ಬೆಂಗಳೂರು: ರೌಡಿಶೀಟರ್ ಸೈಲೆಂಟ್ ಸುನೀಲ್ (Rowdy Sheeter Silent Sunil) ಆಯೋಜನೆಯ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರು (BJP Leaders) ಭಾಗಿಯಾಗಿರುವ ಸುದ್ದಿ ರಾಷ್ಟ್ರಮಟ್ಟದಲ್ಲಿಯೂ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಸಾಲು ಸಾಲು ಟ್ವೀಟ್ (Congress Tweet) ಮೂಲಕ ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಇದೀಗ ಡ್ಯಾಮೇಜ್ ಕಂಟ್ರೋಲ್ಗೆ ಬಿಜೆಪಿ ಮುಂದಾಗಿದ್ದು, ಸೈಲೆಂಟ್ ಸುನೀಲ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (BJP State President Nalin Kumar Kateel) ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿದ್ದಾರೆ. ಸೈಲೆಂಟ್ ಸುನೀಲ್ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ಸೈಲೆಂಟ್ ಸುನೀಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಸೂಚಿಸಿದ್ದಾರೆ.
ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡಿದ್ದ ಬಿಜೆಪಿ ನಾಯಕರ ಬಗ್ಗೆ ಹೈಕಮಾಂಡ್ ವರದಿ ಕೇಳಿದೆ ಎನ್ನಲಾಗಿದೆ. ರಾಜ್ಯದ ನಾಯಕರ ಮೇಲೂ ಬಿಜೆಪಿ ವರಿಷ್ಠರು ಸಹ ಗರಂ ಆಗಿದ್ದಾರಂತೆ. ಈ ಎಲ್ಲಾ ಕಾರಣದಿಂದಾಗಿ ಸ್ಪಷ್ಟನೆ ನೀಡಿ, ಮುಜುಗರದಿಂದ ಪಾರಾಗುವ ಪ್ರಯತ್ನವನ್ನು ರಾಜ್ಯ ಬಿಜೆಪಿ ಮಾಡಿದೆ.
ಫೈಟರ್ ರವಿ ಸೇರ್ಪಡೆ ಬಗ್ಗೆ ಏನು ಹೇಳದ ಬಿಜೆಪಿ
ಬಿಜೆಪಿ ನಾಯಕರು ಕೇವಲ ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೊಂಡಿದ್ದರು. ಆದ್ರೆ ಸೈಲೆಂಟ್ ಸುನೀಲ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಆಗಿರಲಿಲ್ಲ. ಆದ್ರೆ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿರುವ ಫೈಟರ್ ರವಿ ಬಗ್ಗೆ ಬಿಜೆಪಿ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.
ಇದನ್ನೂ ಓದಿ: Silent Sunil and Fighter Ravi: ಸೈಲೆಂಟ್ ಆಗಿಯೇ ಸದ್ದು ಮಾಡುತ್ತಿರುವ ಸುನೀಲ ಯಾರು? ಫೈಟರ್ ರವಿ ಇತಿಹಾಸ ನಿಮಗೆ ಗೊತ್ತಾ?
ಈತನ ಮೂಲ ಹೆಸರು ಸುನೀಲ್ ಕುಮಾರ್. ರೌಡಿಸಂಗೆ ಬರುತ್ತಿದ್ದಂತೆ ಸೈಲೆಂಟ್ ಸುನೀಲ ಅಂತಾನೆ ಕುಖ್ಯಾತಿ ಪಡೆದ. ನೀವು ನಂಬಲ್ಲ, ಈತ ಬಾಲಾಪರಾಧಿ ಆದ ಮೇಲೆ ಕೇವಲ 20 ವರ್ಷದ ಆಸುಪಾಸಲ್ಲೇ ಈತನ ಮೇಲೆ ರೌಡಿಶೀಟ್ ತೆರೆಯಲಾಗಿತ್ತು.
ಇದನ್ನೂ ಓದಿ: Bettanagere Shankara: ನೆಟೋರಿಯಸ್ ರೌಡಿ ಬೆತ್ತನಗೆರೆ ಶಂಕರ ಪಾಲಿಟಿಕ್ಸ್ಗೆ ಎಂಟ್ರಿ? BJP ನಾಯಕರ ಜೊತೆ ಸುತ್ತಾಟ
ಜೈಲುವಾಸ ಅನುಭವಿಸಿದ ಬಳಿಕ ಪ್ರಕಾಶ್ ನಗರದ ಕುಖ್ಯಾತ ರೌಡಿ ಶೀಟರ್ ಗಳಾದ ನಾಗರಾಜ, ಒಂಟೆ ಮತ್ತು ಪ್ರಸಾದಿ ಎಂಬುವರ ಗುಂಪಿಗೆ ಸುನೀಲ್ ಸೇರಿಕೊಳ್ಳುತ್ತಾನೆ. ಬಸವೇಶ್ವರ ನಗರದ ಪೊಲೀಸ್ ಒಬ್ಬರ ಮೇಲೆ ಅಟ್ಯಾಕ್ ಮಾಡಿದ ಆರೋಪದಲ್ಲಿ ಮತ್ತೆ ಅಂದರ್ ಆಗುತ್ತಾನೆ. ಅಲ್ಲಿಂದ ಒಂದೊಂದೇ ಪ್ರಕರಣದಲ್ಲಿ ಈತನ ಹೆಸರು ಕೇಳುತ್ತಾ ಬರುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ