Kannada: ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ: ಸಿದ್ದರಾಮಯ್ಯ

ಸಿ.ಟಿ. ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ.

ಸಿದ್ದರಾಮಯ್ಯ

ಸಿದ್ದರಾಮಯ್ಯ

  • Share this:
ಸ್ಟಾರ್ ನಟರಾದ ಸುದೀಪ್ (Sudeep) ಮತ್ತು ಅಜಯ್ ದೇವಗನ್ (Ajay Devgn) ನಡುವಿನ ಟ್ವೀಟ್ ವಾರ್ ಮತ್ತೊಂದು ಮಜಲು ಪಡೆದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿಗಳಾದ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಅವರು ಸುದೀಪ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಆದ್ರೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ರೆ, ಸಚಿವ ಮುರುಗೇಶ್ ನಿರಾಣಿ (Murugesh Nirani) ಮತ್ತು ಸಂಸದ ರಮೇಶ್ ಜಿಗಜಿಣಗಿ (Ramesh Jigajinagi) ಹಿಂದಿ (Hindi) ರಾಷ್ಟ್ರ ಭಾಷೆ ಎಂದು ಹೇಳುವ ರಾಜ್ಯ ವಿರೋಧಿ ಹೇಳಿಕೆ ನೀಡಿದ್ದಾರೆ. ಇಂದು ಟ್ವೀಟ್ ಮಾಡಿರುವ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Former CM Siddaramaiah) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಮ್ಮಿಂದೊಮ್ಮೆಲೇ ಬಿಜೆಪಿಯ ರಾಷ್ಟ್ರ-ರಾಜ್ಯ ನಾಯಕರೆಲ್ಲರೂ ಗುಂಪು ಕಟ್ಟಿಕೊಂಡು ಕನ್ನಡವನ್ನು ಧಿಕ್ಕರಿಸಿ ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರವಣಿಗೆ ಮಾಡಲು ಹೊರಟಿರುವುದನ್ನು 'ಸಾಂಸ್ಕೃತಿಕ  ಭಯೋತ್ಪಾದನೆ' ಎನ್ನದೆ ಬೇರೇನು ಹೇಳಲು ಸಾಧ್ಯ ಎಂದು ಕಿಡಿಕಾರಿದ್ದಾರೆ.

ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ.  ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ. ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು  "ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ... ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು.

ಮಾತೃ ಭಾಷೆಗೆ ಮೊದಲ ಪೂಜೆ

ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು. ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ. ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ.

ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ. ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ.

ಇದನ್ನೂ ಓದಿ:  Murugesh Nirani: ಕನ್ನಡ ಪ್ರಾದೇಶಿಕ ಭಾಷೆಯಾದ್ರೆ, ಹಿಂದಿ ರಾಷ್ಟ್ರೀಯ ಭಾಷೆ: ಸಚಿವ ಮುರುಗೇಶ್ ನಿರಾಣಿ

ದೆಹಲಿ ದೊರೆಗಳ ಓಲೈಸಲು ಈ ಹೇಳಿಕೆ

ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ. ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ

ಸಿ.ಟಿ. ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ.

ಅಮಿತ್ ಶಾ ಅವರ ಗುಲಾಮರಾಗಬೇಡಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ. ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಷಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ.



ಬಿಜೆಪಿ ನಾಯಕರದ್ದು ಕುತಂತ್ರದ ರಾಜಕಾರಣವನ್ನು

ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ,‌‌ ಅಪ್ಪಿಕೊಂಡ ಪಕ್ಷ.  ಒಂದು ಧರ್ಮ,‌ ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ‌ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ.

ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ.

ಇದನ್ನೂ ಓದಿ:  Ramesh Jigajinagi: ಸ್ಟೋರ್ ಕೀಪರ್​​ ಆಗಿದ್ದ ಗೋವಿಂದ್ ಕಾರಜೋಳರನ್ನ ಬೆಳೆಸಿದ್ದು ನಾನೇ; ರಮೇಶ್​ ಜಿಗಜಿಣಗಿ

ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ.
Published by:Mahmadrafik K
First published: