‘ಬೆಂಬಲ ಬೆಲೆ ಏರಿಕೆ ಮಾಡಿ‘ - ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಸಿಎಂ ಸಿದ್ದರಾಮಯ್ಯ

ಇತ್ತೀಚೆಗಷ್ಟೇ ಮುಂದಿನ ಮೂರು ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಇದಕ್ಕಾಗಿ ಬಜೆಟ್​ನಲ್ಲಿ ರೈತರಿಗೆ ಉತ್ಪಾದನಾ ವೆಚ್ಚವನ್ನು 1.5ರಷ್ಟು ಬೆಲೆ ನೀಡುವುದಾಗಿ ಭರವಸೆ ನೀಡಿದ್ದೀರಿ. ಆದರೀಗ, ಕೇಂದ್ರ ಸರ್ಕಾರ 17 ಬೆಳೆಗಳಿಗೆ ಘೋಷಣೆ ಮಾಡಿರುವ ಬೆಂಬಲ ಬೆಲೆ ಇದಕ್ಕೆ ಪೂರಕವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

news18-kannada
Updated:June 8, 2020, 3:43 PM IST
‘ಬೆಂಬಲ ಬೆಲೆ ಏರಿಕೆ ಮಾಡಿ‘ - ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯ.
  • Share this:
ಬೆಂಗಳೂರು(ಜೂ.08): ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸು ಮೇರೆಗೆ ಪ್ರಧಾನಿ ನರೇದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದಿಸಿರುವ 17 ಬೆಳೆಗಳ ಬೆಂಬಲ ಬೆಲೆ ಸರಿಯಾಗಿಲ್ಲ. ಹೀಗಾಗಿ ಕೂಡಲೇ ಈ ನಿರ್ಧಾರ ಪರಿಶೀಲಿಸಿ ಬೆಂಬಲ ಬೆಲೆ ಏರಿಕೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರಕ್ಕೆ ಆಗ್ರಹಿಸಿದ್ದಾರೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಅನುಮೋದಿಸಿರುವ ಬೆಂಬಲ ಬೆಲೆಯನ್ನು ಮತ್ತೊಮ್ಮೆ ಪರಿಶೀಲಿಸಬೇಕು. ಕಷಿ ವೆಚ್ಚ ಮತ್ತು ಬೆಲೆ ಆಯೋಗ(ಸಿಎಪಿಸಿ) ತಕ್ಕಂತೆ ಮಾನದಂಡ ಅನುಸರಿಸಿ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ಧಾರೆ.

ಇತ್ತೀಚೆಗಷ್ಟೇ ಮುಂದಿನ ಮೂರು ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಇದಕ್ಕಾಗಿ ಬಜೆಟ್​ನಲ್ಲಿ ರೈತರಿಗೆ ಉತ್ಪಾದನಾ ವೆಚ್ಚವನ್ನು 1.5ರಷ್ಟು ಬೆಲೆ ನೀಡುವುದಾಗಿ ಭರವಸೆ ನೀಡಿದ್ದೀರಿ. ಆದರೀಗ, ಕೇಂದ್ರ ಸರ್ಕಾರ 17 ಬೆಳೆಗಳಿಗೆ ಘೋಷಣೆ ಮಾಡಿರುವ ಬೆಂಬಲ ಬೆಲೆ ಇದಕ್ಕೆ ಪೂರಕವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: Reliance Jio-ADIA Deal: ಜಿಯೋದಲ್ಲಿ 5,683 ಕೋಟಿ ರೂ. ಹೂಡಿಕೆ ಮಾಡಿದ್ದ ADIA ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಸಂಗತಿಗಳು

ಈಗ ಕೇಂದ್ರ ಸರ್ಕಾರ ನಿಗದಿ ಮಾಡಿರುವಷ್ಟೇ ಬೆಲೆಯಷ್ಟೇ ಬೆಳೆಗಳನ್ನು ಬೆಳೆಯಲು ಉತ್ಪಾದನಾ ವೆಚ್ಚ ಬೇಕಾಗುತ್ತದೆ. ಇದರಿಂದ ರೈತರಿಗೆ ಏನೂ ಲಾಭವಾಗುವುದಿಲ್ಲ. ಹೀಗಾಗಿ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಮನವಿ ಪತ್ರದಲ್ಲಿ ಉಲ್ಲೇಖ ಮಾಡಿದ್ದರು.
First published: June 8, 2020, 3:41 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading