• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Siddaramaiah: ಶೋಭಾ ಕರಂದ್ಲಾಜೆಯನ್ನು ವಿಚಾರಣೆಗೊಳಪಡಿಸಿ ಚುನಾವಣಾ ಪ್ರಚಾರದಿಂದ ನಿಷೇಧಿಸಿ: ಸಿದ್ದರಾಮಯ್ಯ ಆಕ್ರೋಶ

Siddaramaiah: ಶೋಭಾ ಕರಂದ್ಲಾಜೆಯನ್ನು ವಿಚಾರಣೆಗೊಳಪಡಿಸಿ ಚುನಾವಣಾ ಪ್ರಚಾರದಿಂದ ನಿಷೇಧಿಸಿ: ಸಿದ್ದರಾಮಯ್ಯ ಆಕ್ರೋಶ

ಸಿದ್ದರಾಮಯ್ಯ & ಶೋಭಾ ಕರಂದ್ಲಾಜೆ

ಸಿದ್ದರಾಮಯ್ಯ & ಶೋಭಾ ಕರಂದ್ಲಾಜೆ

ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯ ಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ ಅಥವಾ ಭಾರತೀಯ ಜನತಾ ಪಕ್ಷವೋ (BJP) ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಯಾವ ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು ಅತೀಸೂಕ್ಷ್ಮ  ಎಂದು ಘೋಷಿಸಬೇಕು (Election Commission) ಮತ್ತು ಎಲ್ಲಿಗೆ ಹೆಚ್ಚು ಎಂಬ ಪಟ್ಟಿಯನ್ನು ಕೂಡಲೇ ನೀಡುವಂತೆ ಬಿಜೆಪಿ ಪಕ್ಷದ ಜಿಲ್ಲಾ ಮುಖಂಡರಿಗೆ ರಾಜ್ಯ ಬಿಜೆಪಿಯ ಚುನಾವಣಾ ಉಸ್ತುವಾರಿ ಶೋಭಾ ಕರಂದ್ಲಾಜೆ ಅವರು ಪತ್ರ ಬರೆದಿರುವ ಹಿನ್ನೆಲೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿ ಪ್ರಶ್ನಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಅಥವಾ ಭಾರತೀಯ ಜನತಾ ಪಕ್ಷವೋ? ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: Narendra Modi Conversation: ರಾಜ್ಯದ 50 ಲಕ್ಷ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಾದ; ಪಕ್ಷದಲ್ಲಿ ತುಂಬಿದ ಉತ್ಸಾಹ


ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌ ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಿ ಮತದಾರರನ್ನು ಬೆದರಿಸಿ ಅವರು ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: Karnataka Election 2023: ಈ ಬಾರಿ ಬಿಜೆಪಿ 150 ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೆ: ನಳಿನ್ ಕುಮಾರ್ ಕಟೀಲ್‌


ಇನ್ನು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಶಾಮೀಲಾಗುರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ, ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯ ಪ್ರವೇಶಿಸಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

top videos



    ಅಲ್ಲದೇ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಅವರು ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

    First published: