ವಿಪ್ ಅಧಿಕಾರವನ್ನು ಸುಪ್ರೀಂ ಕೋರ್ಟ್ ಸಹ ನಿಷ್ಕ್ರಿಯಗೊಳಿಸಲು ಸಾಧ್ಯವಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ!

ಶಾಸಕರನ್ನು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆಯೇ ವಿನಃ 10ನೇ ಶೆಡ್ಯೂಲ್ ಬಗ್ಗೆ ಎಲ್ಲೂ ಉಲ್ಲೇಖ ಮಾಡಿಲ್ಲ. ಸುಪ್ರೀಂ ಕೋರ್ಟ್ ಸಹ ಸಂವಿಧಾನ ಬದ್ಧವಾಗಿ ನೀಡಲಾಗಿರುವ ಅಧಿಕಾರವನ್ನು ನಿಷ್ಕ್ರಿಯಗೊಳಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ

MAshok Kumar | news18
Updated:July 23, 2019, 1:53 PM IST
ವಿಪ್ ಅಧಿಕಾರವನ್ನು ಸುಪ್ರೀಂ ಕೋರ್ಟ್ ಸಹ ನಿಷ್ಕ್ರಿಯಗೊಳಿಸಲು ಸಾಧ್ಯವಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ!
ಸಿದ್ದರಾಮಯ್ಯ
  • News18
  • Last Updated: July 23, 2019, 1:53 PM IST
  • Share this:
ಬೆಂಗಳೂರು (ಜುಲೈ.23); ಸಂವಿಧಾನದ 10ನೇ ಶೆಡ್ಯೂಲ್ ಅನ್ನು ಸುಪ್ರೀಂ ಕೋರ್ಟ್ ಸಹ ಸಾಯಿಸಲು ಸಾಧ್ಯವಿಲ್ಲ. ಆದರೆ, ಬಿಜೆಪಿ ನಾಯಕರು ಅತೃಪ್ತ ಶಾಸಕರ ದಾರಿ ತಪ್ಪಿಸುತ್ತಿದೆ, ಅವರ ರಾಜಕೀಯ ಭವಿಷ್ಯವನ್ನು ಹಾಳು ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರದ ಸದನದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ರೆಬೆಲ್ ಶಾಸಕರ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖಿಸಿ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, “ಶಾಸಕರನ್ನು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆಯೇ ವಿನಃ 10ನೇ ಶೆಡ್ಯೂಲ್ ಬಗ್ಗೆ ಎಲ್ಲೂ ಉಲ್ಲೇಖ ಮಾಡಿಲ್ಲ. ಸುಪ್ರೀಂ ಕೋರ್ಟ್ ಸಹ ಸಂವಿಧಾನ ಬದ್ಧವಾಗಿ ನೀಡಲಾಗಿರುವ ಅಧಿಕಾರವನ್ನು ನಿಷ್ಕ್ರಿಯಗೊಳಿಸಲು ಸಾಧ್ಯವಿಲ್ಲ.

ಇನ್ನೂ ಸೋಮವಾರ ರೂಲಿಂಗ್ ಕೊಟ್ಟು ಈ ಕುರಿತ ನನ್ನ ಪ್ರಶ್ನೆಗೆ ಉತ್ತರ ನೀಡಿದ ಸ್ಪೀಕರ್ ರಮೇಶ್ ಕುಮಾರ್ ಶಾಸಕಾಂಗ ಪಕ್ಷದ ನಾಯಕನಿಗೆ ವಿಪ್ ನೀಡುವ ಪರಮಾಧಿಕಾರ ಇದೆ ಎಂದು ತಿಳಿಸಿದ್ದಾರೆ. ಹೀಗಾಗಿ ಈಗಲೂ ಅತೃಪ್ತರ ಮೇಲೆ ವಿಪ್ ಕುಣಿಕೆ ಇದೆ. ಅವರ ಶಾಸಕ ಸ್ಥಾನವೇ ಪ್ರಶ್ನಾರ್ಹವಾಗಿದೆ. ಆದರೆ, ಅವರ ದಾರಿ ತಪ್ಪಿಸುತ್ತಿರುವ ಬಿಜೆಪಿ ಅವರ ರಾಜಕೀಯ ಭವಿಷ್ಯವನ್ನೇ ಹಾಳು ಮಾಡುತ್ತಿದೆ ಎಂದು ಖೇದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಸರ್ಕಾರ ಉಳಿಸಿಕೊಳ್ಳುವ ಮೈತ್ರಿ ನಾಯಕರ ಎಲ್ಲಾ ಅಸ್ತ್ರಗಳು ಫೇಲ್; ಇಂದೇ ರಾಜೀನಾಮೆ ಕೊಡಲಿದ್ದಾರೆ ಸಿಎಂ ಹೆಚ್​ಡಿಕೆ?

First published: July 23, 2019, 1:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading