಾಜದ ಸಾಮರಸ್ಯ ಕೆಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ