ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ; ಬಿ.ಎಲ್. ಸಂತೋಷ್‌ಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ರಾಜ್ಯದಲ್ಲಿ ನಿಮ್ಮದೇ ಪಕ್ಷ‌ ಅಧಿಕಾರದಲ್ಲಿರುವಾಗ ಒಬ್ಬ ದಲಿತ ಶಾಸಕನ ಮನೆಗೆ ರಕ್ಷಣೆ ನೀಡಲು ನಿಮಗೆ ಸಾಧ್ಯವಾಗಿಲ್ಲ, ಇನ್ನು ಕೋಟ್ಯಂತರ ಸಂಖ್ಯೆಯ ಬಡ-ಅಸಹಾಯಕ ದಲಿತರ ಮನೆಗಳಿಗೆ ರಕ್ಷಣೆ ನೀಡಲು ಹೇಗೆ ಸಾಧ್ಯ? ಇದು ತಲೆತಗ್ಗಿಸುವಂತಹ ವೈಫಲ್ಯ ಎಂದು ನಿಮಗನಿಸುವುದಿಲ್ಲವೇ? ಎಂದು ಸಿದ್ದರಾಮಯ್ಯ ಬಿಎಲ್ ಸಂತೋಷ್ ವಿರುದ್ಧ ಕಿಡಿಕಾರಿದ್ದಾರೆ.

news18-kannada
Updated:August 13, 2020, 8:35 PM IST
ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ; ಬಿ.ಎಲ್. ಸಂತೋಷ್‌ಗೆ ಟಾಂಗ್ ನೀಡಿದ ಸಿದ್ದರಾಮಯ್ಯ
ಸಿದ್ದರಾಮಯ್ಯ.
  • Share this:
ಬೆಂಗಳೂರು (ಆಗಸ್ಟ್‌ 13); ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ. ಸತ್ತ ದನದ ಚರ್ಮ ಸುಲಿದಿದ್ದಕ್ಕೆ, ಗೋಮಾಂಸ ತಿಂದಿದ್ದಕ್ಕೆ, ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ, ಕುದುರೆ ಏರಿದ್ದಕ್ಕೆ, ಮೀಸೆ ಬಿಟ್ಟಿದ್ದಕ್ಕೆ,  ದಲಿತರ ಬೆನ್ನತ್ತಿ ಹಿಂಸಿಸಿ, ಸಾಯಿಸಿದ್ದು ಯಾರ ಆಡಳಿತದಲ್ಲಿ ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಬಿ.ಎಲ್.‌ ಸಂತೋಷ್‌ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆಮಂಗಳವಾರ ತಡರಾತ್ರಿ ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ್‌ ಅವರ ಮನೆಗೆ ಕೆಲವು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಹೀಗಾಗಿ ಪರಿಸ್ಥಿತಿ ಕೈಮೀರಿತ್ತು. ಆದರೆ, ಈ ಕುರಿತು ಟ್ವೀಟ್ ಮಾಡಿದ್ದ ಬಿಜೆಪಿ ನಾಯಕ ಬಿ.ಎಲ್‌. ಸಂತೋಷ್‌, "ದಲಿತ ಶಾಸಕನ ಮನೆಗೆ ಬೆಂಕಿ ಬಿದ್ದರೂ ಕಾಂಗ್ರೆಸ್‌ ನಾಯಕರು ಮೌನ ಸಾಧಿಸಿದ್ದಾರೆ" ಎಂದು ಕೆಣಕಿದ್ದರು.
ಈ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಬಿ.ಎಲ್‌. ಸಂತೋಷ್‌ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದಿರುವ ಸಿದ್ದರಾಮಯ್ಯ, "ಬಿಎಲ್‌ ಸಂತೋಷಷ ಅವರು 'ಹಿಂದುತ್ವ'ದ ಜಪ ನಿಲ್ಲಿಸಿ 'ದಲಿತ' ಜಪ ಶುರು ಮಾಡಿದ್ದಾರೆ. 'ಹಿಂದು-ಒಂದು' ಎಂದು ಭಜನೆ ಮಾಡ್ತೀರಿ, ಜಾತಿ ಮೂಲದ ತಾರತಮ್ಯ,ಶೋಷಣೆಗಳ ಜೊತೆ ಗುದ್ದಾಡಿ, ದಲಿತರೊಬ್ಬರು ಶಾಸಕರಾದರೂ ಅವರನ್ನು ದಲಿತರೆಂದು ಹಂಗಿಸುತ್ತೀರಿ. ನಿಮ್ಮನ್ನು ಕೂಡಾ ನಿಮ್ಮ ಜಾತಿಯಿಂದಲೇ ಕರೆಯೋಣವೇ?


"ರಾಜ್ಯದಲ್ಲಿ ನಿಮ್ಮದೇ ಪಕ್ಷ‌ ಅಧಿಕಾರದಲ್ಲಿರುವಾಗ ಒಬ್ಬ ದಲಿತ ಶಾಸಕನ ಮನೆಗೆ ರಕ್ಷಣೆ ನೀಡಲು ನಿಮಗೆ ಸಾಧ್ಯವಾಗಿಲ್ಲ, ಇನ್ನು ಕೋಟ್ಯಂತರ ಸಂಖ್ಯೆಯ ಬಡ-ಅಸಹಾಯಕ ದಲಿತರ ಮನೆಗಳಿಗೆ ರಕ್ಷಣೆ ನೀಡಲು ಹೇಗೆ ಸಾಧ್ಯ? ಇದು ತಲೆತಗ್ಗಿಸುವಂತಹ ವೈಫಲ್ಯ ಎಂದು ನಿಮಗನಿಸುವುದಿಲ್ಲವೇ?.ಸಂತೋಷ್‌ ಅವರೇ ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ. ಸತ್ತ ದನದ ಚರ್ಮ ಸುಲಿದಿದ್ದಕ್ಕೆ, ಗೋಮಾಂಸ ತಿಂದಿದ್ದಕ್ಕೆ, ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ, ಕುದುರೆ ಏರಿದ್ದಕ್ಕೆ, ಮೀಸೆ ಬಿಟ್ಟಿದ್ದಕ್ಕೆ... ದಲಿತರ ಬೆನ್ನತ್ತಿ ಹಿಂಸಿಸಿ, ಸಾಯಿಸಿದ್ದು ಯಾರ ಆಡಳಿತದಲ್ಲಿ?

ಇದನ್ನೂ ಓದಿ : ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಳ್ಳಿ; ಕಟೀಲ್ ವಿರುದ್ಧ ಸಿದ್ದು ಲೇವಡಿ
ದಲಿತರು ನಾಯಿಗಳೆಂದು ತುಚ್ಛೀಕರಿಸಿದವರು, ಮೀಸಲಾತಿಯನ್ನು ವಿರೋಧಿಸುತ್ತಿರುವವರು, ಸಂವಿಧಾನವನ್ನು ಬದಲಾಯಿಸಬೇಕೆನ್ನುವವರು, ಡಾ.ಅಂಬೇಡ್ಕರ್ ಅವರನ್ನು ಅವಮಾನಿಸುವವರು ಯಾವ ಪಕ್ಷದವರು? ಇಂತಹ ಮನುಷ್ಯ ವಿರೋಧಿಗಳ ವಿರುದ್ಧ ನಿಮ್ಮ ಪಕ್ಷವೇನಾದರೂ ಕ್ರಮ ಕೈಗೊಂಡಿದೆಯೇ?.......

ನಿಮ್ಮ ಕಾಲದಲ್ಲಿ ದಲಿತರ ಹತ್ಯೆ/ದೌರ್ಜನ್ಯ ದುಪ್ಪಟ್ಟಾಗಿದೆ ಎಂದು @NCRBHQ ವರದಿ ಹೇಳುತ್ತಿದೆ. ಹೀಗಿದ್ದರೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯಿದೆಯನ್ನು ದುರ್ಬಲಗೊಳಿಸುವ ಹುನ್ನಾರ ನಡೆಸುತ್ತೀರಿ. ಇದು ನಿಮ್ಮ ದಲಿತರ ಮೇಲಿನ ಕಾಳಜಿಯಲ್ಲವೇ?" ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

"ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಎಸ್‌ಸಿ ಪಿ-ಟಿಎಸ್‌ಪಿ ಯೋಜನೆಗೆ ನೀಡಿದ್ದ ಹಣ ರೂ.22,161 ಕೋಟಿ ಮಾತ್ರ. ನಮ್ಮ ಸರ್ಕಾರದ 5 ವರ್ಷಗಳಲ್ಲಿ ನೀಡಿದ್ದ ಹಣ ರೂ.88, 395 ಕೋಟಿ. ನರೇಂದ್ರ ಮೋದಿ ಅವರಿಗೆ ಹೇಳಿ ಈ ಯೋಜನೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರ್ತೀರಾ? ದಿವಂಗತ ಬಂಗಾರು ಲಕ್ಷ್ಮಣ್ ಅವರನ್ನು ನಿಮ್ಮ ಪಕ್ಷದ ಏಕೈಕ ಭ್ರಷ್ಟನೆಂಬ ರೀತಿಯಲ್ಲಿ ಬಲಿಗೊಟ್ಟಿದ್ದು ಯಾರು‌? ಎಂದು ಕೆಣಕಿರುವ ಸಿದ್ದರಾಮಯ್ಯ, ದಲಿತರು ಜಾಗೃತರಾಗಿದ್ದಾರೆ, ಹಿತೈಷಿಗಳು ಯಾರು? ಹಿತಶತ್ರುಗಳು ಯಾರು ಎನ್ನುವುದು ಅವರಿಗೆ ಗೊತ್ತಿದೆ. ಉರಿಯುವ ಮನೆಯಲ್ಲಿ ಗಳ ಇರಿಯುವ ಕೆಲಸ ಮಾಡಬೇಡಿ" ಎಂದು ತಾಕೀತು ಮಾಡಿದ್ದಾರೆ.
Published by: MAshok Kumar
First published: August 13, 2020, 7:59 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading