ನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಿ; ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಪತ್ರ

ಕಳೆದ ತಿಂಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆ ಸುರಿದು ಪ್ರವಾಹ ಸೃಷ್ಟಿಯಾಗಿ ಸಾಕಷ್ಟು ಹಾನಿ ಉಂಟು ಮಾಡಿದೆ. ನೆರೆಯಿಂದಾಗಿ ಸಾವಿರಾರು ಜನರು ತಮ್ಮ ಮನೆ, ಮಠ, ಜಾನುವಾರು, ಬೆಳೆ ಎಲ್ಲವನ್ನು ಕಳೆದುಕೊಂಡು ಬೀದಿ ಪಾಲಾಗಿದ್ದಾರೆ.

ಸಿಎಂ ಬೊಮ್ಮಾಯಿ - ಸಿದ್ದರಾಮಯ್ಯ

ಸಿಎಂ ಬೊಮ್ಮಾಯಿ - ಸಿದ್ದರಾಮಯ್ಯ

 • Share this:
  ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ನೆರೆ ವಿಚಾರ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ನೆರೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳ ಎಲ್ಲಾ ಸಂತ್ರಸ್ತರಿಗೆ ಈ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಹಾಗೂ ಪ್ರವಾಹದಿಂದ ಹಾನಿಗೆ ಒಳಗಾದ ರಸ್ತೆ, ಸೇತುವೆ ಕಾಮಗಾರಿ ನಡೆಸುವಂತೆ ಒತ್ತಾಯಿಸಿ ಎರಡು ಪುಟ್ಟಗಳ ಪತ್ರ ಬರೆದಿದ್ದಾರೆ.

  ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಖುದ್ದಾಗಿ ಭೇಟಿ ನೀಡಿದೆ. ಭಾರಿ ಪ್ರಮಾಣದ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ತೀವ್ರ ಸ್ವರೂಪದ ಅನಾಹುತಗಳು ಸೃಷ್ಟಿಯಾಗಿದೆ. ಸಹಸ್ರಾರು ಜನರು ಭಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಹಾರ, ಬಟ್ಟೆ, ಸೇರಿದಂತೆ ಅಗತ್ಯವಿರುವ ವಸ್ತುಗಳನ್ನು ತಕ್ಷಣವೇ ಜನರಿಗೆ ತಲುಪಿಸಿ. ಹಿಂದೆ ಮಾಡಿದಂತೆ ಈ ಭಾರಿ ಮಾಡಬೇಡಿ. 2019 ಮತ್ತು 2020 ರಲ್ಲಿ ಹಾನಿಗೊಳಗಾದ ಪ್ರದೇಶಗಳ ಜನರಿಗೆ ಇದುವರೆಗೂ ಸಮರ್ಪಕ ಪರಿಹಾರ ಸಿಕ್ಕಿಲ್ಲ. ಈ ನಡುವೆ ಕೋವಿಡ್-19 ಮತ್ತು ಲಾಕ್‌ಡೌನ್ ಕಾರಣದಿಂದ ಜನರು ಈಗಾಗಲೇ ವಿಪರೀತ ಸಂಕಷ್ಟದಲ್ಲಿದ್ದಾರೆ. 2019-20ರಲ್ಲೂ ನೆರೆಗೆ ತುತ್ತಾಗಿದ್ದ ಪ್ರದೇಶಗಳ ಸಾಕಷ್ಟು ಜನರೇ ಈ ಬಾರಿಯೂ ಪ್ರವಾಹಕ್ಕೂ ಸಿಲುಕಿದ್ದಾರೆ. ಹಿಂದಿನ ಅವಧಿಗಳಲ್ಲಿ ಸರ್ಕಾರ ಕೊಟ್ಟ ಪರಿಹಾರ “ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ” ಎನ್ನುವಂತಾಗಿದೆ.  ಮತ್ತೊಂದು ಕಡೆ 3 ವರ್ಷಗಳಿಂದ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿರುವ ಪ್ರವಾಹ ಪರಿಹಾರದ ಮೊತ್ತ ರಾಜ್ಯಕ್ಕೆ ಅವಮಾನ ಮಾಡಿದಂತಿದೆ. ಈ ಕೂಡಲೇ ನೀವು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ರಾಜ್ಯಕ್ಕೆ ನ್ಯಾಯೋಚಿತ ಪರಿಹಾರ ಬಿಡುಗಡೆ ಮಾಡಿಸಬೇಕೆಂದು ಸಿದ್ದರಾಮಯ್ಯ ಅವರು ಪತ್ರದ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯ ಮಾಡಿದ್ದಾರೆ.

  2019ರಲ್ಲಿ ಪ್ರವಾಹ ಬಂದಾಗ ಆಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮೊದಲು ಮನೆ ಕಳೆದುಕೊಂಡವರಿಗೆ ಪರಿಹಾರ ಘೋಷಿಸಿದ್ದರು. ಸರ್ಕಾರ ಈ ಹಿಂದೆ ಘೋಷಿಸಿದ್ದಂತೆ ಮನೆ ಕಳೆದುಕೊಂಡು ಬಾಡಿಗೆ ಮನೆಯಲ್ಲಿ ಇರುವವರಿಗೆ ಬಾಡಿಗೆ ಹಣ ಬಿಡುಗಡೆ ಮಾಡಿಲ್ಲ. ಪ್ರತಿ ತಿಂಗಳು ಹತ್ತು ಸಾವಿರ ರೂಪಾಯಿ ನೀಡುತ್ತೇವೆ ಎಂದು ಹೇಳಿದ್ದೂ ಸುಳ್ಳಾಗಿದೆ. ಸಂಪೂರ್ಣ ಮನೆ ಕಳೆದುಕೊಂಡವರಿಗೆ ಹತ್ತು ಲಕ್ಷ ರೂಪಾಯಿ, ಭಾಗಶಃ ಮನೆ ಹಾನಿಯಾದವರಿಗೆ ಮೂರು ಲಕ್ಷ ರೂಪಾಯಿ, ಸ್ವಲ್ಪ ಹಾನಿಯಾದರೆ ಐವತ್ತು ಸಾವಿರದಿಂದ ಒಂದು ಲಕ್ಷ ಕೊಡುವುದಾಗಿ ಹೇಳಿದ್ದರು. ಆದರೆ, ಮನೆ ಕಳೆದುಕೊಂಡ ಯಾರೊಬ್ಬರಿಗೂ ಈವರೆಗೂ ಯಾವ ಪರಿಹಾರದ ಹಣವೂ ಸಿಕ್ಕಿಲ್ಲ. ಅಧಿಕಾರಿಗಳು ಸತ್ಯ ಹೇಳುತ್ತಿಲ್ಲ ಎಂದು ಪ್ರವಾಹ ಪೀಡಿತ ಪ್ರದೇಶಗೋಳ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

  ಇದನ್ನು ಓದಿ: ಖಾಲಿ ಇರುವ ನಾಲ್ಕು ಸಚಿವ ಸ್ಥಾನಕ್ಕಾಗಿ ಎರಡು ಡಜನ್‍ಗೂ ಅಧಿಕ ಶಾಸಕರಿಂದ ಭಾರೀ ಲಾಬಿ

  ಕಳೆದ ತಿಂಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆ ಸುರಿದು ಪ್ರವಾಹ ಸೃಷ್ಟಿಯಾಗಿ ಸಾಕಷ್ಟು ಹಾನಿ ಉಂಟು ಮಾಡಿದೆ. ನೆರೆಯಿಂದಾಗಿ ಸಾವಿರಾರು ಜನರು ತಮ್ಮ ಮನೆ, ಮಠ, ಜಾನುವಾರು, ಬೆಳೆ ಎಲ್ಲವನ್ನು ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಹೀಗಾಗಿ ನೆರೆ ಸಂತ್ರಸ್ತರ ನೆರವಿಗೆ ಶೀಘ್ರ ಧಾವಿಸಬೇಕು ಎಂದು ಸಿದ್ದರಾಮಯ್ಯ ಅವರು ಪತ್ರದ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
  Published by:HR Ramesh
  First published: