• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Tender Scam: ಟೆಂಡರ್‌ ಹಗರಣಕ್ಕೆ ಸಿಎಂ ಬೊಮ್ಮಾಯಿ ಕಾರಣ, ನಾವು ಕೋರ್ಟ್‌ ಮೊರೆ ಹೋಗುತ್ತೇವೆ: ಸಿದ್ದರಾಮಯ್ಯ

Tender Scam: ಟೆಂಡರ್‌ ಹಗರಣಕ್ಕೆ ಸಿಎಂ ಬೊಮ್ಮಾಯಿ ಕಾರಣ, ನಾವು ಕೋರ್ಟ್‌ ಮೊರೆ ಹೋಗುತ್ತೇವೆ: ಸಿದ್ದರಾಮಯ್ಯ

ಸಿದ್ದರಾಮಯ್ಯ

ಸಿದ್ದರಾಮಯ್ಯ

ಒಂದೇ ದಿನದಲ್ಲಿ 18 ಸಾವಿರ ಕೋಟಿ ರೂಪಾಯಿ ಟೆಂಡರ್ ಆಗಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ಆಗ ತನಿಖಾ ಸಮಿತಿ ರಚನೆ ಮಾಡಿ ಬಿಜೆಪಿ ಸರ್ಕಾರದ ಹಗರಣವನ್ನು ಬಯಲಿಗೆಳೆಯುತ್ತೇವೆ. ಯಾರ ಮೇಲಾದರೂ ಆರೋಪ ಇದ್ದರೆ ಎಲ್ಲವನ್ನೂ ತನಿಖೆಗೆ ನೀಡುತ್ತೇವೆ ಎಂದು ಎಂದು ಹೇಳಿದ್ದಾರೆ.

ಮುಂದೆ ಓದಿ ...
  • Share this:

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ (BJP Govt) ವಿರುದ್ಧ ಕಾಂಗ್ರೆಸ್‌ ನಾಯಕರು (Congress) ಬಹುದೊಡ್ಡ ಆರೋಪ ಮಾಡಿದ್ದು, ರಾಜ್ಯ ಸರ್ಕಾರದ ಅವಧಿ ಮುಗಿಯಲು ಕೆಲವೇ ದಿನಗಳು ಬಾಕಿ ಇರುವ ಹೊತ್ತಿನಲ್ಲಿ ಸಾವಿರಾರು ಕೋಟಿ ಟೆಂಡರ್ ಗೋಲ್‌ಮಾಲ್ (Tender Scam) ಮಾಡಲು ಮುಂದಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರ ಬೆಂಗಳೂರಿನ ನಿವಾಸದಲ್ಲಿ ನಡೆದ ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಟೆಂಡರ್ ಗೋಲ್‌ಮಾಲ್ ವಿರುದ್ಧ ಸಿಡಿದೆದ್ದಿದ್ದಾರೆ.


ಈ ಸಂಬಂಧ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದಿಂದ ಟೆಂಡರ್‌ ಗೋಲ್‌ಮಾಲ್ ನಡೆದಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕಾರಣ. ನಾವು ಈ ಹಗರಣವನ್ನು ಇಲ್ಲಿಗೇ ನಿಲ್ಲಿಸುವುದಿಲ್ಲ. ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಕಿಡಿಕಾರಿದ್ದಾರೆ. ಅಲ್ಲದೇ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಟೆಂಡರ್‌ ಅನ್ನು ರದ್ದು ಮಾಡುತ್ತೇವೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.


ಇದನ್ನೂ ಓದಿ: Tender Scam: ರಾಜ್ಯ ಸರ್ಕಾರದಿಂದ ಸಾವಿರಾರು ಕೋಟಿ ಟೆಂಡರ್‌ ಗೋಲ್‌ಮಾಲ್‌ ನಡೆದಿದೆ! ಕಾಂಗ್ರೆಸ್‌ ಗಂಭೀರ ಆರೋಪ


ಒಂದೇ ದಿನ 18 ಸಾವಿರ ಕೋಟಿ ರೂಪಾಯಿ ಟೆಂಡರ್


ಒಂದೇ ದಿನದಲ್ಲಿ 18 ಸಾವಿರ ಕೋಟಿ ರೂಪಾಯಿ ಟೆಂಡರ್ ಆಗಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ಆಗ ತನಿಖಾ ಸಮಿತಿ ರಚನೆ ಮಾಡಿ ಬಿಜೆಪಿ ಸರ್ಕಾರದ ಹಗರಣವನ್ನು ಬಯಲಿಗೆಳೆಯುತ್ತೇವೆ. ಯಾರ ಮೇಲಾದರೂ ಆರೋಪ ಇದ್ದರೆ ಎಲ್ಲವನ್ನೂ ತನಿಖೆಗೆ ನೀಡುತ್ತೇವೆ ಎಂದು ಎಂದು ಹೇಳಿದ್ದಾರೆ.


ಇದನ್ನೂ ಓದಿ: Siddaramaiah: ಸಿಎಂ ಆಗಿ ಅಂಕಲ್ ಎಂದು ಸಿದ್ದರಾಮಯ್ಯಗೆ ತಾನು ಕೂಡಿಟ್ಟ ₹5000 ದೇಣಿಗೆ ಕೊಟ್ಟ ಪುಟ್ಟ ಬಾಲಕಿ!


ಇನ್ನು ಇದೆಲ್ಲವೂ ಮುಂಬರುವ ವಿಧಾನಸಭಾ ಚುನಾವಣೆಗೆ ಹಣ ಹೊಂದಿಸಲು ಮಾಡಿರುವ ಕೃತ್ಯ ಆಗಿದೆ ಎಂದಿರುವ ಸಿದ್ದರಾಮಯ್ಯ, ಚುನಾವಣೆಗೆ ಆರು ಸಾವಿರ ಕೋಟಿ ರೂಪಾಯಿ ಕೊಡುತ್ತೇವೆ ಎಂದು ಹೇಳುತ್ತಾರೆ. ಇಷ್ಟರ ಮಟ್ಟಿಗೆ ರಾಜ್ಯವನ್ನು ಹಾಳು ಮಾಡಲು ಹೊರಟಿದ್ದಾರೆ. ಬೋರ್ಡ್‌ ಮೀಟಿಂಗ್‌ಗಳೆಲ್ಲ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ನಡೆಯೋದು. ಟೆಂಡರ್ ಮೊತ್ತ ಎಷ್ಟು ಹೆಚ್ಚಿಸಬೇಕು ಎಂದು ಅವರೇ ಹೇಳಿರುತ್ತಾರೆ. ಇದಕ್ಕೆಲ್ಲಾ ಸಿಎಂ ಬೊಮ್ಮಾಯಿ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.


ತರಾತುರಿಯಲ್ಲಿ ಗೋಲ್‌ಮಾಲ್


ಇದಕ್ಕೂ ಮೊದಲು ಮಾತನಾಡಿದ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, 500 ಕೋಟಿ ರೂಪಾಯಿ ಟೆಂಡರ್‌ ಅನ್ನು 1000 ಕೋಟಿ ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಸರ್ಕಾರ ಇನ್ನು ಒಂದು ತಿಂಗಳು ಮಾತ್ರ ಇರುತ್ತೆ. ಬಜೆಟ್ ಸೆಷನ್ ಮುಗಿದ ಮೇಲೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಜಲಸಂಪನ್ಮೂಲ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ ಸೇರಿ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಲ್ಲಿ ಟೆಂಡರ್ ಕರೆಯಲಾಗುತ್ತಿದೆ. ಎಲ್ಲಾ ಟೆಂಡರ್‌ಗಳನ್ನು ಎರಡು ಪಟ್ಟು ಹೆಚ್ಚು ಮೊತ್ತಕ್ಕೆ ಎಸ್ಟಿಮೇಟ್ ಮಾಡುತ್ತಿದ್ದಾರೆ. ಅಲ್ಲದೇ ಏಳು ದಿನ ಮಾತ್ರ ಟೈಂ ಕೊಟ್ಟು, ಗುತ್ತಿಗೆದಾರರನ್ನು ಸೆಟ್ ಮಾಡಲು ಶಾಸಕರಿಗೆ ಹಂಚಿದ್ದಾರೆ. ಬೀದಿಯಲ್ಲಿ ನಿಂತು ಅವರು ಬನ್ನಿ ಇವರು ಬನ್ನಿ ಎಂದು ಕರೆಯುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.ಅಲ್ಲದೇ, ಬಿಡಿಎ ಕಾರಂತ ಬಡಾವಣೆ ಇನ್ನೂ ಹಂಚಿಕೆ ಆಗಿಲ್ಲ. ಆದರೂ ಅಲ್ಲಿ 3 ಸಾವಿರ ಕೋಟಿ ರೂ ಟೆಂಡರ್ ಕರೆದಿದ್ದಾರೆ ಎಂದು ಆರೋಪಿಸಿರುವ ಡಿಕೆ ಶಿವಕುಮಾರ್, ಸರ್ಕಾರದಲ್ಲಿ ಬರೀ ವಸೂಲಿ ಬಾಜಿ ನಡೆಯುತ್ತಿದೆ. ಬೆಂಗಳೂರಿಗೆ ಭ್ರಷ್ಟಾಚಾರದ ರಾಜಧಾನಿ ಅನ್ನೋ ಹೆಸರು ಬಂದಿದೆ. ನಾವು ಇದನ್ನು ಸುಮ್ಮನೆ ಬಿಡುವುದಿಲ್ಲ. ನಾವು ಅಧಿಕಾರಕ್ಕೆ ಬರುವುದು ನಿಶ್ಚಿತ. ಆಗ ಎಲ್ಲವನ್ನೂ ರದ್ದು ಮಾಡುತ್ತೇವೆ. ಅಧಿಕಾರಿಗಳು, ಗುತ್ತಿಗೆದಾರರು, ರಾಜಕಾರಣಿಗಳನ್ನು ಬಿಡುವುದಿಲ್ಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published by:Avinash K
First published: