• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • CT Ravi: 'ಸಿ ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ಹೋದರೂ ಮಠಾಧೀಶರ ಮೌನ' -ಮಾಜಿ ಸಿಎಂ ಸಿದ್ದರಾಮಯ್ಯ ಅಚ್ಚರಿ

CT Ravi: 'ಸಿ ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ಹೋದರೂ ಮಠಾಧೀಶರ ಮೌನ' -ಮಾಜಿ ಸಿಎಂ ಸಿದ್ದರಾಮಯ್ಯ ಅಚ್ಚರಿ

ಸಿ.ಟಿ ರವಿ/ಸಿದ್ದರಾಮಯ್ಯ

ಸಿ.ಟಿ ರವಿ/ಸಿದ್ದರಾಮಯ್ಯ

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮುಂದೆ ಓದಿ ...
 • News18 Kannada
 • 5-MIN READ
 • Last Updated :
 • Bangalore [Bangalore], India
 • Share this:

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಮಾಂಸ ತಿಂದು (Non-Veg) ದೇವರ ದರ್ಶನ ಮಾಡಿದರಾ ಎನ್ನುವ ಪ್ರಶ್ನೆ ಸದ್ಯ ರಾಜಕೀಯ ನಾಯಕರ ನಡುವಿನ ವಾಗ್ದಾಳಿಗೆ ಕಾರಣವಾಗಿದೆ. ಫೆಬ್ರವರಿ 19ರ ಭಾನುವಾರದಂದು ಉತ್ತರ ಕನ್ನಡ ಜಿಲ್ಲೆಗೆ (Uttara Kannada) ಸಿ.ಟಿ ರವಿ ಭೇಟಿ ನೀಡಿದ್ದರು. ಈ ವೇಳೆ ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಸಿ.ಟಿ ರವಿ ಬಾಡೂಟ ಸೇವಿಸಿದ್ದರು. ಬಾಡೂಟ ಸವಿದು ಭಟ್ಕಳ ನಗರದ (Bhatkal) ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ (Hanuman Temple) ಭೇಟಿ ನೀಡಿದ್ದಾರೆ ಅಂತ ಸಾಮಾಜಿಕ ಜಾಲತಾಣದಲ್ಲಿ (Social Media) ಪೋಟೋಗಳು ವೈರಲ್ ಆಗಿವೆ.


ಈ ಬಗ್ಗೆ ಸರಣಿ ಟ್ವೀಟ್​ ಮಾಡಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿ.ಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ. ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿ.ಟಿ ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ.
ಇದನ್ನೂ ಓದಿ: SiddaraMaiah: ಸಿ ಟಿ ರವಿ ವಿರುದ್ಧ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದ ಆರೋಪ; ದ್ವೇಷ ಬಿಟ್ಟು ರವಿ ಪರ ನಿಂತ ಸಿದ್ದರಾಮಯ್ಯ!


ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ


ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ. ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ.
ಮತ್ತೊಮ್ಮೆ ಸಿ.ಟಿ ರವಿ ಸ್ಪಷ್ಟನೆ


ವಿವಾದದ ಕುರಿತಂತೆ ನಿನ್ನೆಯೇ ಸ್ಪಷ್ಟನೆ ನೀಡಿದ್ದ ಸಿ.ಟಿ ರವಿ ಅವರು ಇಂದು ಬೆಂಗಳೂರಿನಲ್ಲಿ ಮತ್ತೊಮ್ಮೆ ಈ ಬಗ್ಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ್ದಾರೆ. ನಾನು ಮಾಂಸ ತಿಂದಿದ್ದು ನಿಜ. ಆದರೆ ದೇವಸ್ಥಾನದ ಒಳಗೆ ಹೋಗಿಲ್ಲ ಎಂದು ಹೇಳಿದ್ದಾರೆ. ದೇವಾಲಯದ ರಸ್ತೆಯಲ್ಲಿ ನಿಂತು ಕೈ ಮುಗಿದಿದ್ದೇನೆ. ಸುಳ್ಳು ಹೇಳುವುದು ನನ್ನ ಜಾಯಮಾನ ಅಲ್ಲ. ಮಾಂಸಹಾರ ನೈವೇದ್ಯ ಇಡುವ ದೇವಾಲಯಗಳು ಇವೆ. ಇದು ಕಾಂಗ್ರೆಸಿಗರಿಗೇ ಅರ್ಥ ಆಗದಿರುವುದು ದುರ್ದೈವ ಎಂದು ಸಿಟಿ ರವಿ ಕಿಡಿಕಾರಿದ್ದಾರೆ. ಆದರೆ ಸಿಟಿ ರವಿ ಅವರ ವಾದ ಹಸಿ ಹಸಿ ಸುಳ್ಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ತಿರುಗೇಟು ಕೊಟ್ಟಿದ್ದಾರೆ.ಇದನ್ನೂ ಓದಿ: Rohini Sindhuri Vs D Roopa: ರೂಪಾಗೆ ಸಿಂಧೂರಿ ನೋಟಿಸ್, 1 ಕೋಟಿ ಮಾನನಷ್ಟ ಮೊಕದ್ದಮೆ ಎಚ್ಚರಿಕೆ!


ಇನ್ನು, ಈ ಬಗ್ಗೆ ನಿನ್ನೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, ಮಾಂಸಾಹಾರ ತಿಂದು ಸಿಟಿ ರವಿ ದೇವಸ್ಥಾನಕ್ಕೆ ಹೋಗಿರೋ ವಿವಾದಕ್ಕೆ ಬಾಗಲಕೋಟೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದರು. ದೇವಸ್ಥಾನಕ್ಕೆ ಹೋಗೋದು, ದೇವಸ್ಥಾನಕ್ಕೆ ಹೋಗದೆ ಇರುವುದು. ಮಾಂಸ ತಿನ್ನೋದು, ಮಾಂಸ ತಿನ್ನದೆ ಇರುವುದು ಅದು ಇಷ್ಯುಗಳೇ ಅಲ್ಲ. ಭೂತದ ಬಾಯಲ್ಲಿ ಭಗವದ್ಗೀತೆ ಅನ್ನೋದು ಜನರಿಗೆ ಗೊತ್ತಾಗಿದೆ ಎಂದರು.

Published by:Sumanth SN
First published: