ಬೆಂಗಳೂರು(ಜೂ.18): "ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತದ ಮೇಲೆ ಚೀನಾ ನಡೆಸಿದ ದಾಳಿಯಲ್ಲಿ ದೇಶದ ಯೋಧರು ಹುತಾತ್ಮರಾಗಿದ್ಧಾರೆ. ಯೋಧರ ಶೌರ್ಯ, ತ್ಯಾಗ, ಬಲಿದಾನ ಸ್ಮರಣೀಯ. ಹುತಾತ್ಮ ಯೋಧರ ಆತ್ಮಕ್ಕೆ ನಾವು ಶಾಂತಿ ಕೋರೋಣ. ನಮ್ಮ ಸೇನೆ ಅತ್ಯಂತ ಶಕ್ತಿಶಾಲಿಯಾಗಿದೆ" ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಭಾರತ ಮತ್ತು ಚೀನಾ ಮಧ್ಯೆ ಈ ರೀತಿ ಸಂಘರ್ಷ ನಡೆಯುತ್ತಿದ್ದೆ. ಆದರೆ, ಗಡಿಯಲ್ಲಿನ ವಿದ್ಯಮಾನಗಳ ಬಗ್ಗೆ ಮಾತ್ರ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿಯವರ ಮೌನ ಸರಿಯಲ್ಲ ಎಂದರು.
ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಟಿದೆ. ಇದು ಮುಂದೆ ಕರಾಳ ಶಾಸನವಾಗಲಿದೆ. ಪಕ್ಷ ಮೊದಲಿನಿಂದಲೂ ಗೇಣಿದಾರರನ್ನು ರಕ್ಷಿಸಿಕೊಂಡು ಬಂದಿತ್ತು. ಇದರ ವಿರುದ್ಧ ರಾಜ್ಯವ್ಯಾಪಿ ಹೋರಾಟ ಅನಿವಾರ್ಯ. ಇದಕ್ಕೆ ಶಾಸಕರು ಸಿದ್ಧತೆ ಮಾಡಿಕೊಳ್ಳಬೇಕು ಎಂದರು ಸೂಚನೆ ನೀಡಿದರು.
ಇದನ್ನೂ ಓದಿ: ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಭಾರತಕ್ಕೆ 9ನೇ ಸ್ಥಾನ - ವಿಶ್ವಸಂಸ್ಥೆ ವರದಿ
ಪೆಟ್ರೋಲ್, ಡೀಸೆಲ್ ಬೆಲೆ ನಿತ್ಯ ಏರಿಕೆಯಾಗುತ್ತಿದೆ. ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿದಿದೆ. ಲೀಟರ್ ಗೆ 25-30 ರೂ. ಇರಬೇಕಿತ್ತು. ಆದರೆ, ಕೇಂದ್ರ ಸರ್ಕಾರ ದರ ಏರಿಕೆ ಮಾಡಿದೆ. ಈ ಮೂಲಕ ಮಧ್ಯಮ ವರ್ಗದವರನ್ನು ಬಲಿ ಹಾಕಲು ಹೊರಟಿದೆ ಎಂದು ಕುಟುಕಿದರು.
ಕೇಂದ್ರ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಪ್ರಧಾನಿ ಜನರ ಆರೋಗ್ಯ ಹಾಳು ಮಾಡ್ತಿದ್ದಾರೆ. ಜೈಲ್ ಭರೋ ಚಳವಳಿ ನಡೆಸೋಣ. ಡಿ.ಕೆ ಶಿವಕುಮಾರ್ ಪದಗ್ರಹಣಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 2 ರಂದು ಪದಗ್ರಹಣಕ್ಕೆ ಸಿದ್ಧತೆ ನಡೆಯುತ್ತಿದೆ. ಶಾಸಕರು ತಮ್ಮ ಕ್ಷೇತ್ರಗಳಲ್ಲಿ ತಯಾರಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ